ವಕ್ಫ್ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ

| Published : Apr 06 2025, 01:50 AM IST

ವಕ್ಫ್ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ
Share this Article
  • FB
  • TW
  • Linkdin
  • Email

ಸಾರಾಂಶ

ವಕ್ಫ್ ಆಡಳಿತದಲ್ಲಿ ಪಾರದರ್ಶಕತೆ ತರುತ್ತೇವೆ, ವಕ್ಫ್ ಸೊತ್ತನ್ನು ಸಮರ್ಪಕವಾಗಿ ಮುಸ್ಲಿಮರ ಪ್ರಯೋಜನಕ್ಕಾಗಿ ಬಳಸುತ್ತೇವೆ, ಭ್ರಷ್ಟಾಚಾರವನ್ನು ನಿಗ್ರಹಿಸುತ್ತೇವೆ ಎಂದು ಹೇಳುತ್ತಿರುವ ಮೋದಿ ಸರ್ಕಾರ, ಈ ಮಸೂದೆಯಲ್ಲಿ ಅದಕ್ಕೆ ತೀರಾ ತದ್ವಿರುದ್ಧವಾದ ಅಂಶಗಳನ್ನೇ ಯಾಕೆ ತಂದಿದೆ ಎಂಬುದಕ್ಕೆ ಉತ್ತರ ನೀಡಬೇಕಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಮಹಮ್ಮದ್ ಮೌಲಾ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಮೋದಿ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಮಸೂದೆ ನಮ್ಮ ದೇಶದ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿರುವ ಮಸೂದೆಯಾಗಿದೆ. ಇದು ವಕ್ಫ್ ಸೊತ್ತುಗಳನ್ನು ಸಂರಕ್ಷಿಸುವ, ವಕ್ಫ್ ಆಡಳಿತದಲ್ಲಿ ಪಾರದರ್ಶಕತೆ ತರುವ ಹೆಸರಿನಲ್ಲಿ ವಕ್ಫ್ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವ ಹುನ್ನಾರವಾಗಿದೆ. ಈ ಸಂವಿಧಾನ ವಿರೋಧಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಮಹಮ್ಮದ್ ಮೌಲಾ ಆಗ್ರಹಿಸಿದ್ದಾರೆ.ವಕ್ಫ್ ಆಡಳಿತದಲ್ಲಿ ಪಾರದರ್ಶಕತೆ ತರುತ್ತೇವೆ, ವಕ್ಫ್ ಸೊತ್ತನ್ನು ಸಮರ್ಪಕವಾಗಿ ಮುಸ್ಲಿಮರ ಪ್ರಯೋಜನಕ್ಕಾಗಿ ಬಳಸುತ್ತೇವೆ, ಭ್ರಷ್ಟಾಚಾರವನ್ನು ನಿಗ್ರಹಿಸುತ್ತೇವೆ ಎಂದು ಹೇಳುತ್ತಿರುವ ಮೋದಿ ಸರ್ಕಾರ, ಈ ಮಸೂದೆಯಲ್ಲಿ ಅದಕ್ಕೆ ತೀರಾ ತದ್ವಿರುದ್ಧವಾದ ಅಂಶಗಳನ್ನೇ ಯಾಕೆ ತಂದಿದೆ ಎಂಬುದಕ್ಕೆ ಉತ್ತರ ನೀಡಬೇಕಿದೆ ಎಂದರು.

ನಮ್ಮ ಸರ್ಕಾರದಲ್ಲಿ ಯಾವುದೇ ಧಾರ್ಮಿಕ ತಾರತಮ್ಯ ಇಲ್ಲ ಎಂದು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾಷಣ ಮಾಡುವ ಪ್ರಧಾನಿ ಮೋದಿ, ವಕ್ಫ್ ಮಸೂದೆಯಲ್ಲಿ ಎದ್ದು ಕಾಣುವಂತಹ ತಾರತಮ್ಯದ ನೀತಿಗಳನ್ನೇ ಸೇರಿಸಿರುವುದು ವಿಪರ್ಯಾಸ. ಪ್ರಧಾನಿಯವರು ಭಾಷಣಗಳಲ್ಲಿ ಹೇಳುವಂತೆ ನಿಜವಾಗಿಯೂ ಮುಸ್ಲಿಂ ಸಮುದಾಯದ ಬಗ್ಗೆ ಪ್ರಾಮಾಣಿಕ ಕಾಳಜಿ ಉಳ್ಳವರು ಎಂದಾದರೆ ಈ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪುನರ್ ವಿಮರ್ಶೆ ನಡೆಸಬೇಕು ಎಂದು ಹೇಳಿದರು.