ಸಾರಾಂಶ
ಸುಪ್ರಿಂ ಕೋರ್ಟ್ತೀರ್ಪಿನಂತೆ ರಾಜ್ಯ ಸರ್ಕಾರ ಪ.ಜಾತಿಯವರಿಗೆ ಒಳ ಮೀಸಲಾತಿ ಜಾರಿಗೊಳಿಸಬೇಕು
ಕನ್ನಡಪ್ರಭ ವಾರ್ತೆ ನಂಜನಗೂಡು
ಸುಪ್ರಿಂ ಕೋರ್ಟ್ತೀರ್ಪಿನಂತೆ ರಾಜ್ಯ ಸರ್ಕಾರ ಪ.ಜಾತಿಯವರಿಗೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸೆ. 24ರಂದು ನಗರದಲ್ಲಿ ಬೃಹತ್ಪ್ರತಿಭಟನೆ ನಡೆಸಲಾಗುದು ಎಂದು ತಾಲೂಕು ಆದಿ ಜಾಂಬವ ಸಂಘದ ಅಧ್ಯಕ್ಷ ಸ್ವಾಮಿ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮಂಗಳವಾರ ಬೆಳಗ್ಗೆ ನಗರದ ಅಂಬೇಡ್ಕರ್ವೃತ್ತದಿಂದ ಮೆರವಣಿಗೆ ಹೊರಟು, ಹುಲ್ಲಹಳ್ಳಿ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ಹಾಗೂ ಪ್ರತಿಭಟನೆ ನಡೆಸಲಾಗುವುದು. ಮಾದಿಗ ಸಮಾಜವು ಆರ್ಧಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ. ಆ. 1ರಂದು ಸುಪ್ರಿಂ ಕೋರ್ಟ್ನ್ಯಾಯಪೀಠ ಸಂವಿಧಾನಬದ್ಧವಾಗಿ ಆಯಾ ರಾಜ್ಯಗಳು ಒಳ ಮೀಸಲಾತಿ ನೀಡಬೇಕು ಎಂದು ಆದೇಶ ನೀಡಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯವಹಿಸಿದೆ ಎಂದು ಅವರು ಹೇಳಿದರು.ಮುಖಂಡ ದೇವರಾಜ್ಮಾತನಾಡಿ, ಕಳೆದ 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಆಗಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಒಳ ಒಳಮೀಸಲಾತಿ ಜಾರಿಗೊಳಿಸಲು ಎ.ಜೆ. ಸದಾಶಿವ ಅವರ ನೇತೃತ್ವದಲ್ಲಿ ಆಯೋಗ ರಚಿಸಿತ್ತು. ಬೇರೆ ಜನಾಂಗದ ಮೀಸಲಾತಿ ಕಿತ್ತು ನಮಗೆ ಕೊಡಿ ಎಂದು ಕೇಳುತ್ತಿಲ್ಲ. ಸಂವಿಧಾನ ಬದ್ಧವಾಗಿ ನಮ್ಮ ಪಾಲನ್ನು ನಮಗೆ ನೀಡಿ ಎಂದು ಕೇಳಿಕೊಳ್ಳುತ್ತಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕುಮಾರ್, ಸುಂದರ್ ರಾಜ್, ನವಿಲೂರು ಗ್ರಾಪಂ ಅಧ್ಯಕ್ಷ ರೇವಣ್ಣ, ಕರಿಯಪ್ಪ, ಪ್ರಸನ್ನ, ಮುರುಗೇಶ್, ಪುಟ್ಟಸ್ವಾಮಿ, ಸ್ವಾಮಿ, ರಾಜೇಶ್ ಇದ್ದರು.