ಕೃಷಿ ಕ್ಷೇತ್ರಕ್ಕೆ ಅನುಕೂಲಕರವಾಗುಂತಹ ಅನ್ವೇಷಣೆಗಳ ಮಾದರಿ ತಯಾರು ಮಾಡುವಲ್ಲಿ ಮುಂದಾಗಬೇಕು

ಕುಷ್ಟಗಿ: ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವಂತಹ ನೂತನ ಅನ್ವೇಷಣೆ ಮಾದರಿ ತಯಾರಿಸಬೇಕು ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಜಗದೀಶಪ್ಪ ಮೆಣೇದಾಳ ಹೇಳಿದರು.ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗದಲ್ಲಿ) ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಮಾದರಿ ಉದ್ಘಾಟಿಸಿ ಮಾತನಾಡಿದ ಅವರು, ದೇಶವೂ ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರೆದಿದ್ದರೂ ಸಹಿತ ಕೃಷಿ ಕ್ಷೇತ್ರಕ್ಕೆ ಅನುಕೂಲಕರವಾಗುಂತಹ ಅನ್ವೇಷಣೆಗಳ ಮಾದರಿ ತಯಾರು ಮಾಡುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು.

ಎಂ.ಎಂ. ಗೊಣ್ಣಾಗರ, ಶಾಕೀರಬಾಬ, ಶ್ರೀಧರ್ ಕುಲಕರ್ಣಿ, ಬಸಪ್ಪ ವಾಲಿಕಾರ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಶಂಕ್ರಮ್ಮ ಕೋಚಿ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಡಯಟ್ ಉಪನ್ಯಾಸಕ ರಾಜೇಂದ್ರ ಬೆಳ್ಳಿ, ವೆಂಕಟೇಶ ಗೌಡರ, ಸುಕುಮನಿ ಸ್ವಾಮಿ, ರಾಘವೇಂದ್ರ ಗೊಲ್ಲರ ಸೇರಿದಂತೆ ಅನೇಕರು ಇದ್ದರು. ತಾಲೂಕಿನ ಶಾಲೆಗಳಿಂದ 54 ಮಾದರಿಗಳೊಂದಿಗೆ ಶಿಕ್ಷಕರು ಮಕ್ಕಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಯಾರಿಸಿರುವ ಮಾದರಿ ವೀಕ್ಷಿಸಿದರು.