ಚಿಕ್ಕಮಗಳೂರುನಗರದಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಇಂದಾವರ ಬಡಾವಣೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಎಂಟು ಎಕರೆ ಜಾಗ ಮೀಸಲಿಡಲಾಗಿದೆ. ಬಡಾವಣೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಜಾಗವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಹಸ್ತಾಂತರಿಸಿ, ಆದಷ್ಟು ಶೀಘ್ರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

- ಶಾಸಕ ಎಚ್.ಡಿ.ತಮ್ಮಯ್ಯ ಮಾಹಿತಿ । ಚಿಕ್ಕಮಗಳೂರು ಪ್ರೀಮಿಯರ್ ಲೀಗ್ (ಸಿಪಿಎಲ್) ವೈಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುನಗರದಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಇಂದಾವರ ಬಡಾವಣೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಎಂಟು ಎಕರೆ ಜಾಗ ಮೀಸಲಿಡಲಾಗಿದೆ. ಬಡಾವಣೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಜಾಗವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಹಸ್ತಾಂತರಿಸಿ, ಆದಷ್ಟು ಶೀಘ್ರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.ನಗರದ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸೋಮವಾರ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ದಿವಂಗತ ಮಾತೃಶ್ರೀ ಗೌರಮ್ಮ ಬಸವೇಗೌಡ ಅವರ ಸ್ಮರಣಾರ್ಥ ಆಯೋಜಿಸಿರುವ ಚಿಕ್ಕಮಗಳೂರು ಪ್ರೀಮಿಯರ್ ಲೀಗ್ (ಸಿಪಿಎಲ್) ವೈಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್-2026 ಉದ್ಘಾಟಿಸಿ ಮಾತನಾಡಿದರು.ಇಂದಾವರದಲ್ಲಿ 8 ಎಕರೆ ಜಾಗ ಮೀಸಲಿಟ್ಟಿರುವುದು ಜಿಲ್ಲೆಯ ಕ್ರಿಕೆಟ್ ಕ್ರೀಡಾಪಟುಗಳಿಗೆ ಉತ್ತಮ ಅವಕಾಶವಾಗಲಿದೆ. ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದಿಂದ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ತರಬೇತಿ ಹಾಗೂ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಅನುಕೂಲ. ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದರು.ಕಳೆದ ನಾಲ್ಕೂವರೆ ವರ್ಷಗಳಿಂದ ಸ್ಥಗಿತಗೊಂಡಿದ್ದ ನಗರದ ಶತಮಾನೋತ್ಸವ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಗೂ ಮರುಚಾಲನೆ ನೀಡಲಾಗಿದೆ. ಖೇಲೋ ಇಂಡಿಯಾ ಯೋಜನೆಯಡಿ ಬಿಡುಗಡೆಯಾಗಿದ್ದ ಅನುದಾನದ ಜತೆಗೆ ಹೆಚ್ಚುವರಿ ಅನುದಾನ ಹೊಂದಿಸಿ ಕಾಮಗಾರಿ ಕೈಗೊಳ್ಳಲಾಗಿದೆ. ಜನವರಿ 26ರ ಗಣರಾಜ್ಯೋತ್ಸವದ ವೇಳೆಗೆ ಕ್ರೀಡಾಂಗಣ ಉದ್ಘಾಟಿ ಸುವ ಗುರಿ ಹೊಂದಿದ್ದು, ಅನಿವಾರ್ಯ ಕಾರಣಗಳಿಂದ ವಿಳಂಬವಾದರೆ ಜನವರಿ 27ರಂದು ಲೋಕಾರ್ಪಣೆ ಗೊಳಿಸಲಾಗುವುದು ಎಂದು ತಿಳಿಸಿದರು.ಕ್ರೀಡಾ ಚಟುವಟಿಕೆಗಳಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯದ ಜತೆಗೆ ಮಾನಸಿಕ ಸದೃಢತೆ ವೃದ್ಧಿಯಾಗುತ್ತದೆ. ಭಾರತದಲ್ಲಿ ಕ್ರಿಕೆಟ್ ಅಪಾರ ಜನಪ್ರಿಯತೆ ಹೊಂದಿದ್ದು, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಎಂ.ಎಸ್.ಧೋನಿ, ರಾಹುಲ್ ದ್ರಾವಿಡ್ ಸೇರಿದಂತೆ ಹಲವು ದಿಗ್ಗಜರು ದೇಶದ ಕೀರ್ತಿ ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಕ್ರೀಡೆಯಿಂದ ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವ ಬೆಳೆಯುತ್ತದೆ ಎಂದರು.ಕ್ರೀಡಾಪಟುಗಳೇ ಸ್ವಂತ ಹಣ ಖರ್ಚು ಮಾಡಿ ಮೈದಾನ ಸಿದ್ಧಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾ ಇಲಾಖೆಯಿಂದ ಯಾವುದೇ ಶುಲ್ಕ ವಿಧಿಸದೆ ಉಚಿತವಾಗಿ ಮೈದಾನ ಬಳಕೆಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.ಹಿರಿಯ ತರಬೇತುದಾರ ಫ್ರಾನ್ಸಿಸ್ ಮಾತನಾಡಿ ಎಲ್ಲಾ ತಂಡಗಳು ಕ್ರೀಡಾಸ್ಫೂರ್ತಿಯಿಂದ ಆಟವಾಡಬೇಕು. ಅಂಪೈರ್‌ಗಳು ನಿಷ್ಪಕ್ಷಪಾತ ತೀರ್ಪು ನೀಡಬೇಕು. ಪಂದ್ಯಾವಳಿಯಲ್ಲಿ ಗಲಾಟೆಗಳಿಗೆ ಅವಕಾಶ ನೀಡದೆ ಶಿಸ್ತು ಕಾಪಾಡಬೇಕು ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಮಾತನಾಡಿ ಕ್ರೀಡೆಯಲ್ಲಿ ಸೋಲು-ಗೆಲುವು ನಾಣ್ಯದ 2 ಮುಖಗಳಿದ್ದಂತೆ. ಸಿಪಿಎಲ್ ಮೂಲಕ ಜಿಲ್ಲೆ ಯುವ ಪ್ರತಿಭೆಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಹಾರೈಸಿದರು.ಕಾರ್ಯಕ್ರಮದಲ್ಲಿ ರೂಪೇಶ್‌ಕುಮಾರ್, ಮೋಹನ್‌ಕುಮಾರ್, ಶರತ್‌ಕುಮಾರ್, ಮನೋಹರ್, ಡಾ.ರಮೇಶ್.ಸಿ, ನಾರಾಯಣ್‌ಗೌಡ, ಮಧು ಇದ್ದರು.