23ಕೆಕೆಆರ್1:ಕುಕನೂರು ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷೆಯಾಗಿ ಲೀಲಾವತಿ ಪ್ರವೀಣಕುಮಾರ ಮುಧೋಳ, ಉಪಾಧ್ಯಕ್ಷರಾಗಿ ಮಂಜುಳಾ ಯಲ್ಲಪ್ಪ ಕಲ್ಮನಿ ಅವರು ಅಧಿಕೃತವಾಗಿ ಕಛೇರಿಯಲ್ಲಿ ಪದಗ್ರಹಣ ಸೋಮವಾರ ಜರುಗಿತು. | Kannada Prabha
Image Credit: KP
ಪಟ್ಟಣದ ಅಭಿವೃದ್ಧಿಗೆ ಶ್ರಮಿಸುತ್ತೇನೆ
ಕುಕನೂರು: ಸ್ಥಳೀಯ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ಲೀಲಾವತಿ ಪ್ರವೀಣಕುಮಾರ ಮುಧೋಳ, ಉಪಾಧ್ಯಕ್ಷರಾಗಿ ಮಂಜುಳಾ ಯಲ್ಲಪ್ಪ ಕಲ್ಮನಿ ಪಪಂ ಕಚೇರಿಯಲ್ಲಿ ಸೋಮವಾರ ಪದಗ್ರಹಣ ಮಾಡಿದರು.
ಪಟ್ಟಣ ಪಂಚಾಯತಿಯಲ್ಲಿ ಪದಗ್ರಹಣ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದ ಪಪಂ ಅಧ್ಯಕ್ಷೆ ಲೀಲಾವತಿ ಮುಧೋಳ ಮಾತನಾಡಿ, ಪಟ್ಟಣದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಪಪಂ ಉಪಾಧ್ಯಕ್ಷೆ ಮಂಜುಳಾ ಯಲ್ಲಪ್ಪ ಕಲ್ಮನಿ, ಪಪಂ ಮುಖ್ಯಾಧಿಕಾರಿ ನಾಗೇಶ, ಉದ್ಯಮಿ ಸತ್ಯನಾರಾಯಣಪ್ಪ ಹರಪನಹಳ್ಳಿ, ಕುಕನೂರು ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗಮೇಶ ಗುತ್ತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿದ್ದಯ್ಯ ಕಳ್ಳಿಮಠ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರೇಹಮಾನಸಾಬ್ ಮಕ್ಕಪ್ಪನವರ್, ಪಪಂ ಸದಸ್ಯರು, ಅಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.