ಸಾರಾಂಶ
ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಿ ಸುಭದ್ರ ಸಮಾಜ ನಿರ್ಮಿಸಬೇಕು.
ತಳುವಗೇರಾದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ
ಕುಷ್ಟಗಿ:ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಿ ಸುಭದ್ರ ಸಮಾಜ ನಿರ್ಮಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್. ಪೂಜೇರಿ ಹೇಳಿದರು.
ತಾಲೂಕಿನ ತಳುವಗೇರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನೂ ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಸಿಡಿಪಿಒ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಕಾರ್ಯಕ್ರಮದ ಅಂಗವಾಗಿ ಕಾನೂನೂ ಅರಿವು ನೆರವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರುಸಮಾಜದಲ್ಲಿ ಮಹಿಳಾ ದೌರ್ಜನ್ಯ ಕಂಡು ಬಂದ ತಕ್ಷಣವೆ ಸಮೀಪದ ಪೊಲೀಸ್ ಠಾಣೆ ಅಥವಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗಮನಕ್ಕೆ ತರುವ ಮೂಲಕ ದೌರ್ಜನ್ಯ ತಡೆಗಟ್ಟಲು ಪ್ರಯತ್ನಿಸಬೇಕು ಎಂದರು.
ಸಿಡಿಪಿಒ ಯಲ್ಲಮ್ಮ ಹಂಡಿ ಮಾತನಾಡಿ, ಬಾಲ್ಯ ವಿವಾಹ ಮಾಡಿದವರು ಕಾನೂನಿನ ಕೈನಲ್ಲಿ ಸಿಕ್ಕಿಹಾಕಿಕೊಂಡರೆ ಆ ವಿವಾಹದಲ್ಲಿ ಪಾಲ್ಗೊಂಡ ಮುಖ್ಯಸ್ಥರನ್ನು ಶಿಕ್ಷೆಗೆ ಒಳಪಡಿಸಲಾಗುವ ಕಾನೂನೂ ಇದೆ. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಬೇಕು ಎಂದರು.ವಕೀಲರ ಸಂಘದ ಅಧ್ಯಕ್ಷ ಎಸ್.ಜಿ. ಪಾಟೀಲ, ಶಿಕ್ಷಣ ಸಂಯೋಜಕ ಲೋಕೇಶ್, ವಕೀಲರಾದ ಮೈನುದ್ದೀನ್, ಶಾಲಾ ಮುಖ್ಯಶಿಕ್ಷಕ ರಾಘವೇಂದ್ರ ಕಾರ್ವೆ, ಸಹಾಯಕ ಸರ್ಕಾರಿ ಅಭಿಯೋಜಕ ರಾಯನಗೌಡ ಎಲ್., ಅಂಗನವಾಡಿ ಮೇಲ್ವಿಚಾರಕಿ ಅನ್ನಪೂರ್ಣಾ ಪಾಟೀಲ, ನ್ಯಾಯಾಂಗ ಇಲಾಖೆ ಸಿಬ್ಬಂದಿ ಸುನೀಲಕುಮಾರ ಇದ್ದರು.