ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಗಸ್ಟ್ ೨ ರಂದು ಶನಿವಾರ ಮಾಧ್ಯಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಎಚ್. ವೇಣುಕುಮಾರ್ ತಿಳಿಸಿದರು.ಈ ಬಗ್ಗೆ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ನಗರದ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಪವನಪುತ್ರ ರೆಸಾರ್ಟ್ ನಲ್ಲಿ ಬೆಳಗ್ಗೆ ೧೧ ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಶ್ರೀ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಆಶೀರ್ವಾದದೊಂದಿಗೆ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್ ಅವರ ಗೌರವ ಉಪಸ್ಥಿತಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶ ಖಾನಮ್ ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ ಎಂದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಟಿ.ವಿ. ಶಿವಾನಂದ ತಗಡೂರು ಆಶಯ ನುಡಿಗಳನ್ನಾಡಲಿದ್ದು, ಕನ್ನಡಪ್ರಭ ಮತ್ತು ಏಷ್ಯಾನೆಟ್ ಪ್ರಧಾನ ಸಂಪಾದಕರಾದ ರವಿ ಹೆಗಡೆ ಪ್ರಧಾನ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್ ವೇಣುಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಬಿ. ಮದನ ಗೌಡರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಶಾಸಕ ಎಚ್.ಪಿ.ಸ್ವರೂಪ್, ಮಹಾನಗರ ಪಾಲಿಕೆ ಮಹಾಪೌರ ಚಂದ್ರೇಗೌಡ, ಐಎಫ್‌ಡಬ್ಲ್ಯೂಜೆ ಅಧ್ಯಕ್ಷ ಬಿ. ವಿ ಮಲ್ಲಿಕಾರ್ಜುನಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್ ಪೂರ್ಣಿಮಾ, ಹಿರಿಯ ವಾರ್ತಾಧಿಕಾರಿ ಮೀನಾಕ್ಷಮ್ಮ, ಮಾಜಿ ಎಂಎಲ್ಸಿ ಎಮ್.ಎ. ಗೋಪಾಲಸ್ವಾಮಿ, ರಾಜ್ಯ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾದ ರವಿ ನಾಗಲಗೂಡು , ಕಾಂಗ್ರೆಸ್ ಮುಖಂಡ ಎಂ.ಸಿ. ಕೃಷ್ಣೇಗೌಡ, ಉದ್ಯಮಿ ಎನ್. ಆರ್. ಅನಂತ್, ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ದೇವರಾಜೇಗೌಡ, ಉದ್ಯಮಿ ಲಕ್ಷ್ಮಣ ಗೌಡ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.ಇದೇ ವೇಳೆ ಸಂಘದ ಮಾಜಿ ಅಧ್ಯಕ್ಷರಾದ ಕೆ.ಆರ್ ಮಂಜುನಾಥ್, ಎಸ್.ಆರ್ ಪ್ರಸನ್ನ ಕುಮಾರ್ ಹಾಗೂ ಕೆ ಯುಡಬ್ಲ್ಯೂಜೆ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಜ್ಞಾನದೀಪ ಪತ್ರಿಕೆ ಸಂಪಾದಕ ಡಿ.ಜೆ. ರಾಜಗೋಪಾಲ್ ಅವರಿಗೆ ವಿಶೇಷ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಮಾಧ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುಟುಂಬಕ್ಕೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಪತ್ರಿಕಾ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿದ ಜಿಲ್ಲೆಯ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಗುವುದು ಮತ್ತು ಪತ್ರಕರ್ತರ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದರು.
ಸಮಾರೋಪ ಸಮಾರಂಭಶನಿವಾರ ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಅರಕಲಗೂಡು ಶಾಸಕ ಎ.ಮಂಜು ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಮಾರೋಪ ಭಾಷಣ ಮಾಡಲಿದ್ದು .ಶಾಸಕ ಸಿ.ಎನ್. ಬಾಲಕೃಷ್ಣ ಬಹುಮಾನ ವಿತರಿಸಲಿದ್ದಾರೆ. ಶಾಸಕ ಎಚ್.ಡಿ ರೇವಣ್ಣ, ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜು, ಎಚ್. ಕೆ ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಉದ್ಯಮಿಗಳಾದ ದಿವಾಕರ್ , ಶರತ್ ,ಕಂಚಮಾರನಹಳ್ಳಿ ಕಾಂತರಾಜು , ಹುಡಾ ಆಯುಕ್ತ ರಮೇಶ್, ಮಹಾನಗರ ಪಾಲಿಕೆ ಆಯುಕ್ತ ಕೃಷ್ಣಮೂರ್ತಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಸಂಘದ ಮಾಜಿ ಅಧ್ಯಕ್ಷ ಕೆ. ಆರ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬಿ.ಸಿ ಶಶಿಧರ್, ಉಪಾಧ್ಯಕ್ಷರಾದ ಕೆ.ಎಮ್. ಹರೀಶ್, ಎಚ್.ಟಿ. ಮೋಹನ್ ಕುಮಾರ್, ಕಾರ್ಯದರ್ಶಿಗಳಾದ ಪಿ.ಎ. ಶ್ರೀನಿವಾಸ್, ಸಿ.ಬಿ. ಸಂತೋಷ್ ಇತರರು ಇದ್ದರು.