ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪಿಆರ್‌ಒ ಹಾಗೂ ಎಪಿಆರ್‌ಒಗಳಿಗೆ ಹಾಗೂ ಪೋಲಿಂಗ್ ಅಧಿಕಾರಿಗಳಿಗೆ ತರಬೇತಿ ಜರುಗಿತು.
ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪಿಆರ್‌ಒ ಹಾಗೂ ಎಪಿಆರ್‌ಒಗಳಿಗೆ ಹಾಗೂ ಪೋಲಿಂಗ್ ಅಧಿಕಾರಿಗಳಿಗೆ ತರಬೇತಿ ಜರುಗಿತು.
ಕುಣಿಮೆಳ್ಳಿಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಹಾಗೂ ಜಿಲ್ಲಾ ತರಬೇತಿದಾರ ಅರವಿಂದ ಐರಣಿ ಮಾತನಾಡಿ, ಸುಗಮ, ವ್ಯವಸ್ಥಿತ ಹಾಗೂ ಶಾಂತಿಯುತ ಚುನಾವಣೆ ನಡೆಸಲು ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಬಹಳ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗುತ್ತದೆ ಹಾಗೂ ಚುನಾವಣಾ ಆಯೋಗದ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಕ್ರಿಯೆಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಿದ್ದು, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿದ್ದಾರೆ.
ಈ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುತ್ತದೆ. ಪ್ರತಿಯೊಂದು ಮತಗಟ್ಟೆಗೆ ಓರ್ವ ಮತಗಟ್ಟೆ ಅಧ್ಯಕ್ಷಾಧಿಕಾರಿ, ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿ 1 ಹಾಗೂ 2 ಸೇರಿ ನಾಲ್ಕು ಜನ ಅಧಿಕಾರಗಳ ತಂಡ ಇರುತ್ತದೆ. ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ಯಾವುದೇ ಲೋಪದೋಷಗಳು ಉಂಟಾಗದಂತೆ ಬಹಳ ಜಾಗೂರಕತೆಯಿಂದ ಕಾರ್ಯನಿರ್ವಹಿಸುವುದು ಬಹಳ ಮುಖ್ಯವಾಗಿರುತ್ತದೆ ಎಂದರು.ಆಯಾ ತಾಲೂಕು ತಹಸೀಲ್ದಾರ್ ಕಚೇರಿಗಳಲ್ಲಿ ಮಸ್ಟರಿಂಗ್ ಹಾಗೂ ಡಿ ಮಸ್ಟರಿಂಗ್ ಕಾರ್ಯ ಜರುಗಲಿದೆ. ಮತದಾನ ಪ್ರಕ್ರಿಯೆ ಕುರಿತು ಯಾವುದೇ ಸಂದೇಹಗಳಿದ್ದಲ್ಲಿ ಕೇಳಿ ಪರಿಹರಿಸಿಕೊಳ್ಳಬೇಕು. ಯಾವುದೇ ಗೊಂದಗಳಿಗೆ ಅವಕಾಶ ನೀಡಬಾರದು. ಪಾರದರ್ಶಕ ಹಾಗೂ ಯಶಸ್ವಿ ಚುನಾಚಣೆ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು ಹಾಗೂ ಚುನಾವಣೆ ಪ್ರಕ್ರಿಯೆ ಮತ್ತು ಮತದಾನ ಪ್ರಕ್ರಿಯೆ ಕುರಿತು ವಿವಾರವಾದ ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್., ಚುನಾವಣಾ ತಹಸೀಲ್ದಾರ್ ಅಮೃತಗೌಡ ಪಾಟೀಲ, ಪಿಆರ್‌ಒ ಹಾಗೂ ಎಪಿಆರ್‌ಒಗಳು ಹಾಗೂ ಪೋಲಿಂಗ್ ಅಧಿಕಾರಿಗಳು ಉಪಸ್ಥಿತರಿದ್ದರು.