ಧರ್ಮಸ್ಥಳದ ಮೇಲೆ ಭಕ್ತರಿಟ್ಟಿರುವ ನಂಬಿಕೆ ಉಳಿಸಿ

| Published : Aug 17 2025, 01:32 AM IST

ಧರ್ಮಸ್ಥಳದ ಮೇಲೆ ಭಕ್ತರಿಟ್ಟಿರುವ ನಂಬಿಕೆ ಉಳಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಧರ್ಮಸ್ಥಳ ಕ್ಷೇತ್ರದ ಮೇಲೆ ಭಕ್ತರು ಇಟ್ಟಿರುವ ನಂಬಿಕೆಯನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ ಹೇಳಿದರು.

ರಾಮನಗರ: ಧರ್ಮಸ್ಥಳ ಕ್ಷೇತ್ರದ ಮೇಲೆ ಭಕ್ತರು ಇಟ್ಟಿರುವ ನಂಬಿಕೆಯನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ ಹೇಳಿದರು.

ನಾಲ್ಕನೇ ಶ್ರಾವಣ ಶನಿವಾರ ಹಿನ್ನೆಲೆ ರಾಮನಗರದ ಇತಿಹಾಸ ಪ್ರಸಿದ್ಧ ಶ್ರೀ ರಾಮದೇವರ ಬೆಟ್ಟಕ್ಕೆ ಭೇಟಿ ಕೊಟ್ಟು ಶ್ರೀ ಪಟ್ಟಾಭಿರಾಮನ ದರ್ಶನ ಪಡೆದು ನಾಲ್ಕನೇ ಶ್ರಾವಣ ಶನಿವಾರದ ವಿಶೇಷ ಪೂಜೆ ಸಲ್ಲಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಚಿವ ದಿನೇಶ್‌ಗುಂಡೂರಾವ್ ಅವರೇ ಎಡ ಪಂಥೀಯರ ಒತ್ತಡಕ್ಕೆ ಮಣಿದು ಎಸ್‌ಐಟಿ ರಚನೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡಾ ಷಡ್ಯಂತ್ರ ಅಂದಿದ್ದಾರೆ. ಉಪ ಮುಖ್ಯಮಂತ್ರಿಗಳು, ಸಚಿವರೇ ಹೀಗೆ ಹೇಳಿದ ಮೇಲೆ ಆ ಷಡ್ಯಂತ್ರವನ್ನು ಭೇದಿಸಬೇಕು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಇದರ ಹಿಂದೆ ಇರುವವರನ್ನು ಪತ್ತೆ ಮಾಡಬೇಕು. ಆ ಕೆಲಸವನ್ನ ಡಿ.ಕೆ.ಶಿವಕುಮಾರ್ ಅವರೇ ಮಾಡಬೇಕು ಎಂದು ತಿಳಿಸಿದರು.

ಪ್ರಕೃತಿ ನಡುವೆಯಿರುವ ಪಟ್ಟಾಭಿರಾಮನ ವಿಶೇಷ ದೇವಾಲಯ ಇದಾಗಿದೆ. ಮೊದಲ ಬಾರಿಗೆ ರಾಮದೇವರ ಬೆಟ್ಟಕ್ಕೆ ಬಂದಿದ್ದೇನೆ. ಸುಗ್ರೀವ ಈ ದೇವಾಲಯವನ್ನು ನಿರ್ಮಾಣ ಮಾಡಿದ ಇತಿಹಾಸ ಸಹ ಇದೆ. ದೇವಾಲಯ ಮತ್ತಷ್ಟು ಅಭಿವೃದ್ಧಿ ಆಗಬೇಕು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಿದೆ ಎಂದು ಹೇಳಿದರು.

ಮುಂದೆ 2028ಕ್ಕೆ ಬಹುಮತದೊಂದಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ಅಧಿಕಾರಕ್ಕೆ ಬರಲಿದೆ. ನಮ್ಮ ಸರ್ಕಾರ ಬಂದ ಮೇಲೆ ಈ ದೇವಾಲಯ ಅಭಿವೃದ್ಧಿಗೆ ಮುಂದಾಗುತ್ತೇವೆ ಎಂದು ಪ್ರತಾಪ್ ಸಿಂಹ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

16ಕೆಆರ್ ಎಂಎನ್ 7.ಜೆಪಿಜಿ

ರಾಮನಗರದ ಶ್ರೀ ರಾಮದೇವರ ಬೆಟ್ಟಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ ಕೊಟ್ಟು ಶ್ರೀ ಪಟ್ಟಾಭಿರಾಮನ ದರ್ಶನ ಪಡೆದು ನಾಲ್ಕನೇ ಶ್ರಾವಣ ಶನಿವಾರದ ವಿಶೇಷ ಪೂಜೆ ಸಲ್ಲಿಸಿದರು.