ಸಾರಾಂಶ
ತುಂಗಭದ್ರಾ ನದಿಗೆ ಆರತಿ ಮಹೋತ್ಸವ ಹಮ್ಮಿಕೊಳ್ಳುವ ಜತೆಗೆ ತುಂಬಿ ಹರಿಯುತ್ತಿರುವ ನದಿಗೆ ಬಾಗಿನ ಅರ್ಪಿಸಲಾಗುತ್ತಿದೆ. ಇದನ್ನು ಹುಲಿಗೆಮ್ಮ ದೇವಸ್ಥಾನ ಪ್ರಾಧಿಕಾರದ ವತಿಯಿಂದಲೇ ಹಮ್ಮಿಕೊಂಡಿರುವುದು ವಿಶೇಷವಾಗಿದೆ.
ಕೊಪ್ಪಳ:
ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ತುಂಗಭದ್ರಾ ಆರತಿ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.ತುಂಗಭದ್ರಾ ನದಿಗೆ ಆರತಿ ಮಹೋತ್ಸವ ಹಮ್ಮಿಕೊಳ್ಳುವ ಜತೆಗೆ ತುಂಬಿ ಹರಿಯುತ್ತಿರುವ ನದಿಗೆ ಬಾಗಿನ ಅರ್ಪಿಸಲಾಗುತ್ತಿದೆ. ಇದನ್ನು ಹುಲಿಗೆಮ್ಮ ದೇವಸ್ಥಾನ ಪ್ರಾಧಿಕಾರದ ವತಿಯಿಂದಲೇ ಹಮ್ಮಿಕೊಂಡಿರುವುದು ವಿಶೇಷವಾಗಿದೆ.
ಇಂದಿನಿಂದ ಕಾರ್ಯಕ್ರಮ:ತುಂಗಭದ್ರಾ ಆರತಿ ಮಹೋತ್ಸವ ನಿಮಿತ್ತ ಆ. 24ರಂದು ಹುಲಿಗೆಮ್ಮ ದೇವಸ್ಥಾನದಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ಗಣಪತಿ ಹೋಮ ನಡೆಯುತ್ತದೆ.
ಆ. 25ರಂದು ಶ್ರೀ ಮೃತ್ಯುಂಜಯ ಹೋಮ ಬೆಳಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ಹುಲಿಗೆಮ್ಮ ದೇವಸ್ಥಾನದಲ್ಲಿ ನಡೆಯಲಿದೆ. ಆ. 26ರಂದು ಬೆಳಗ್ಗೆ 8ರಿಂದ 12.30ರ ವರೆಗೂ ಚಂಡಿಕಾ ಹೋಮ, ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ, ಸಂಜೆ 4ಕ್ಕೆ ಮಹಿಳೆಯರಿಂದ ಕುಂಭ ಮೆರವಣಿಗೆ, ಸಂಜೆ 5.30ಕ್ಕೆ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಸಂಜೆ 6ಕ್ಕೆ ತುಂಗಭದ್ರಾ ನದಿ ದಡದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನಂತರ ತುಂಗಭದ್ರಾ ಆರತಿ ಮಹೋತ್ಸವ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿವೆ.ಗಣ್ಯರಿಗೆ ಖುದ್ದು ಆಹ್ವಾನ:
ಹುಲಿಗೆಮ್ಮ ದೇವಸ್ಥಾನ ಸಮಿತಿ ವತಿಯಿಂದ ಜಿಲ್ಲೆಯ ಗಣ್ಯರು ಹಾಗೂ ಸ್ವಾಮೀಜಿಗಳಿಗೂ ಆಹ್ವಾನ ನೀಡಲಾಗಿದೆ. ಮೊದಲ ಬಾರಿಗೆ ಹಮ್ಮಿಕೊಂಡಿರುವ ತುಂಗಭದ್ರಾ ಆರತಿ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರುವ ಸಾಧ್ಯತೆ ಇದೆ.ಹುಲಿಗೆಮ್ಮ ದೇವಸ್ಥಾನ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ತುಂಗಭದ್ರಾ ಆರತಿ ಮಹೋತ್ಸವ ಹಮ್ಮಿಕೊಂಡಿದ್ದು, ಭಕ್ತರು ಅಪಾರ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.