ಸಾರಾಂಶ
ದೊಡ್ಡಬಳ್ಳಾಪುರ: ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್‌ಪಿಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆ.20ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಎ.ಬಸವರಾಜು ಸೂಚಿಸಿದರು.
ದೊಡ್ಡಬಳ್ಳಾಪುರ: ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್‌ಪಿಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆ.20ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಎ.ಬಸವರಾಜು ಸೂಚಿಸಿದರು.
ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿಬಿಆರ್‌ಎನ್ ಅಣಕು ಪ್ರದರ್ಶನ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಅಣಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.ರಾಸಾಯನಿಕ ಸೋರಿಕೆ ನಿರ್ವಹಣಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಅಣುಕು ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಅಣುಕು ಪ್ರದರ್ಶನ ಆಗುವಂತಹ ಸಂದರ್ಭದಲ್ಲಿ ಅವಶ್ಯಕತೆ ಇರುವ ತುರ್ತು ಆ್ಯಂಬುಲೆನ್ಸ್ ಹಾಗೂ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಅಗ್ನಿ ಶಾಮಕದಳ, ಟ್ರಾಫಿಕ್(ವಾಹನ ದಟ್ಟಣೆ) ನಿಯಂತ್ರಣ ಹಾಗೂ ಬಂದೋಬಸ್ತ್ ವ್ಯವಸ್ಥೆಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ರಾಸಾಯನಿಕ ಸೋರಿಕೆಯಿಂದ ತೊಂದರೆಗೆ ಒಳಗಾಗುವ ಸುತ್ತ ಮುತ್ತಲಿನ ಬಾಧಿತ ಗ್ರಾಮಗಳ ಜನರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅಂತಹ ಗ್ರಾಮಗಳ ಜನ-ಜಾನುವಾರುಗಳನ್ನು ಸ್ಥಳಾಂತರಿಸಲು ವಾಹನ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಸ್ಥಳಾಂತರಿಸಿದ ಜನರಿಗೆ ಪುನರ್ವಸತಿ ಕೇಂದ್ರ ತೆರೆಯಲು ಮದುವೆ ಮಂಟಪ, ಸಮುದಾಯ ಭವನಗಳನ್ನು ಕಾಯ್ದಿರಿಸಿ ಊಟೋಪಚಾರ, ಮೂಲ ಸೌಕರ್ಯ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ರವಿ, ಹೊಸಕೋಟೆ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹ ಮೂರ್ತಿ, ನೆಲಮಂಗಲ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ತಿಮ್ಮರಾಜು, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್‌ಡಿಆರ್‌ಎಫ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.7ಕೆಡಿಬಿಪಿ1-
ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಿಬಿಆರ್‌ಎನ್ ಅಣಕು ಪ್ರದರ್ಶನ ಏರ್ಪಡಿಸುವ ಕುರಿತು ಪೂರ್ವಭಾವಿ ಸಭೆ ನಡೆಯಿತು.