ಬೀಳಗಿ ಉತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲ

| Published : Apr 25 2025, 12:31 AM IST

ಬೀಳಗಿ ಉತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಬೀಳಗಿ ಸಾಂಸ್ಕೃತಿಕ ಉತ್ಸವ ವೈಭವ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಜೆ.ಟಿ. ಪಾಟೀಲ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ಬೀಳಗಿ ಸಾಂಸ್ಕೃತಿಕ ಉತ್ಸವ ವೈಭವ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಜೆ.ಟಿ. ಪಾಟೀಲ ಸಲಹೆ ನೀಡಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ನಡೆದ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಹಿತ್ಯ ಹಾಗೂ ಜಾನಪದ ಕಲೆ ಉಳಿಯಬೇಕು, ಇಂತಹ ಅದ್ಭುತ ಕಾರ್ಯಕ್ರಮವನ್ನು ಮೇ ಕೊನೆಯ ವಾರದಲ್ಲಿ ದಿನಾಂಕ ನಿಗದಿ ಮಾಡಿ, ಯಾವ ರೀತಿಯಲ್ಲಿ ಕಾರ್ಯಕ್ರಮ, ಸಮಿತಿಗಳನ್ನು ರಚನೆ ಮಾಡಬೇಕು ಜೊತೆಗೆ ಉತ್ಸವಕ್ಕೆ ತಗಲುವ ಅಂದಾಜು ವೆಚ್ಚದ ಮಾಹಿತಿ ಸಿದ್ಧಪಡಿಸಿ ಎಂದು ಅಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರಿ ಅದಿಕಾರಿಗಳ ಜೊತೆಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಸಮಿತಿ ರಚನೆ ಮಾಡಿ ಬೀಳಗಿ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಬೇಕಾಗಿದೆ. ಕಾರ್ಯಕ್ರಮಕ್ಕೆ ಬೇಕಾಗುವ ಹಣವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಹೆಚ್ಚಿನ ಹಣ ಒದಗಿಸುವಂತೆ ಮನವಿ ಮಾಡಲಾಗುವುದು. ಒಂದು ಸಾವಿರ ಮಹಿಳೆಯರ ಕುಂಭಮೇಳ, ಮೂರು ಬಗೆಯ ವಿವಿಧ ಕಾರ್ಯಕ್ರಮ. ಬೀಳಗಿ ತಾಲೂಕು ಸ್ಮರಣ ಸಂಚಿಕೆ, ಪಕ್ಷಾತೀತ, ಜ್ಯಾತ್ಯತೀತವಾಗಿ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕು. ಎಲ್ಲ ಕಲಾವಿದರಿಗೆ ಅವಕಾಶ ಮಾಡೋಣ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾಕಾರಿ ಜಾನಕಿ ಕೆ.ಎಂ. ಮಾತನಾಡಿ, ಮುಳುಗಡೆ ಸಂತ್ರಸ್ತರ ಕೊಡುಗೆ, ಕಾರ್ಯಕ್ರಮದ ಬಗ್ಗೆ ಎಷ್ಟು ಅನುದಾನ ಬೇಕೆನ್ನುವುದು ಅಂದಾಜು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಮಾಹಿತಿ ನೀಡುವುದು ಮುಖ್ಯವಾಗಿದೆ ಎಂದರು.

ಎಸ್ಪಿ ಅಮರನಾಥ ರೆಡ್ಡಿ ಮಾತನಾಡಿ, ಬೀಳಗಿ ಬಗ್ಗೆ ಜನರಲ್ಲಿ ಸಾಂಸ್ಕೃತಿಕ ವೈಭವ ಎತ್ತಿ ಹಿಡಿಯಬೇಕಾಗಿದೆ. ಬೀಳಗಿ ತಾಲೂಕಿನ ಜಾನಪದ, ಕ್ರೀಡೆ, ಸೇರಿದಂತೆ ಎಲ್ಲ ಬಗೆಯ ಸಾಹಿತ್ಯದ ಅನಾವರಣ ಈ ಕಾರ್ಯಕ್ರಮದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡುತ್ತೇವೆ. ಈ ಕಾರ್ಯಕ್ರಮದ ಪ್ರತಿ ಮನೆಮನೆಗೆ ಮುಟ್ಟಿಸುವ ಕೆಲಸ ಮಾಡಿ ಅವರನ್ನು ಸಾಂಸ್ಕೃತಿಕ ವೈಭವ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವಂತೆ ಮಾಡಬೇಕಾಗಿದೆ ಎಂದರು.

ಜಿಪಂ ಸಿಋೊ ಶಶಿಧರ ಕುರೇರ ಸಲಹೆ ಸೂಚನೆಗಳು ನೀಡಿದರು. ಸಾರ್ವಜನಿಕರು ಸಲಹೆ ಸೂಚನೆಗಳು ನೀಡಿದರು. ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬಿಡಕೇರ, ತಹಸೀಲ್ದಾರ ವಿನೋದ ಹತ್ತಳ್ಳಿ, ಸಿಪಿಐ ಎಚ್.ಬಿ. ಸಣ್ಣಮನಿ, ತಾಪಂ ಇಒ ಶ್ರೀನಿವಾಸ ಎಸ್. ಪಾಟೀಲ, ಪಪಂ ಅಧ್ಯಕ್ಷ ಮುತ್ತು ಬೋರ್ಜಿ, ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಡಾ, ಸಾಗರ ತೆಕ್ಕೆನ್ನವರ, ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿಸಿ ಅಧ್ಯಕ್ಷ ಅಣವೀರಯ್ಯ ಪ್ಯಾಠಿಮಠ ಇದ್ದರು.