ಸಾರಾಂಶ
ದಸರಾ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಕುಡಿಯುವ ನೀರು, ಶೌಚಾಲಯ, ರಸ್ತೆ, ಆಹಾರ, ಆರೋಗ್ಯ ಮತ್ತು ಅಗ್ನಿಶಾಮಕ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಅರುಣ್ ಎಚ್. ದೇಸಾಯಿ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಸಿಂಧನೂರು
ದಸರಾ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಕುಡಿಯುವ ನೀರು, ಶೌಚಾಲಯ, ರಸ್ತೆ, ಆಹಾರ, ಆರೋಗ್ಯ ಮತ್ತು ಅಗ್ನಿಶಾಮಕ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಅರುಣ್ ಎಚ್. ದೇಸಾಯಿ ಸೂಚಿಸಿದರು.ಅವರು ಮಂಗಳವಾರ ಇಲ್ಲಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ದಸರಾ ಉತ್ಸವದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿಯ ದಸರಾ ಉತ್ಸವವನ್ನು ತಾಲ್ಲೂಕಿನ ಸುಕ್ಷೇತ್ರ ಅಂಬಾಮಠದ ಸಿದ್ದಪರ್ವತವಾಸಿ ಅಂಬಾದೇವಿ ದೇವಸ್ಥಾನದಲ್ಲಿ ಚಾಲನೆ ನೀಡಲಾಗುವುದು. ಆ ದಿನದ ಪೂರ್ವ ದಿನ ಮುಕ್ಕುಂದಾ ಗ್ರಾಮದ ತುಂಗಭದ್ರಾ ನದಿಯಲ್ಲಿ ತುಂಗಾಭದ್ರ ಅಂಬಾ ಆರತಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಅಂಬಾಮಠ, ಗಾಂಧಿನಗರ, ಪಗಡದಿನ್ನಿ, ಆರ್.ಎಚ್.ನಂ.2 ಕ್ಯಾಂಪ್ ಹಾಗೂ ರಾಗಲಪರ್ವಿಯಲ್ಲಿ ತಲಾ ಐದು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡು ದಸರಾ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸ ಲಾಗುವುದು. 4 ದಿನಗಳ ಕಾಲ ನಗರದ ಆರ್‌ಜಿಎಂ ಶಾಲಾ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಸಲಾಗುವುದು ಎಂದು ವಿವರಿಸಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಅಂಬಾದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ರಂಗನಗೌಡ ಗೊರೇಬಾಳ, ಕಾರ್ಯದರ್ಶಿ ಹನುಮೇಶ ಆಚಾರ್, ಸೇರಿದಂತೆ ರೌಡಕುಂದ, ಮುಕ್ಕುಂದಾ, ಸೋಮಲಾಪುರ, ಸಾಲಗುಂದಾ, ಗೊರೇಬಾಳ ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು, ಲೋಕೋಪಯೋಗಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜನಿಯರ್‌ಗಳು ಭಾಗವಹಿಸಿದ್ದರು.