ಕರ್ನಾಟಕದಲ್ಲಿ ರಜಪೂತ ಸಮಾಜದ ಜನಸಂಖ್ಯೆ ಕಡಿಮೆ ಇದ್ದರೂ, ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪಕ್ಷಭೇದ ಮರೆತು ಎಲ್ಲ ರಾಜಕೀಯ ಮುಖಂಡರು ಒಗ್ಗಟ್ಟಾಗಿ ರಾಜಪೂತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಪ್ರಯತ್ನಿಸಬೇಕು. ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಎಲ್ಲರೂ ಸೇರಿ ಮನವಿ ಸಲ್ಲಿಸಿ, ಸರ್ಕಾರದ ಮಟ್ಟದಲ್ಲಿ ಈ ಬೇಡಿಕೆ ಈಡೇರಿಸುವಂತಹ ಪ್ರಾಮಾಣಿಕ ಕೆಲಸ ಮಾಡುವುದಾಗಿ ಸಚಿವ ಡಾ.ಅಜಯಸಿಂಗ್ ಧರ್ಮಸಿಂಗ್ ಹೇಳಿದರು.
ಕನ್ನಡಪ್ರಭ ವಾರ್ತೆ ತಾಳಿಕೋಟೆ
ಕರ್ನಾಟಕದಲ್ಲಿ ರಜಪೂತ ಸಮಾಜದ ಜನಸಂಖ್ಯೆ ಕಡಿಮೆ ಇದ್ದರೂ, ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪಕ್ಷಭೇದ ಮರೆತು ಎಲ್ಲ ರಾಜಕೀಯ ಮುಖಂಡರು ಒಗ್ಗಟ್ಟಾಗಿ ರಾಜಪೂತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಪ್ರಯತ್ನಿಸಬೇಕು. ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಎಲ್ಲರೂ ಸೇರಿ ಮನವಿ ಸಲ್ಲಿಸಿ, ಸರ್ಕಾರದ ಮಟ್ಟದಲ್ಲಿ ಈ ಬೇಡಿಕೆ ಈಡೇರಿಸುವಂತಹ ಪ್ರಾಮಾಣಿಕ ಕೆಲಸ ಮಾಡುವುದಾಗಿ ಸಚಿವ ಡಾ.ಅಜಯಸಿಂಗ್ ಧರ್ಮಸಿಂಗ್ ಹೇಳಿದರು.ನಗರದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಕಂಚಿನಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಮೂರ್ತಿ ಅನಾವರಣ ಕೇವಲ ಒಂದು ಸಮಾಜಕ್ಕೆ ಸೀಮಿತವಾಗಿಲ್ಲ. ಎಲ್ಲ ಸಮಾಜದವರೂ ಗೌರವಿಸುವ ಕಾರ್ಯಕ್ರಮ. ಇತಿಹಾಸದಲ್ಲಿ ಅನೇಕ ರಾಜರು, ಮಹಾರಾಜರು ಆಳ್ವಿಕೆ ನಡೆಸಿ ಹೋಗಿದ್ದಾರೆ. ಆದರೆ, ಸುಮಾರು ೬೦೦-೭೦೦ ವರ್ಷಗಳ ನಂತರವೂ ಮಹಾರಾಣಾ ಪ್ರತಾಪ್ ಅವರ ಹೆಸರು ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ತಮ್ಮ ತಂದೆ ದಿ.ಧರ್ಮಸಿಂಗ್ ಅವರು ಜೇವರ್ಗಿ ಕ್ಷೇತ್ರದಲ್ಲಿ ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದದಿಂದ ಎಂಟು ಬಾರಿ ಶಾಸಕರಾಗಿ, ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಸಾಧ್ಯವಾಯಿತು. ಜೇವರ್ಗಿ ಕ್ಷೇತ್ರದಲ್ಲಿ ರಜಪೂತ ಸಮಾಜದ ಜನಸಂಖ್ಯೆ ನೂರಕ್ಕಿಂತ ಕಡಿಮೆ ಇದ್ದರೂ, ಎಲ್ಲ ಸಮಾಜದ ಜನರು ನಮ್ಮ ಕುಟುಂಬಕ್ಕೆ ನಿರಂತರ ಆಶೀರ್ವಾದ ನೀಡಿದ್ದಾರೆ. ಅವರ ಪ್ರೀತಿ, ವಿಶ್ವಾಸವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸ್ಮರಿಸಿದರು.