ಜುಲೈ 26ರಂದು ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ

| Published : Jul 26 2025, 12:00 AM IST

ಜುಲೈ 26ರಂದು ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು.26 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು.26 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.

ಅಂದು ಬೆಳಗ್ಗೆ 10ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪಗೌಡ ದರ್ಶನಾಪುರ ಉದ್ಘಾಟಿಸಲಿದ್ದು, ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ ಶರಣಪ್ಪ ಮಾನೆಗಾರ, ಡಿಡಿಯು ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಭೀಮಣ್ಣ ಮೇಟಿ, ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಭವಾನಿಸಿಂಗ್ ಠಾಕೂರ್, ಸಂಘದ ರಾಜ್ಯ ಪರಿಷತ್ತಿನ ಸದಸ್ಯ ರಾಘವೇಂದ್ರ ಕಾಮನಟಗಿ, ಪ್ರಧಾನ ಕಾರ್ಯದರ್ಶಿ ಮಹೇಶ ಕಲಾಲ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

"ಕನ್ನಡಪ್ರಭ "ದ ಛಾಯಾಚಿತ್ರಗ್ರಾಹಕ ಮಂಜುನಾಥ್‌, ಸಗರ್‌ಗೆ ಪ್ರಶಸ್ತಿ

ಜಿಲ್ಲಾ ಪತ್ರಕರ್ತರ ಸಂಘದಿಂದ ಕೊಡಮಾಡುವ, ಪತ್ರಿಕೋದ್ಯಮದಲ್ಲಿ ಸಾಧನೆಗೈದ ಜಿಲ್ಲಾ ಮಟ್ಟದ ಪ್ರಶಸ್ತಿಗೆ "ಕನ್ನಡಪ್ರಭ "ದ ಯಾದಗಿರಿ ಜಿಲ್ಲೆಯ ಛಾಯಾಗ್ರಾಹಕ ಮಂಜುನಾಥ್‌ ಬಿರಾದರ್‌, ಸಗರ ಅವರು ಭಾಜನರಾಗಿದ್ದಾರೆ. ರಾಜ್ಯ- ರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದ ಮಂಜುನಾಥ್‌ ಅವರ ವಿಶೇಷ ಛಾಯಾಚಿತ್ರಗಳು ಅನೇಕರ ಶ್ಲಾಘನೆಗೆ ಪಾತ್ರವಾಗಿವೆ. ಶನಿವಾರ ಯಾದಗಿರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಂಜುನಾಥ್‌ ಜೊತೆ ವಿವಿಧ ಪತ್ರಕರ್ತರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪತ್ರಕರ್ತ ಪಿ. ಹನುಮಂತು ಮತ್ತು ಪತ್ರಿಕಾ ವಿತರಕ ಸಾಹೇಬಗೌಡ ಕಲಾಲ್‌ ಅವರನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉಭಯರಿಗೆ ತಲಾ 5 ಸಾವಿರ ರು.ಗಳ ನಗದು ನೀಡಿ ಗೌರವಿಸಲಾಗುವುದು. ಅದೇ ತೆರನಾಗಿ, ಪತ್ರಿಕೋದ್ಯಮದಲ್ಲಿ ಸಾಧನೆಗೈದ ಪತ್ರಕರ್ತರಾದ ಮಲ್ಲಿಕಾರ್ಜುನ ಕಾಡಂನೋ‌ರ್, ಆನಂದ ಗೋರ್ಕಲ್‌, ಬಾಲಪ್ಪ ಕುಪ್ಪಿ, ಬಸವರಾಜ ಕರೆಗಾರ, ದಯಾನಂದ ಹಿರೇಮಠ, ಖಾಜಾ ಕಲೀಮುದ್ದೀನ್ ಫರೀದಿ, ಮಹೇಶ್‌ ಗಣೇ‌ರ, ಡಾ. ಮಲ್ಲಿಕಾರ್ಜುನ ಆಶನಾಳ ಸೇರಿ 9 ಜನರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಜತೆಗೆ ತಲಾ 2 ಸಾವಿರ ರೂ.ನಗದು ನೀಡಿ ಗೌರವಿಸಲಾಗುತ್ತದೆ.