ಸಾರಾಂಶ
- ಪತ್ರಕರ್ತರ ಸಂಘ ಅಧ್ಯಕ್ಷ ಕೋರಿ ಯೋಗೀಶ್ ಕುಳಗಟ್ಟೆ ಮಾಹಿತಿ
- - -ಹೊನ್ನಾಳಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಆಗಸ್ಟ್ 10ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಪತ್ರಿಕಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೋರಿ ಯೋಗೀಶ್ ಕುಳಗಟ್ಟೆ ಹೇಳಿದರು.
ಶುಕ್ರವಾರ ಶಾಸಕ ಡಿ.ಜಿ.ಶಾಂತನಗೌಡ ನಿವಾಸದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶಾಸಕರು ಬಿಡುಗಡೆಗೊಳಿಸಿದ ಸಂದರ್ಭ ಅವರು ಮಾತನಾಡಿದರು.ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಲಿದ್ದಾರೆ. ಪುರಸಭಾ ಅಧ್ಯಕ್ಷ ಎ.ಕೆ.ಮೈಲಪ್ಪ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಏಕಬೋಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್, ಹೊನ್ನಾಳಿ ಠಾಣೆ ಇನ್‌ಸ್ಪೆಕ್ಟರ್ ಎಚ್.ಸುನೀಲ್ ಕುಮಾರ್ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಯುವ ಸಾಹಿತಿ ದರ್ಶನ್ ಬಳ್ಳೇಶ್ವರ್ ಪತ್ರಿಕಾ ದಿನಾಚರಣೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದರು.
ಸಂಘದ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಹಿರಿಯ ಪತ್ರಕರ್ತರಿಗೆ ಮತ್ತು ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಹೊನ್ನಾಳಿ-ನ್ಯಾಮತಿ ತಾಲೂಕಿನ ಜನಪ್ರತಿನಿಧಿಗಳು, ರೈತ ಸಂಘದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.ಆಹ್ವಾನ ಪತ್ರಿಕೆ ಬಿಡುಗಡೆ ವೇಳೆ ಪತ್ರಕರ್ತರ ಸಂಘದ ಜಿಲ್ಲಾ ಪ್ರತಿನಿಧಿ ಎನ್.ಕೆ. ಆಂಜನೇಯ, ಪತ್ರಕರ್ತರಾದ ಟಿ.ಶ್ರೀನಿವಾಸ್, ರಾಜು ಜಿ.ಎಚ್., ಎಚ್.ಸಿ.ಮೃತ್ಯುಂಜಯ ಪಾಟೀಲ್, ಎಚ್.ಕೆ. ಮಲ್ಲೇಶ್, ಯು.ಬಿ.ಜಯಪ್ಪ ಮತ್ತಿತರರು ಉಪಸ್ಥಿತರಿದ್ದರು.
- - --8ಎಚ್.ಎಲ್.ಐ1.ಜೆಪಿಜಿ:
ಹೊನ್ನಾಳಿ ತಾಲೂಕು ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶಾಸಕ ಡಿ.ಜಿ.ಶಾಂತನಗೌಡ ಬಿಡುಗಡೆಗೊಳಿಸಿದರು.