ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಉತ್ತಮವಾದ ತರಬೇತಿ ನೀಡುವ ಮೂಲಕ ಸೈನಿಕಶಾಲೆ, ನವೋದಯ, ಕಿತ್ತೂರು, ಆರ್‌ಎಂಎಸ್ ಸೇರಿದಂತೆ ಅತೀ ಹೆಚ್ಚು ಫಲಿತಾಂಶ ನೀಡುವ ಹೆಗ್ಗಳಿಕೆ ಹೊಂದಿರುವ ಎಕ್ಸಲಂಟ್ ಕೋಚಿಂಗ್ ಕ್ಲಾಸ್‌ನ ಮತ್ತೊಂದು ಶಾಖೆಯನ್ನು ಗಣೇಶ ನಗರದಲ್ಲಿ ಪ್ರಾರಂಭಿಸಬೇಕು ಎಂದು ಪಾಲಕರು ಬಹುದಿನಗಳಿಂದ ಒತ್ತಾಯಿಸುತ್ತಿದ್ದರು. ಅವರ ಭಾವನೆಗಳಿಗೆ ಸ್ಪಂದಿಸಿ ಗಣೇಶ ನಗರದಲ್ಲಿ ಎಸ್‌ಕೆ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಹೊಸ ಶಾಖೆ ಪ್ರಾರಂಭಿಸಿ ಮಕ್ಕಳಿಗೆ ತರಬೇತಿ ನೀಡುವ ಕಾರ್ಯಕ್ಕೆ ಅಣಿಯಾಗುತ್ತಿದ್ದೇವೆ ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಹೇಳಿದರು.ನಗರದ ಎಸ್‌ಕೆ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮಕ್ಕಳನ್ನು ಅದೇ ವೇಗಕ್ಕೆ ಅನುಗುಣವಾಗಿ ಸಿದ್ಧಗೊಳಿಸಲು ಅತ್ಯುತ್ತಮ ತರಬೇತಿಯ ಅಗತ್ಯವಿದೆ ಎನ್ನುವುದನ್ನು ಮನಗಂಡು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಯು ಬದಲಾಗುತ್ತಿರುವ ಸನ್ನಿವೇಶಕ್ಕನುಗುಣವಾಗಿ ತರಬೇತಿ ನೀಡಿ ಕರ್ನಾಟಕದಲಿಯೇ ಅತೀ ಹೆಚ್ಚು ಫಲಿತಾಂಶ ನೀಡುವ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದರು.
ವಿಶ್ರಾಂತ ಪ್ರಾಚಾರ್ಯ ಜಿ.ಆರ್ ಸುಳಿಬಾವಿ ಮಾತನಾಡಿ, ಈ ಭಾಗದಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವ ಎಸ್‌ಕೆ ಶಾಲೆಯಲ್ಲಿ ಉತ್ತಮ ಫಲಿತಾಂಶ ನೀಡುತ್ತಿರುವ ಎಕ್ಸಲಂಟ್ ತರಬೇತಿ ಕೇಂದ್ರ ಪ್ರಾರಂಭವಾಗುತ್ತಿರುವುದು ಮುಂದಿನ ದಿನಗಳಲ್ಲಿ ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಾಣವಾಗುತ್ತದೆ ಎನ್ನುವುದಕ್ಕೆ ಸಾಕ್ಷಿ ನೀಡುತ್ತಿದೆ. ಈ ಸಂಸ್ಥೆಗಳು ಕೇವಲ ಶಿಕ್ಷಣ ಪ್ರಸಾರ ಮಾತ್ರ ಮಾಡುತ್ತಿಲ್ಲ. ಬದಲಿಗೆ ಮಕ್ಕಳಲ್ಲಿ ಮೌಲ್ಯವರ್ಧನೆ ಮಾಡುವ ಕಾಯಕವನ್ನು ಸಹ ಮಾಡುತ್ತಿದ್ದು, ಭಾರತ ನಿರ್ಮಾಣಕ್ಕೆ ಬೇಕಾದ ಯುವಶಕ್ತಿಯನ್ನು ತಯಾರು ಮಾಡುತ್ತಿವೆ. ಹೀಗಾಗಿ ಈ ಭಾಗದ ಜನಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.ವಿಕಾಸ ಎಜ್ಯೂಕೇಶನ್ ಫೌಂಡೇಷನ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಬಾಪುಗೌಡ ಪಾಟೀಲ್ ಮಾತನಾಡಿ, ಇಷ್ಟು ದಿನಗಳ ಕಾಲ ಎಸ್.ಕೆ ಶಾಲೆಯು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತ ಬಂದಿದೆ. ಈಗ ಎಕ್ಸಲಂಟ್ ಸಂಸ್ಥೆಯ ಸಹಯೋಗದಿಂದಾಗಿ ತರಬೇತಿಯನ್ನು ಸಹ ನೀಡುವ ಅವಕಾಶ ಒದಗಿ ಬಂದಿದೆ. ಎಕ್ಸಲಂಟ್ ಸಂಸ್ಥೆಯಲ್ಲಿ ತರಬೇತಿ ಕೊಡಿಸುವುದಕ್ಕೆಂದು ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಜನಗಳು ಆಗಮಿಸುತ್ತಿರುವ ಸಂದರ್ಭದಲ್ಲಿ ನಮ್ಮ ಬಡಾವಣೆಯಲ್ಲಿ ಶಾಖೆ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ತರಬೇತಿ ಪಡೆದು ಆಯ್ಕೆಯಾಗುವುದಕ್ಕೆ ನೆರವಾಗಲಿದೆ ಎಂದು ಎಂದರು.ಬಿಸಿಡಬ್ಲೂಡಿಯ ಉಪ ನಿರ್ದೇಶಕ ಈರಣ್ಣ ಆಶಾಪುರ ಮಾತನಾಡಿದರು. ಸಾನ್ನಿಧ್ಯ ಸಿದ್ಧಪ್ಪಜ್ಜನ ಕಟ್ಟೆ, ಮಾವಿನಬಾವಿಯ ಬಸವರಾಜ್ ಗುರೂಜಿ ವಹಿಸಿದ್ದರು. ಆರ್.ಎಸ್.ಪಾಟೀಲ್, ಬಸನಗೌಡ ಪಾಟೀಲ್, ಎಕ್ಸಲಂಟ್ ಸಂಸ್ಥೆಯ ಗೌರವ ಸದಸ್ಯ ರಾಜಶೇಖರ ಕೌಲಗಿ, ದಿಕ್ಸೂಚಿ ಕೋಚಿಂಗ್ ಕ್ಲಾಸ್‌ನ ಪ್ರಕಾಶ ಬಿರಾದಾರ, ಮಹೇಶ ನಿಡೋಣಿ, ವಿರೇಶ ಇಂಡಿ, ಮಲ್ಲನಗೌಡ ಪಾಟೀಲ್, ಅಶ್ವಿನಿ ಭಜಂತ್ರಿ ಸೇರಿದಂತೆ ಮುಂತಾದವರು ಇದ್ದರು.