ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ

| Published : Mar 23 2024, 01:11 AM IST

ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ,

ಕನ್ನಡಪ್ರಭ ವಾರ್ತೆ ಮೈಸೂರು

ಅಮೃತ ಸ್ವರೂಪವಾದ ನೀರು ಜೀವ ಸಂಕುಲಕ್ಕೆ ಆಧಾರ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ ಹೇಳಿದರು.

ಚಾಮುಂಡಿಪುರಂನ ಅಪೂರ್ವ ಸ್ನೇಹ ಬಳಗ ಹಾಗೂ ಅರಿವು ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ವಿಶ್ವ ಜಲ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹೋಟೆಲ್ ಗಳಲ್ಲಿ ಗ್ರಾಹಕರು ನೀರನ್ನು ಹಿತಮಿತವಾಗಿ ಬಳಸುವ ಮೂಲಕ ನೀರನ್ನು ಸಂರಕ್ಷಿಸಬೇಕೆಂದು ಅವರು ಮನವಿ ಮಾಡಿ, ನೀರಿನ ಮಹತ್ವದ ಜಾಗೃತಿಯುಳ್ಳ ಕರಪತ್ರವನ್ನು ಅಂಟಿಸಿ ಗ್ರಾಹಕರಲ್ಲಿ ಜಾಗೃತಿ ಮೂಡಿಸಿ ಮಾತನಾಡಿದರು.

ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ, ಗ್ರಾಹಕರು ಏನಾದರೂ ಅಂದುಕೊಳ್ಳಲಿ ಆದರೆ ನೀರನ್ನು ಮಿತವಾಗಿ ಬಳಸಿ ಎಂಬಂತಹ ಜಾಗೃತಿಯ ಬರಹಗಳು ಹೋಟೆಲ್ ಗೋಡೆಗಳಲ್ಲಿ ಕಾಣಿಸುವಂತೆ ಪ್ರಕಟಿಸುವುದು ಒಳಿತು, ನೀರಿನ ತೀವ್ರತೆಯ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ ನೀರಿನ ಮಹತ್ವವಾದ ಜಾಗೃತಿಯ ಪೋಸ್ಟರ್ ಗಳನ್ನು ಅಂಟಿಸಿ ಇನ್ನು ಹೆಚ್ಚು ಗ್ರಾಹಕರಿಗೆ ಜಾಗೃತಿ ಮೂಡಿಸಲು ಮುಂದಾಗೋಣ ಎಂದು ಹೇಳಿದರು.

ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಸುರೇಶ್, ವಿಕ್ರಮ ಅಯ್ಯಂಗಾರ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್, ಪ್ರಸಾದ್ ಜೆಟ್ಟಿ, ಸುರೇಶ್ ಗೋಲ್ಡ್, ಸಂದೀಪ್, ಧರ್ಮೇಂದ್ರ, ನಾಗೇಶ್, ಶ್ರೀಕಾಂತ್ ಕಶ್ಯಪ್, ದಯಾನಂದ್ ಇದ್ದರು.