, ಅಧ್ಯಕ್ಷ ಶ್ರೀ ಮುಕ್ತಿದಾನಂದಜೀ, ರಾಮಕೃಷ್ಣ ಆಶ್ರಮ

ಕನ್ನಡಪ್ರಭ ವಾರ್ತೆ ಮೈಸೂರುಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್‌ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಮುಕ್ತಿದಾನಂದಜೀ ಅವರು ವಿಜಯನಗರದ ಸಾಹಿತ್ಯ ಭವನ ಆವರಣದಲ್ಲಿ ಇರಿಸಿದ್ದ ಗೋಪಾಲ್‌ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಶ್ರೀರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಕೇಂದ್ರದ ಶ್ರೀ ಮಹಾಮೇಧಾನಂದಜಿ ಇದ್ದರು. ಮೈಸೂರು ವಾಣಿಜ್ಯ ಕೈಗಾರಿಕಾ ಸಂಸ್ಥೆಮೈಸೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಡ್ಡಿಕೆರೆ ಗೋಪಾಲ್ ಅವರ ನಿಧನಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಡಾ.ಕೆ.ಬಿ. ಲಿಂಗರಾಜು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಗೋಪಾಲ್ ಅವರು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸೇವೆಗೆ ತಮ್ಮದೇ ಆದ ಮಹತ್ವದ ಕೊಡುಗೆ ನೀಡಿದ ಕನ್ನಡಪರ ಹೋರಾಟಗಾರರಾಗಿದ್ದರು. ಮೈಸೂರಿನಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಬೆಳೆಸುವಲ್ಲಿ ಅವರು ನಿರಂತರವಾಗಿ ಶ್ರಮಿಸಿದ್ದರು.ಸರಳ, ಸೌಮ್ಯ ಸ್ವಭಾವದವರಾಗಿದ್ದ ಅವರು ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು. ಕನ್ನಡದ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಅವರು ಯುವ ಸಾಹಿತಿಗಳು, ಬರಹಗಾರರು ಮತ್ತು ಕನ್ನಡಾಭಿಮಾನಿಗಳನ್ನು ಪ್ರೋತ್ಸಾಹಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ.ಅವರ ಅಗಲಿಕೆ ಮೈಸೂರು ನಗರ ಮಾತ್ರವಲ್ಲದೆ ಇಡೀ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದು ತಿಳಿಸಿದ್ದಾರೆ. ಕೆ. ಮರೀಗೌಡ ಸಂತಾಪಮಡ್ಡೀಕೆರೆ ಗೋಪಾಲ್ ಅವರು ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಗಲಿಕೆಯಿಂದ ಜಿಲ್ಲೆಯ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಡಾ ಮಾಜಿ ಅಧ್ಯಕ್ಷ ಕೆ. ಮರೀಗೌಡ ಸಂತಾಪ ಸೂಚಿಸಿದ್ದಾರೆ.ಕನ್ನಡ ನಾಡು, ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಮಡ್ಡೀಕೆರೆ ಗೋಪಾಲ್ ಅವರ ಕೊಡುಗೆ ಅವಿಸ್ಮರಣೀಯ. ಕನ್ನಡದ ಸೇವೆಯನ್ನು ಕೇವಲ ಕಾರ್ಯಕ್ರಮಗಳಿಗೆ ಸೀಮಿತಗೊಳಿಸದೆ, ಸಾಹಿತ್ಯಾಸಕ್ತರು, ಯುವ ಬರಹಗಾರರು ಹಾಗೂ ಕನ್ನಡಪರ ಮನಸ್ಸುಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅವರು ನಿರಂತರವಾಗಿ ಶ್ರಮಿಸಿದ್ದಾಗಿ ಸ್ಮರಿಸಿದ್ದಾರೆ.ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಗೋಪಾಲ್ ಅವರು ಮೈಸೂರಿನಲ್ಲಿ ಹಲವು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದ್ದರು. ಕನ್ನಡ ಸಾಹಿತ್ಯದ ಮೇಲಿನ ಅವರ ಅಪಾರ ಪ್ರೀತಿ, ಸರಳ ನಡೆ-ನುಡಿ ಹಾಗೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವ ಗುಣ ಅವರನ್ನು ಸಾಹಿತ್ಯ ವಲಯದಲ್ಲಿ ವಿಶಿಷ್ಟವಾಗಿ ಗುರುತಿಸುವಂತೆ ಮಾಡಿತ್ತು. ಮಡ್ಡೀಕೆರೆ ಗೋಪಾಲ್ ಅವರ ಅಗಲಿಕೆ ವೈಯಕ್ತಿಕವಾಗಿ ನನಗೆ ನೋವು ತಂದಿದೆ. ಕನ್ನಡದ ಕೆಲಸವನ್ನು ನಿಷ್ಠೆಯಿಂದ ಮಾಡುತ್ತಿದ್ದ ಅಪರೂಪದ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ಅವರ ಕನ್ನಡಪರ ಕಾಳಜಿ, ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸಮಾಜಮುಖಿ ಚಿಂತನೆ ಸದಾ ಸ್ಮರಣೀಯ ಎಂದು ಅವರು ತಿಳಿಸಿದ್ದಾರೆ.ಗೋಪಾಲ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಪರಿಷತ್‌ನ ಚಟುವಟಿಕೆಗಳಿಗೆ ಮಾತ್ರವಲ್ಲದೆ, ಮೈಸೂರಿನ ಕನ್ನಡಪರ ಹಾಗೂ ಸಾಂಸ್ಕೃತಿಕ ವಲಯಕ್ಕೂ ದೊಡ್ಡ ಶೂನ್ಯ ನಿರ್ಮಾಣವಾಗಿದೆ. ಅವರ ಆದರ್ಶ ಮತ್ತು ಕನ್ನಡ ಸೇವೆಯ ಹೆಜ್ಜೆ ಗುರುತುಗಳು ಮುಂದಿನ ಪೀಳಿಗೆಗೆ ಮಾದರಿಯಾಗಿವೆ ಎಂದು ಮರೀಗೌಡ ಹೇಳಿದ್ದಾರೆ. ಮೈಸೂರು ಕನ್ನಡ ವೇದಿಕೆಬಾರದ ಲೋಕಕ್ಕೆ ಪಯಣ ಸಾಗಿದ ಕನ್ನಡ ಸಾಹಿತ್ಯ ಪರಿಷತ್ತಿನ ಮುತ್ತು ನಮ್ಮೊಡನೆ ಇಲ್ಲ ಎಂದು ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಎಸ್‌. ಬಾಲಕೃಷ್ಣ ತಿಳಿಸಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತಿನ ಮೈಸೂರು ಜಿಲ್ಲಾಧ್ಯಕ್ಷರಾದ ಮಡ್ಡಿಗೆರೆ ಗೋಪಾಲ್ ನಮ್ಮನ್ನು ಆಗಲಿರುವುದು ಮನಸ್ಸಿಗೆ ಬಹಳ ನೋವನ್ನುಂಟು ಮಾಡಿದೆ. ಕನ್ನಡ ರಾಜ್ಯೋತ್ಸವ ದಿನದಂದು ನವಂಬರ್ ನಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಮಾಡಬೇಕೆನ್ನುವ ಕನಸು ಅವರದಾಗಿತ್ತು ಇಂಥ ಮಹಾನ್ ವ್ಯಕ್ತಿ ನಿಧನ ನಮ್ಮೆಲ್ಲರಿಗೆ ಆಘಾತ ಉಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.