ಸಾರಾಂಶ
ಮೂಡಿಗೆರೆಯಲ್ಲಿ ನಡೆದ 19ನೇ ಕನ್ನಡ ಸಾಹಿತ್ಯ ಸಮ್ಮೇಳನ । ಸಂಗ್ರಹವಾಗಿದ್ದು 11,46,000 ರು । ವೆಚ್ಚ 10,92,785 ರು। : 53 ಸಾವಿರ ರು. ಉಳಿತಾಯ
ಕನ್ನಡಪ್ರಭ ವಾರ್ತೆ, ಮೂಡಿಗೆರೆಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ತಾಲೂಕಿನಲ್ಲಿ ಆಯೋಜನೆ ಮಾಡಿದ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡನೆ ಮೂಡಿಗೆರೆ ಜೆ.ಸಿ. ಕ್ಲಬ್ ಆವರಣದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಡಿ.ಎಸ್. ಜಯರಾಂ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್, ಜಿಲ್ಲೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ 30 ದಿನಗಳಲ್ಲಿ ಸಮ್ಮೇಳನದ ಲೆಕ್ಕಪತ್ರವನ್ನು ಮಂಡನೆ ಮಾಡಿ ಸ್ವಾಗತ ಸಮಿತಿಯನ್ನು ವಿಸರ್ಜನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಈ ಸಮ್ಮೇಳನದ ಯಶಸ್ಸಿಗೆ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸ್ವಾಗತ ಸಮಿತಿ ಪದಾಧಿಕಾರಿಗಳಿಗೂ ಕೃತಜ್ಞತೆ ಸಲ್ಲಿಸುತ್ತೇನೆಂದು ಸ್ವಾಗತ ಸಮಿತಿ ಅಧ್ಯಕ್ಷ ಬಿ.ಎಸ್. ಜಯರಾಂ ತಿಳಿಸಿದರು.ಹಾಗೆಯೇ ಕೋಶಾಧ್ಯಕ್ಷ ಜೆ.ಎಸ್. ರಘು ಹಾಗೂ ಆಹಾರ ಸಮಿತಿ ಅಧ್ಯಕ್ಷ ಮಂಚೇಗೌಡ ಅವರ ಕಾರ್ಯವನ್ನು ಸ್ಮರಿಸಿದರು. ಸ್ವಾಗತ ಸಮಿತಿಯ ಕೋಶಾಧ್ಯಕ್ಷ ಜೆ.ಎಸ್. ರಘು ಸಮ್ಮೇಳನದ ಸ್ವಾಗತ ಸಮಿತಿ ಖಾತೆಗೆ ಮೂಡಿಗೆರೆ ಹಾಗೂ ಜಿಲ್ಲೆಯ ಕನ್ನಡಾಭಿಮಾನಿಗಳು ನಗದು ಮತ್ತು ಚೆಕ್ ಮೂಲಕ ನೀಡಿದ ವಂತಿಕೆಯಿಂದ ಒಟ್ಟು 11,46,000 ರು. ಗಳು ಬ್ಯಾಂಕ್ ಖಾತೆಗೆ ಜಮೆ ಆಗಿದ್ದು, ಸ್ವಾಗತ ಸಮಿತಿ ಸಮ್ಮೇಳನದ ವಿವಿಧ ಕಾರ್ಯಕ್ರಮಗಳಿಗಾಗಿ 10,92,785 ರು.ಗಳನ್ನು ವೆಚ್ಚ ಮಾಡಿದೆ. 53,248 ರು.ಗಳು ಉಳಿತಾಯ.
ಮೂಡಿಗೆರೆಯ ಸಮಸ್ತ ಜನತೆ ನೀಡಿದ ಸಹಕಾರವನ್ನು ಸ್ಮರಿಸಿಕೊಂಡು ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಲ್ಲಿ ಮೂಡಿಗೆರೆಯ ಜನತೆ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ೧೯ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವ ಕಾರ್ಯದರ್ಶಿ ಸೂರಿ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ವೆಂಕಟೇಶ್, ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಂ. ಶಾಂತಕುಮಾರ್, ಜಿಲ್ಲಾ ಸಂಚಾಲಕ ವಿಶಾಲ ನಾಗರಾಜ್, ಮೂಡಿಗೆರೆ ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಜಗದೀಪ್, ರಕ್ಷಣಾ ವೇದಿಕೆಯ ಹೊರಟ್ಟಿ ರಘು, ಅಂಬುಜಾಕ್ಷಿ, ಹರಿಣಾಕ್ಷಿ, ಜಿಲ್ಲಾ ಸಂಚಾಲಕ ಬಕ್ಕಿ ಮಂಜುನಾಥ್, ಬ್ರಿಜೇಷ್, ಪ್ರಕಾಶ್, ಹಸೈನರ್, ಹರೀಶ ಉಪಸ್ಥಿತರಿದ್ದರು. ಪೋಟೋ ಫೈಲ್ ನೇಮ್ 4 ಕೆಸಿಕೆಎಂ 4ಮೂಡಿಗೆರೆಯ ಜೆ.ಸಿ. ಕ್ಲಬ್ ಆವರಣದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರಾದ ಡಿ.ಎಸ್. ಜಯರಾಂ ಅವರ ಅಧ್ಯಕ್ಷತೆಯಲ್ಲಿ ನಡೆದ ಕಸಾಪ ಸಮ್ಮೇಳನದ ಲೆಕ್ಕಪತ್ರ ಮಂಡನೆ ಸಭೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.