ಸಾರಾಂಶ
ಫಿಲಿಫೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ದೇವನಹಳ್ಳಿ: ಫಿಲಿಫೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಫರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಅಲ್ಲಿನ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಫಿಲಿಫೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ.ಆರತಿ ಕೃಷ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಹಾಗೂ ಫಿಲಿಫೈನ್ಸ್ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.೦೭ ದೇವನಹಳ್ಳಿ ೦೧ ಚಿತ್ರಸುದ್ದಿ : ಫಿಲಿಫೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.