- ಸುರಪುರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಆರ್‌ವಿಎನ್ ಪ್ರತಿಪಾದನೆ
ಕನ್ನಡಪ್ರಭ ವಾರ್ತೆ ಸುರಪುರದೇಶದ ಸ್ವಾತಂತ್ರಕ್ಕಾಗಿ ನಮ್ಮ ಹಿರಿಯರ ತ್ಯಾಗ, ಸತತ ಹೋರಾಟ ಮತ್ತು ಬಲಿದಾನದಿಂದ ಲಭಿಸಿರುವ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ನಗರದ ಶ್ರೀ ಪ್ರಭು ಕಾಲೇಜಿನ ಮೈದಾನದಲ್ಲಿ ಶನಿವಾರ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ, ಪಂಡಿತ್ ಜವಾಹರಲಾಲ್ ನೆಹರು, ನೇತಾಜಿ ಸುಭಾಷ್ಚಂದ್ರ ಭೋಸ್, ಡಾ.ಬಿ.ಆರ್.ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್, ಭಗತ್‌ಸಿಂಗ್ ಸೇರಿದಂತೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಹಾಗೂ ಸಗರನಾಡಿನ ಸುರಪುರ ಸಂಸ್ಥಾನದ ನಾಲ್ವಡಿ ರಾಜಾ ವೆಂಕಟಪ್ಪನಾಯಕ ಅವರ ದೇಶ ಪ್ರೇಮ ಹಾಗೂ ಕೊಡುಗೆಯನ್ನು ಸ್ಮರಿಸಿದರು.ಕಂದಾಯ ಇಲಾಖೆ, ಸಾಹಿತ್ಯ, ಸಂಗೀತ, ಪತ್ರಿಕೋದ್ಯಮ, ಶಿಕ್ಷಣ, ಕೃಷಿ, ಕಲೆ, ಕ್ರೀಡೆ ಹಾಗೂ ಭರತನಾಟ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಹಾಗೂ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದರು. ವಿಶೇಷವಾಗಿ ಪೇಠ ಅಮ್ಮಾಪುರ ಸಗರನಾಡು ಶಾಲೆಯ ವಿದ್ಯಾರ್ಥಿಗಳು ಮಲ್ಲಗಂಬ ಕಸರತ್ತು ಪ್ರದರ್ಶಿಸಿ, ವಿವಿಧ ಯೋಗಾಸನ, ಸಾಹಸ ಭಂಗಿ ಹಾಗೂ ಸಮತೋಲನ ಕಸರತ್ತುಗಳ ಮೂಲಕ ಗಮನ ಸೆಳೆದರು.
ತಾಲೂಕು ಆರೋಗ್ಯಾಧಿಕಾರಿ ರಾಜಾ ವೆಂಕಪ್ಪನಾಯಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ, ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಕೇಂದ್ರದ ಅಧ್ಯಕ್ಷ ರಾಜಾ ಸಂತೋಷ ನಾಯಕ, ಡಿವೈಎಸ್ಪಿ ಜಾವೀದ್ ಇನಾಮದಾರ, ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್, ಸಮಾಜ ಕಲ್ಯಾಣಾಧಿಕಾರಿ ಮಹ್ಮದ್ ಸಲೀಂ, ಪೊಲೀಸ್ ಇನ್ಸ್ಪೆಕ್ಟರ್ ಉಮೇಶ ಎಂ. ನಾಯಕ, ಪೌರಾಯುಕ್ತ ಬಸವರಾಜ ಟಣಕೆದಾರ, ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ.ಸುರೇಶ ಹಚ್ಚಡ್, ಸಿಡಿಪಿಓ ಲಾಲಸಾಬ್ ಪೀರಾಪುರ, ವಾಲ್ಮೀಕಿ ಸಮಾಜದ ವಾಲ್ಮೀಕಿ ಅಧ್ಯಕ್ಷ ಭೀಮಗೌಡ ವಿ. ಲಕ್ಷ್ಮೀ, ನಿಂಗಣ್ಣ ಬಾಚಿಮಟ್ಟಿ, ಮಲ್ಲಣ್ಣ ಸಾಹುಕಾರ ಮುಧೋಳ್, ದೊಡ್ಡ ದೇಸಾಯಿ, ರಮೇಶ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ, ಬಸನಗೌಡ ಪಾಟೀಲ್, ಸುವರ್ಣ ಸಿದ್ರಾಮ ಎಲಿಗಾರ, ಲಕ್ಷ್ಮೀ ಮಲ್ಲಿಕಾರ್ಜುನ ಬಿಲ್ಲವ್, ನಾಟೇಕರ್, ರಾಮನಗೌಡಮಾಲಿ ಪಾಟೀಲ್, ಯಂಕಣ್ಣ ಟನಕೇದಾರ, ರವಿಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ, ಸಾರ್ವಜನಿಕರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಾಜಶೇಖರ ದೇಸಾಯಿ ಮತ್ತು ಪಂಡಿತ ನಿಂಬೂರ ನಿರೂಪಿಸಿದರು. ಶಿಕ್ಷಕ ಖಾದರ ಪಟೇಲ್ ವಂದಿಸಿದರು.-
1ವೈಡಿಆರ್5 : ಸುರಪುರದ ಶ್ರೀ ಪ್ರಭು ಕಾಲೇಜು ಮೈದಾನದಲ್ಲಿ ಶನಿವಾರ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಮಾತನಾಡಿದರು.-
1ವೈಡಿಆರ್6 : ಸುರಪುರದ ಶ್ರೀ ಪ್ರಭು ಕಾಲೇಜು ಮೈದಾನದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೇಠ ಅಮ್ಮಾಪುರ ಸಗರನಾಡು ಶಾಲೆಯ ವಿದ್ಯಾರ್ಥಿಗಳು ಮಲ್ಲಗಂಬ ಕಸರತ್ತು, ವಿವಿಧ ಯೋಗಾಸನ ಹಾಗೂ ಸಾಹಸ ಭಂಗಿಗಳ ಮೂಲಕ ಗಮನ ಸೆಳೆದ ದೃಶ್ಯ.-
1ವೈಡಿಆರ್7 : ಸುರಪುರದ ಶ್ರೀ ಪ್ರಭು ಕಾಲೇಜು ಮೈದಾನದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.-
1ವೈಡಿಆರ್8 : ಸುರಪುರದ ಶ್ರೀ ಪ್ರಭು ಕಾಲೇಜು ಮೈದಾನದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಸಾಹಿತ್ಯ, ಸಂಗೀತ, ಪತ್ರಿಕೋದ್ಯಮ, ಶಿಕ್ಷಣ, ಕೃಷಿ, ಕಲೆ, ಕ್ರೀಡೆ ಹಾಗೂ ಭರತನಾಟ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ, ಗೌರವಿಸಲಾಯಿತು.---000---