೧೦ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ

| Published : Nov 21 2024, 01:03 AM IST

೧೦ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಡಿ.೨ರಂದು ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅವಿಸ್ಮರಣೀಯವಾಗಿ ಮಾಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲ ಕನ್ನಡದ ಮನಸ್ಸುಗಳು ತನು-ಮನ-ಧನದಿಂದ ಸಹಕಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಸಹಕಾರ ನೀಡುವ ಅಗತ್ಯವಿದೆ ಎಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ:

ತಾಲೂಕಿನ ಇವಣಗಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಡಿ.೨ರಂದು ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅವಿಸ್ಮರಣೀಯವಾಗಿ ಮಾಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲ ಕನ್ನಡದ ಮನಸ್ಸುಗಳು ತನು-ಮನ-ಧನದಿಂದ ಸಹಕಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಸಹಕಾರ ನೀಡುವ ಅಗತ್ಯವಿದೆ ಎಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆ ಕುರಿತು ನಡೆದ ವಿವಿಧ ಇಲಾಖೆಯ ಅಧಿಕಾರಿಗಳ, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ, ಗಣ್ಯರ ಸಭೆಯಲ್ಲಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚನೆ ಮಾಡುವ ಮೂಲಕ ಸಮ್ಮೇಳನವು ಅಚ್ಚುಕಟ್ಟಾಗಿ ನಡೆಯುವಂತೆ ಕನ್ನಡ ಸಾಹಿತ್ಯ ಪರಿಷತ್ತು ಗಮನ ಹರಿಸಬೇಕು. ಸಮಿತಿಗಳಿಗೆ ವಹಿಸುವ ಜವಾಬ್ದಾರಿಯನ್ನು ಸಮಿತಿಯಲ್ಲಿನ ಸದಸ್ಯರು ನಿರ್ವಹಿಸಬೇಕು. ಸಮ್ಮೇಳನಕ್ಕೆ ಹತ್ತು ದಿನಗಳ ಮಾತ್ರ ಬಾಕಿಯಿವೆ. ಸಮ್ಮೇಳನದ ತಯಾರಿ ಭರದಿಂದ ಸಾಗಬೇಕಿದ್ದು, ಪ್ರತಿಯೊಬ್ಬ ನೌಕರ ಬಾಂಧವರು ಸಮ್ಮೇಳನಕ್ಕೆ ಧನಸಹಾಯ ನೀಡುವ ಮೂಲಕ ಸಮ್ಮೇಳನದ ಯಶಸ್ಸಿಗೆ ಸಹಕಾರ ನೀಡಬೇಕು. ಎಲ್ಲ ಇಲಾಖೆಯ ಅಧಿಕಾರಿಗಳು ಸಮ್ಮೇಳನಕ್ಕೆ ಸಹಕಾರ ನೀಡುವಂತೆ ಕೋರಿದರು.