ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಿ

| Published : Jul 05 2024, 12:51 AM IST

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಿ
Share this Article
  • FB
  • TW
  • Linkdin
  • Email

ಸಾರಾಂಶ

ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವೆಂಟಿಗೋಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವೆಂಟಿಗೋಡಿ ಭೇಟಿ , ಸಂವಾದಕನ್ನಡಪ್ರಭ ವಾರ್ತೆ ಚಿತ್ರದುರ್ಗ

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಹೆಚ್ಚಿನ ಮಟ್ಟದಲ್ಲಿ ತಯಾರಿ ಆಗಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ.ವೆಂಟಿಗೋಡಿ ಹೇಳಿದರು.

ನಗರದ ಸರ್ಕಾರಿ ಕಲಾ ಕಾಲೇಜು ಹಿಂಭಾಗದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು, ನಿಲಯದಲ್ಲಿನ ವ್ಯವಸ್ಥೆಯ ಬಗ್ಗೆ ಹಾಗೂ ಉಟೋಪಚಾರದ ಬಗ್ಗೆ ಮಾಹಿತಿ ಪಡೆದು, ಸರ್ಕಾರ ನೀಡುತ್ತಿರುವ ಅವಕಾಶಗಳನ್ನು ವಿದ್ಯಾರ್ಥಿಗಳು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ನಿಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸುವಂತೆ ಹಾಗೂ

ನಿಲಯದ ಸ್ವಚ್ಛತೆ, ವಿದ್ಯಾರ್ಥಿಗಳ ವ್ಯಾಸಂಗ, ಆರೋಗ್ಯ, ನಿಲಯದ ಸುತ್ತಮುತ್ತಲಿನ ವಾತಾವರಣ ಸ್ವಚ್ಚವಾಗಿಟ್ಟುಕೊಳ್ಳಲು ಸೂಚಿಸಿದರು. ನಂತರ ಸಮಾಜಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.

ನಂತರ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಎಸ್.ಕೆ.ವೆಂಟಿಗೋಡಿ, ಅಲ್ಲಿನ ಖೈದಿಗಳೊಂದಿಗೆ ಸಂವಾದಿಸಿ ಯೋಗ ಕ್ಷೇಮದ ಕುರಿತು ವಿಚಾರಿಸಿದರು. ಕಾರಾಗೃಹದಲ್ಲಿ ನೀಡುವಂತಹ ಊಟದ ವ್ಯವಸ್ಥೆ ಪರಿಶೀಲಿಸಿದರು. ಶೌಚಾಲಯ, ಸ್ನಾನದ ಗೃಹಗಳಲ್ಲಿ ಸ್ವಚ್ಚತೆ ಸಂದರ್ಶಕರ ಪುಸ್ತಕ, ಕೈದಿಗಳ ರಿಜಿಸ್ಟರ್, ಸಿ.ಸಿ ಕ್ಯಾಮೆರಾ ಕುರಿತು ಹಾಗೂ ಇತರೆ ಸೌಲಭ್ಯಗಳ ಬಗ್ಗೆ ಮತ್ತು ಭದ್ರತೆ ಕುರಿತು ಪರಿಶೀಲಿಸಿದರು.

ಈ ವೇಳೆ ತಹಸೀಲ್ದಾರ್ ಡಾ.ಕೆ.ನಾಗವೇಣಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಷ್ಪಲತಾ ಭಾವಿಮಠ, ತಾಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಇದ್ದರು.