ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಡಿ.25 ರಿಂದ ನಾಲ್ಕು ದಿನಗಳ ಕಾಲ ಖ್ಯಾತ ವೈದ್ಯ ದಿ. ಡಾ. ಸಿ. ಜಯರಾಮರಾವ್ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ಡಾ.ಪುನೀತ್ ರಾಜ್ ಕಪ್ ರಾಜ್ಯಮಟ್ಚದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ವೇದಿಕೆ ಹಾಗೂ ಪ್ರೇಕ್ಷಕರ ವೀಕ್ಷಣೆಯ ಗ್ಯಾಲರಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ, ತುಮಕೂರುನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಡಿ.25 ರಿಂದ ನಾಲ್ಕು ದಿನಗಳ ಕಾಲ ಖ್ಯಾತ ವೈದ್ಯ ದಿ. ಡಾ. ಸಿ. ಜಯರಾಮರಾವ್ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ಡಾ.ಪುನೀತ್ ರಾಜ್ ಕಪ್ ರಾಜ್ಯಮಟ್ಚದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ವೇದಿಕೆ ಹಾಗೂ ಪ್ರೇಕ್ಷಕರ ವೀಕ್ಷಣೆಯ ಗ್ಯಾಲರಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಭೂಮಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷಎಎಚ್.ಎನ್. ದೀಪಕ್ ಅವರು, ಡಿ. 25, 26, 27 ಮತ್ತು 28 ರಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಈ ಪಂದ್ಯಾವಳಿ ಆಯೋಜಿಸಲಾಗಿದೆ. ಈ ಟೂರ್ನಿಯಲ್ಲಿ ಉಡುಪಿ, ಮಂಗಳೂರು, ಕಾರವಾರ, ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಸುಮಾರು ೧೬ ತಂಡಗಳು ಭಾಗವಹಿಸಲಿವೆ ಎಂದು ಹೇಳಿದರು.ತುಮಕೂರಿನ ಇತಿಹಾಸದಲ್ಲಿ ಪ್ರಥಮ ಎಂಬಂತೆ ಈ ಕ್ರಿಕೆಟ್ ಪಂದ್ಯಾವಳಿಯ ವಿಜೇತವಾದ ತಂಡಕ್ಕೆ ಪ್ರಥಮ ಬಹುಮಾನ 5 ಲಕ್ಷ ರು. ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 2.50 ಲಕ್ಷ ರು. ನಗದು ಮತ್ತು ಆಕರ್ಷಕ ಟ್ರೋಫಿ, ತೃತೀಯ ಮತ್ತು 4ನೇ ಬಹುಮಾನ 50 ಸಾವಿರ ರೂ. ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು ಎಂದರು.ಇದರೊಂದಿಗೆ ಪಂದ್ಯ ಪುರುಷೋತ್ತಮ, ಸರಣಿ ಪುರುಷೋತ್ತಮ, ಉತ್ತಮ ಬೌಲರ್ ಹಾಗೂ ಉತ್ತಮ ಕೀಪರ್ ಈ ರೀತಿಯ ವಿಶೇಷ ಬಹುಮಾನವನ್ನು ಕ್ರೀಡಾಪಟುಗಳಿಗೆ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಅವರು ಹೇಳಿದರು.ಕ್ರಿಕೆಟ್ ಪಂದ್ಯಾವಳಿಯನ್ನು ವೀಕ್ಷಕರು ಹಾಗೂ ಕ್ರಿಕೆಟ್ ಪ್ರೇಮಿಗಳು ಕುಳಿತು ವೀಕ್ಷಣೆ ಮಾಡಲು ಕ್ರೀಡಾಂಗಣದಲ್ಲಿ ಉತ್ತಮ ಗ್ಯಾಲರಿ ನಿರ್ಮಾಣ ಮಾಡಲಾಗುತ್ತಿದೆ. ಹಾಗಾಗಿ ಎಲ್ಲಾ ಪ್ರೇಕ್ಷಕರು ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಿಸಬಹುದು. ಜತೆಗೆ ಮಹಿಳೆಯರಿಗೆ ಪ್ರತ್ಯೇಕವಾಗಿ ಗ್ಯಾಲರಿ ನಿರ್ಮಾಣ ಮಾಡಲಾಗಿದೆ ಎಂದರು. ಖ್ಯಾತ ಚಲನಚಿತ್ರ ನಟ ದುನಿಯ ವಿಜಯ್ ಅವರು ಈ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಅವರ ತಂಡ ಸಹ ಈ ಟೂರ್ನಿಯಲ್ಲಿ ಭಾಗವಹಿಲಿ ಆಡಲಿದೆ ಎಂದು ಅವರು ತಿಳಿಸಿದರು. ನಗರದಲ್ಲಿ ವಿಶೇಷವಾಗಿ ರಾಜ್ಯಮಟ್ಟದ ಈ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು, ಈ ಕ್ರೀಡಾಕೂಟ ಯಶಸ್ವಿಗೆ ನಗರದ ಎಲ್ಲಾ ಜನರ ಸಹಕಾರ ಅಗತ್ಯ. ಹಾಗೆಯೇ ಡಾ. ಜಯರಾಮ್ ರವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕ್ರೀಡಾಕೂಟವನ್ನು ವೀಕ್ಷಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಹೇಶ್ ಪಿಯು ಕಾಲೇಜು ಅಧ್ಯಕ್ಷರಾದ ಶಶಿಧರ್, ಶಂಕರ್, ಪ್ರಕಾಶ್, ಕಾರ್ಯದರ್ಶಿ ರಂಜನ್, ಅರವಿಂದ್, ಮಹೇಶ್, ಅಭಿಷೇಕ್, ಪ್ರವೀಣ್, ಹರೀಶ್, ಮಂಜು ಚೇತನ್ ಮತ್ತಿತರರು ಉಪಸ್ಥಿತರಿದ್ದರು.