ತಾಪಂ ಇಒ ಪ್ರಕಾಶ ದೇಸಾಯಿ ಮಾತನಾಡಿ, ಇವಣಗಿ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯಿತಿಯಿಂದ ಇಡೀ ಗ್ರಾಮದ ಸ್ವಚ್ಛತೆ ಮಾಡಿಸುವುದು ಸೇರಿದಂತೆ ಅಗತ್ಯ ನೆರವು ಸಮ್ಮೇಳನಕ್ಕೆ ನೀಡಲಾಗುವದು. ವಿವಿಧ ಗ್ರಾಮ ಪಂಚಾಯಿತಿಗಳಿಂದ ಸಾಧ್ಯವಾದಷ್ಟು ಸಮ್ಮೇಳನಕ್ಕೆ ಸಹಕಾರ ನೀಡುವ ಭರವಸೆ ನೀಡಿದರು.ಬಿಇಒ ವಸಂತ ರಾಠೋಡ ಮಾತನಾಡಿ, ಶಿಕ್ಷಣ ಇಲಾಖೆಯಿಂದ ಸಮ್ಮೇಳನದ ಯಶಸ್ಸಿಗೆ ಬೇಕಾದ ಸಹಕಾರ ನೀಡಲಾಗುವುದು. ಸಮ್ಮೇಳನದ ದಿನ ಪಟ್ಟಣದಿಂದ ವಿವಿಧ ಶಾಲೆಗಳ ಬಸ್ ನೆರವು ಪಡೆದು ಸಮ್ಮೇಳನಕ್ಕೆ ಬರುವ ಜನರಿಗೆ ವಾಹನದ ವ್ಯವಸ್ಥೆ ಕಲ್ಪಿಸಲಾಗುವದು ಎಂದು ತಿಳಿಸಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಡೋಣೂರ ಮಾತನಾಡಿ, ಇವಣಗಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ತಾಲೂಕು ಸಮ್ಮೇಳನದ ಯಶಸ್ಸಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ತುಂಬಾ ಸಹಕಾರ ನೀಡುವ ಅಗತ್ಯವಿದೆ. ಸಮ್ಮೇಳನದ ಯಶಸ್ಸಿಗೆ ಗ್ರಾಮಸ್ಥರು ಸೇರಿದಂತೆ ತಾಲೂಕಿನ ಸಮಸ್ತ ಕನ್ನಡ ಮನಸ್ಸುಗಳ ಸಹಕಾರ ನೀಡುವಂತೆ ಮನವಿ ಮಾಡಿದರು.ಸಭೆಯಲ್ಲಿ ಮನಗೂಳಿ ಪುರಸಭೆ ಮುಖ್ಯಾಧಿಕಾರಿ ಎಸ್.ಐ.ರೇವೂರಕರ, ರವಿ ರಾಠೋಡ, ಅಶೋಕ ಚಲವಾದಿ, ಪರಶುರಾಮ ದಿಂಡವಾರ, ಶಿವಾನಂದ ಮಂಗಾನವರ, ಅರವಿಂದ ಸಾಲವಾಡಗಿ ಇತರರು ಮಾತನಾಡಿದರು.ಸಭೆಯಲ್ಲಿ ಪಿಎಸ್‌ಐ ಎಂ.ಆರ್‌.ಕಂಚಗಾರ, ತೋಟಗಾರಿಕೆ ಇಲಾಖೆಯ ಸಿ.ಬಿ.ಪಾಟೀಲ, ಕೃಷಿ ಇಲಾಖೆಯ ಎಂ.ಎಚ್.ಯರಝರಿ, ಪಶು ಇಲಾಖೆಯ ಡಾ.ಎಸ್.ಬಿ.ಕರಜಗಿ, ಆರೋಗ್ಯ ಇಲಾಖೆಯ ಎಸ್.ಎಸ್.ಮೇಟಿ, ರೇಷ್ಮೆ ಇಲಾಖೆಯ ಎಸ್.ಐ.ಗೋಲಗೊಂಡ, ಹಿಂದುಳಿದ ವರ್ಗಗಳ ಇಲಾಖೆಯ ಸಿ.ಜಿ.ಬಿರಾದಾರ, ಪುರಸಭೆ ಮುಖ್ಯಾಧಿಕಾರಿ ಅಪ್ರೋಜ್ ಪಟೇಲ, ಖಜಾನೆ ಇಲಾಖೆಯ ಎಂ.ಆರ್‌.ಪಾಟೀಲ, ಕೆ.ಜಿ.ಚವ್ಹಾಣ, ಮಂಜು ಹಳ್ಳೂರ, ಎ.ಎ.ಸಾಂಗ್ಲಿ, ಕಸಾಪ ಪದಾಧಿಕಾರಿಗಳಾದ ಬಸವರಾಜ ಮೇಟಿ, ಯಮನಪ್ಪ ಮಿಣಜಗಿ, ಶಿವಪುತ್ರ ಅಂಕದ, ಪ್ರಕಾಶ ಬೆಣ್ಣೂರ, ಇವಣಗಿ ಗ್ರಾಮದ ಸಿ.ಆರ್.ಸುಬಾನಪ್ಪನವರ, ಪರಸಪ್ಪ ಕಳ್ಳಿಗುಡ್ಡ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಅಶೋಕ ಗುಡದಿನ್ನಿ, ಮಹಾಂತೇಶ ಚಕ್ರವರ್ತಿ, ವಿವೇಕಾನಂದ ಕಲ್ಯಾಣಶೆಟ್ಟಿ, ಗೋಪಾಲ ಲಮಾಣಿ, ಮುತ್ತು ಬಿದರಿ ಇತರರು ಇದ್ದರು. ಬಿ.ವ್ಹಿ.ಚಕ್ರಮನಿ ಸ್ವಾಗತಿಸಿದರು. ಶಿವು ಮಡಿಕೇಶ್ವರ ನಿರೂಪಿಸಿದರು. ಎಂ.ಬಿ.ತೋಟದ ವಂದಿಸಿದರು.