ಅಲ್ಪಸಂಖ್ಯಾತ ಜನಾಂಗಕ್ಕೆ ಸೇರಿದ ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ್, ಸಿಖ್, ಪಾರ್ಸಿ ಇವರುಗಳು ಗ್ರಾಮ ಪಂಚಾಯಿತಿಗಳಲ್ಲಿ ಇರುವ ಜನಸಂಖ್ಯೆ, ಶಿಕ್ಷಣ ಸಂಸ್ಥೆಗಳು, ಹಾಸ್ಟಲ್ ಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳ ಹೆಸರು ಹಾಗೂ ಅವರ ಸಂಪರ್ಕ ಸಂಖ್ಯೆಗಳನ್ನು ಕ್ರೋಢಿಕರಿಸಿ ಕೈಪಿಡಿ ಸಿದ್ಧಪಡಿಸಿ.

ಕನ್ನಡಪ್ರಭ ವಾರ್ತೆ ಮೈಸೂರು

ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ದೊರಕುವ ಸೌಲಭ್ಯಗಳ ಕುರಿತಂತೆ ಕೈಪಿಡಿ ಸಿದ್ಧಪಡಿಸುವುದರೊಂದಿಗೆ ಪ್ರತಿ ಮಾಹೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ತಿಳಿಸಿದರು.

ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಮಂಗಳವಾರ ನಡೆದ ಮಂಡ್ಯ, ಮೈಸೂರು, ಹಾಸನ ಹಾಗೂ ಚಾಮರಾಜನಗರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಜನಾಂಗಕ್ಕೆ ಸೇರಿದ ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ್, ಸಿಖ್, ಪಾರ್ಸಿ ಇವರುಗಳು ಗ್ರಾಮ ಪಂಚಾಯಿತಿಗಳಲ್ಲಿ ಇರುವ ಜನಸಂಖ್ಯೆ, ಶಿಕ್ಷಣ ಸಂಸ್ಥೆಗಳು, ಹಾಸ್ಟಲ್ ಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳ ಹೆಸರು ಹಾಗೂ ಅವರ ಸಂಪರ್ಕ ಸಂಖ್ಯೆಗಳನ್ನು ಕ್ರೋಢಿಕರಿಸಿ ಕೈಪಿಡಿ ಸಿದ್ಧಪಡಿಸಿ ಎಂದು ಸೂಚಿಸಿದರು.

ಗ್ರಾಮ‌ಹಾಗೂ ತಾಲೂಕುವಾರು ಅಲ್ಪಸಂಖ್ಯಾತರ ವಿವರ ಸಿದ್ಧಪಡಿಸಿಕೊಂಡರೆ ಅವರಿಗೆ ಇರುವ ಅಗತ್ಯತೆಗಳು ಹಾಗೂ ಸರ್ಕಾರದ ಸೌಲಭ್ಯಗಳನ್ನು ‌ಒದಗಿಸಲು ಸಹಕರಿಯಾಗಲಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕೈಪಿಡಿಗೆ ಬೇಕಿರುವ ಮಾಹಿತಿಯನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿದ್ಧಪಡಿಸಬೇಕು ಎಂದರು.

ಗ್ರಾಮ‌ಪಂಚಾಯಿತಿಗಳಲ್ಲಿ ಇರುವ ಮಸೀದಿ, ಬಸದಿ ಚರ್ಚ್ ಗಳು ಸೇರಿದಂತೆ ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳನ್ನು ಪಟ್ಟಿ‌ಮಾಡಿಕೊಂಡು ಸದರಿ ಸ್ಥಳಗಳಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದೊರಕುವ ಸೌಲಭ್ಯಗಳ ಬಗ್ಗೆ ಪ್ರಚಾರ‌ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಅವರು ಹೇಳಿದರು.

ಅಲ್ಪಸಂಖ್ಯಾತರ ವಾಸಿಸುವ ಸ್ಥಳಗಳನ್ನು ಗುರುತಿಸಿ ಸದರಿ ಸ್ಥಳದಲ್ಲಿ ಇರುವ ತೊಂದರೆಗಳು ಹಾಗೂ ಅವರಿಗೆ ಅವಶ್ಯಕವಿರುವ ಯೋಜನೆಗಳನ್ನು ಅವರಿಗೆ ದೊರಕಿಸುವ ರೀತಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಆಯೋಗಕ್ಕೆ ಈ ಹಿಂದೆ ನೀಡಲಾಗುತ್ತಿದ್ದ ಅನುದಾನ ಬಹಳ ಕಡಿಮೆ ಇತ್ತು‌. ಪ್ರಸ್ತುತ ಹೆಚ್ಚಿಸಲಾಗಿದೆ. ಪ್ರತಿಯೊಬ್ಬರಿಗೂ ಜಾಬ್ ಚಾರ್ಟ್ ಹಾಗೂ ವಾರ್ಷಿಕ ಟೈಮ್ ಟೇಬಲ್ ಸಿದ್ಧಪಡಿಸಲಾಗಿದೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಅದರಂತೆ ಕಾರ್ಯ ನಿರ್ವಹಿಸಿ ಎಂದರು.

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ನೂರ್ ಎಜುಕೇಷನ್ ಅಂಡ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ಸಯ್ಯದ್ ಅಖೀಲ್ ಅಹಮದ್, ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಮಸ್ರುಲ್ ಅಹಮದ್, ಜೆಕ್ ಮೆಟ್ ವಾಂಗದೂಸ್ ಜ್ಯೋತಿ ಮೊದಲಾದವರು ಇದ್ದರು.

ವಿಶ್ವಮಾನವ ಮೈಸೂರು ವಿವಿ ನೌಕರರ ವೇದಿಕೆಯಿಂದ ಅಂಬೇಡ್ಕರ್‌ ಪರಿನಿಬ್ಬಾಣ ದಿನ

ಕನ್ನಡಪ್ರಭ ವಾರ್ತೆ ಮೈಸೂರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ವಿಶ್ವಮಾನವ ಮೈಸೂರು ವಿವಿ ನೌಕರರ ವೇದಿಕೆ ವತಿಯಿಂದ ಮಾನಸ ಗಂಗೋತ್ರಿ ಗ್ರಂಥಾಲಯದ ಮುಂಭಾಗದ ಡಾ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು.

ಈ ವೇಳೆ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್‌. ಶಿವರಾಜಪ್ಪ, ಮೈಸೂರು ವಿವಿ ಸಿಂಡಿಕೇಟ್ ಸದಸ್ಯರಾದ ಮಾದೇಶ್, ಕ್ಯಾತನಹಳ್ಳಿ ನಾಗರಾಜ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಚಂದ್ರಶೇಖರ್, ಮೈವಿವಿ ಪ್ರಸಾರಾಂಗ ನಿರ್ದೇಶಕ ಡಾ. ನಂಜಯ್ಯ ಹೊಂಗನೂರು, ವೇದಿಕೆ ಅಧ್ಯಕ್ಷ ಆರ್. ವಾಸುದೇವ, ಉಪಾಧ್ಯಕ್ಷ ಭಾಸ್ಕರ್, ನಿರ್ದೇಶಕ ಚಿದಾನಂದ, ಸಂಶೋಧಕರ ಸಂಘದ ಮಾಜಿ ಅಧ್ಯಕ್ಷ ಶಿವಶಂಕರ್, ವರಳ್ಳಿ ಮಹೇಶ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕೃಷ್ಣ ಗಣಿಗನೂರು ಇದ್ದರು.