ಕೊಪ್ಪಳ: ಸಿದ್ಧತೆ ಮಾಡಿಕೊಳ್ಳುವ ಮೂಲಕ ಪ್ರಸಕ್ತ ಮುಂಗಾರಿನಲ್ಲಿ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಪಕ್ಷದ ಮುಖಂಡರ ನಿಯೋಗದೊಂದಿಗೆ ಸೋಮವಾರ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ್ ಅವರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಪ್ರಸಕ್ತ ವರ್ಷ ಮುಂಗಾರು ಅವಧಿ ಮೇ ಮೂರನೇ ವಾರದಿಂದ ಆರಂಭವಾಗುವ ನಿರೀಕ್ಷೆಯಿದೆ. ಸಿದ್ಧತೆ ಮಾಡಿಕೊಳ್ಳುವ ಮೂಲಕ ಮುಂಗಾರಿನ ಆರಂಭದಲ್ಲಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಳೆದ ವರ್ಷ ಕೊಪ್ಪಳ ನಗರದಲ್ಲಿ ಯೂರಿಯಾ ಗೊಬ್ಬರದ ಕೊರತೆಯ ಹಿನ್ನೆಲೆಯಲ್ಲಿ ಬಸವೇಶ್ವರ ವೃತ್ತದ ಬಳಿಯ ತಾಲೂಕು ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ (ಟಿಎಪಿಎಂಸಿ) ಮುಂಭಾಗ ರೈತರು ತೀವ್ರ ಪ್ರತಿಭಟನೆ ನಡೆಸಿದ್ದು ಹಾಗೂ ಕೊಪ್ಪಳ ತಾಲೂಕಿನ ಕುಣಿಕೇರಿ ಗ್ರಾಮದ ಚಂದ್ರಪ್ಪ ಬಡಿಗಿ ಮಣ್ಣು ತಿಂದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿತ್ತು. ಇದು ರಾಜ್ಯಾದ್ಯಂತ ಸುದ್ದಿಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿಕ್ರಿಯೆ ನೀಡಬೇಕಾಯಿತು. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾಡಳಿತದ್ದಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.ಜಿಲ್ಲೆಯಾದ್ಯಂತ ಕೃಷಿ ಭೂಮಿಯ ವಿಸ್ತೀರ್ಣ, ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ, ಯೂರಿಯಾ ದಾಸ್ತಾನು ಮಾಡಿಕೊಳ್ಳಬೇಕು. ಯೂರಿಯಾ ಪಡೆಯಲು ರೈತರಿಗೆ ಯಾವುದೇ ರೀತಿಯ ನಿಬಂಧನೆ ಹೇರಬಾರದು. ರಸಗೊಬ್ಬರದ ಕಾಳದಂಧೆ ನಡೆಯದಂತೆ ಅದರ ಬೆಲೆ ಹೆಚ್ಚದಂತೆ ಹಾಗೂ ಕಳಪೆ ಬಿತ್ತನೆ ಬೀಜ ಪೂರೈಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿ.ವಿ. ಚಂದ್ರಶೇಖರ್ ಆಗ್ರಹಿಸಿದ್ದಾರೆ. ಮೆಕ್ಕೆಜೋಳ, ಸಜ್ಜೆ, ಭತ್ತ, ತೊಗರಿ, ಸೂರ್ಯಕಾಂತಿ ಬೆಳೆಗಳ ಬಿತ್ತನೆ ಬೀಜ ವಿತರಣೆಯನ್ನು 20 ರೈತ ಸಂಪರ್ಕ ಕೇಂದ್ರಗಳ ಜತೆಗೆ ಹೆಚ್ಚುವರಿಯಾಗಿ 7 ಕೇಂದ್ರಗಳಲ್ಲಿ ವಿತರಣೆಗೆ ವ್ಯವಸ್ಥೆ ಮಾಡಿಕೊಂಡರೆ ಉತ್ತಮ ಎಂದಿದ್ದಾರೆ.
ಪಕ್ಷದ ಯುವ ಘಟಕದ ಕಾರ್ಯಾಧ್ಯಕ್ಷ ರಾಜು ನಾಯಕ, ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ, ಜಿಲ್ಲಾ ರೈತ ವಿಭಾಗದ ಅಧ್ಯಕ್ಷ ವೆಂಕಟೇಶರಾವ್, ತಾಲೂಕು ಗೌರವಾಧ್ಯಕ್ಷ ಈಶಪ್ಪ ಮಾದಿನೂರು, ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ್ರು, ಜಿಲ್ಲಾ ಉಪಾಧ್ಯಕ್ಷ ಮೂರ್ತೆಪ್ಪ ಹಿಟ್ನಾಳ್, ಜಿಲ್ಲಾ ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ ಸೊರಟೂರ, ಜಿಲ್ಲಾ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ್ ಡಂಬ್ರಳ್ಳಿ, ಜಿಲ್ಲಾ ಕೈಗಾರಿಕಾ ಅಧ್ಯಕ್ಷ ಮಾರುತಿಗೌಡ್ರು ಹಿರೇಬಗನಾಳ, ಜಿಲ್ಲಾ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಅಹಮದ್, ಜಿಲ್ಲಾ ಎಸ್‌ಸಿ ಘಟಕದ ಅಧ್ಯಕ್ಷ ಶಾಂತಕುಮಾರ್ ದೊಡ್ಡಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ, ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ನಗರ ಘಟಕ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಕೋಲ್ಕಾರ್, ತಾಲೂಕು ಎಸ್‌ಸಿ ಘಟಕದ ಅಧ್ಯಕ್ಷ ಸುರೇಶ ದದೇಗಲ್, ಜಿಲ್ಲಾ ಸಹ ಕಾರ್ಯದರ್ಶಿ ರವಿ ಮೇದಾರ, ತಾಲೂಕು ಎಸ್‌ಟಿ ಘಟಕದ ಅಧ್ಯಕ್ಷ ಮಲ್ಲಪ್ಪ ಹಂದ್ರಾಳ, ನಗರ ಘಟಕದ ಗೌರವಾಧ್ಯಕ್ಷೆ ರತ್ನಮ್ಮ ಹಿರೇಮಠ, ನಗರ ಕೋಶಾಧ್ಯಕ್ಷ ಶಿವರಾಜ್ ಮಠಪತಿ, ಜಿಲ್ಲಾ ಖಜಾಂಚಿ ಮೌನೇಶ್ ಕಿನ್ನಾಳ, ನಗರ ಎಸ್‌ಸಿ ಘಟಕದ ಅಧ್ಯಕ್ಷ ಮಾರುತಿ ಎಚ್., ಮುಖಂಡರಾದ ಸಿದ್ದರಡ್ಡಿ ಸಿಂದೋಗಿ, ಮಂಜುನಾಥ ವದಗನಾಳ, ಖಾಜಾಹುಸೇನ್ ಹೊಸಳ್ಳಿ ಉಪಸ್ಥಿತರಿದ್ದರು.