ವಿದ್ಯಾರ್ಥಿಗಳಿಗೆ ಸುಲಭವಾಗಿ ಅಂಕಗಳನ್ನು ಗಳಿಸಲು ವಿವಿಧ ಕಾರ್ಯತಂತ್ರಗಳನ್ನು ಹಾಕಿಕೊಳ್ಳಲು ಪ್ರತಿ ವಿಷಯ ಶಿಕ್ಷಕರಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ

ಹಿರೇಕೆರೂರು: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ. 10ನೇ ತರಗತಿಯಲ್ಲಿ ಓದುತ್ತಿರುವ ಪ್ರತಿ ವಿದ್ಯಾರ್ಥಿಯ ದೈಹಿಕ ಮತ್ತು ಮಾನಸಿಕ ಸ್ಥಿತಿಯನ್ನು ಅರಿತು ಅವನ ಕೌಟುಂಬಿಕ ಹಿನ್ನೆಲೆ ಹರಿತು ಅವನಲ್ಲಿರುವ ಸಮಸ್ಯೆಗಳನ್ನ ಅರ್ಥ ಮಾಡಿಕೊಂಡು ಸುಲಭವಾಗಿ ಆ ವಿದ್ಯಾರ್ಥಿಗೆ ಹೇಗೆ ಸುಲಭವಾಗಿ ಅಂಕಗಳಿಸಬಹುದು ಎಂಬುದನ್ನು ಮನವರಿಕೆ ಮಾಡಿಕೊಟ್ಟರೆ ಖಂಡಿತ ಆ ವಿದ್ಯಾರ್ಥಿ ಸುಲಭವಾಗಿ ಅಂಕಗಳನ್ನು ಗಳಿಸುತ್ತಾನೆ ಹಾಗೂ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢನಾಗುತ್ತಾನೆ ಎಂದು ಹಾವೇರಿಯ ಎಂ ಆರ್ ಎಂ ಕಾಲೇಜಿನ ಪ್ರಾಚಾರ್ಯರಾದ ಡಾ. ರಾವ್ ಹೇಳಿದರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಮಿಷನ್ 60 ಪ್ಲಸ್ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಕಾರ್ಯಗಾರದ ಅಧ್ಯಕ್ಷತೆ ವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಸುರೇಶ್ ಕುಮಾರ್ ಮಾತನಾಡಿ ಹಿರೆಕೆರೂರ್ ಹಾಗೂ ರಟ್ಟೀಹಳ್ಳಿ ತಾಲೂಕಿನ ಕಳೆದ ವರ್ಷದ ಫಲಿತಾಂಶ ಶೇಕಡ 97.5 ಆಗಿದ್ದು ಉತ್ತಮ ಸಾಧನೆ ಮಾಡಿದೆ ಈ ವರ್ಷವೂ ಕೂಡ ಎಲ್ಲಾ ಶಾಲೆಗಳು ಶೇಕಡ 100ರಷ್ಟು ಫಲಿತಾಂಶ ಪಡೆಯಲು ಪ್ರಯತ್ನಿಸಬೇಕು. ಈ ದಿಸೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಸುಧಾರಣೆಗಾಗಿ ಮಿಷನ್ 60 ಪ್ಲಸ್ ಯೋಜನೆಯನ್ನು ಹಾಕಿಕೊಂಡಿದೆ ಇದರ ಪ್ರಕಾರ ಪ್ರತಿ ಶಾಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹ ವಿದ್ಯಾರ್ಥಿಗಳಿಗೆ ಸುಲಭವಾಗಿ ಅಂಕಗಳನ್ನು ಗಳಿಸಲು ವಿವಿಧ ಕಾರ್ಯತಂತ್ರಗಳನ್ನು ಹಾಕಿಕೊಳ್ಳಲು ಪ್ರತಿ ವಿಷಯ ಶಿಕ್ಷಕರಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂಧರ್ಭದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹೆಚ್.ಹೆಚ್. ಜಾಡರ್, ಕರ್ನಾಟಕ ರಾಜ್ಯ ಮಾಧ್ಯಮಿಕ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್ಎ.ಚ್. ಬೆಟ್ಟಳ್ಳೆರ, ಹಿರೇಕೆರೂರು ತಾಲೂಕ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ಎಸ್. ದೀವಿಗೆಹಳ್ಳಿ, ಡಯಟ್ ನ ಉಪನ್ಯಾಸಕರಾದ ರುದ್ರಗೌಡ ನೂಲಗೇರಿ , ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಮೇಘರಾಜ್ ಮಾಳಗಿಮನಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್ ಪುರದ, ಎಸ್ಎಸ್‌ಎಲ್ಸಿ ಪರೀಕ್ಷೆ ನೋಡಲ್ ಅಧಿಕಾರಿಗಳಾದ ರವಿಕುಮಾರ್ ಹಾಗೂ ವಿಷಯವಾರು ಶಿಕ್ಷಕರು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.