ದ್ವಿತೀಯ ಪಿಯುಸಿ ಪರೀಕ್ಷೆ- 2ಕ್ಕೆ ಸಿದ್ಧತೆ ಕೈಗೊಳ್ಳಿ: ಡಿಸಿ ಗಂಗೂಬಾಯಿ

| Published : Apr 26 2024, 12:51 AM IST

ದ್ವಿತೀಯ ಪಿಯುಸಿ ಪರೀಕ್ಷೆ- 2ಕ್ಕೆ ಸಿದ್ಧತೆ ಕೈಗೊಳ್ಳಿ: ಡಿಸಿ ಗಂಗೂಬಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ 2406 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಅನುತ್ತಿರ್ಣವಾದ ವಿದ್ಯಾರ್ಥಿಗಳ ಜತೆಗೆ ಈಗಾಗಲೇ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮತಷ್ಟು ಸುಧಾರಿಸಿಕೊಳ್ಳಲು ಪರೀಕ್ಷೆ ಬರೆಯುತ್ತಿದ್ದಾರೆ.

ಕಾರವಾರ: ಜಿಲ್ಲೆಯಲ್ಲಿ ಏ. 29ರಿಂದ ಮೇ 16ರ ವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ- 2 ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆಗಳು ನಡೆಯುವಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ ದ್ವಿತೀಯ ಪಿಯುಸಿ ಪರೀಕ್ಷೆ- 2ರ ಸಿದ್ಧತಾ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ 2406 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಅನುತ್ತಿರ್ಣವಾದ ವಿದ್ಯಾರ್ಥಿಗಳ ಜತೆಗೆ ಈಗಾಗಲೇ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮತಷ್ಟು ಸುಧಾರಿಸಿಕೊಳ್ಳಲು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲ ಕೇಂದ್ರಗಳ ಸಿಸಿ ಟಿವಿ ವೆಬ್‌ಕಾಸ್ಟಿಂಗ್ ಡ್ರೈ ರನ್ ಯಶಸ್ವಿಯಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಎಚ್ಚರವಹಿಸಲಾಗಿದೆ ಎಂದರು.ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಕಾಲೇಜಿನ ಹಿರಿಯ ಪ್ರಾಂಶುಪಾಲರನ್ನು ಒಳಗೊಂಡ 11 ಮಾರ್ಗಾಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಕುಡಿಯುವ ನೀರು, ಶೌಚಾಲಯ ಇನ್ನಿತರ ಸೌಕರ್ಯಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು ಮತ್ತು ಪರೀಕ್ಷಾ ಕೇಂದ್ರದ ಅಧೀಕ್ಷಕರನ್ನು ಒಳಗೊಂಡಂತೆ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು ಎಂದು ಸೂಚಿಸಿದರು.ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿ, ಆರೋಗ್ಯ ಸಹಾಯಕರನ್ನು ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರದಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ತಿಳಿಸಿದರು.ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸತೀಶ ನಾಯ್ಕ, ತಹಸೀಲ್ದಾರರು, ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.