ಮಕ್ಕಳ ಅನೈತಿಕ ಸಾಗಾಟ ತಡೆಗಟ್ಟಿ ನ್ಯಾಯಾಧೀಶ ಹೊನೋಲೆ

| Published : Feb 12 2024, 01:37 AM IST

ಮಕ್ಕಳ ಅನೈತಿಕ ಸಾಗಾಟ ತಡೆಗಟ್ಟಿ ನ್ಯಾಯಾಧೀಶ ಹೊನೋಲೆ
Share this Article
  • FB
  • TW
  • Linkdin
  • Email

ಸಾರಾಂಶ

ಮಹಿಳೆಯರು ಹಾಗೂ ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಮತ್ತು ಕಾವಲು ಸಮಿತಿ ಸದಸ್ಯರಿಗೆ ಐಟಿಪಿಎ, 1956 ಕಾಯ್ದೆಯ ಬಗ್ಗೆ ಒಂದು ದಿನದ ತರಬೇತಿ.

ಕನ್ನಡಪ್ರಭ ವಾರ್ತೆ ಯಾದಗಿರಿ

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಹಾಗೂ ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಮತ್ತು ಕಾವಲು ಸಮಿತಿ ಸದಸ್ಯರಿಗೆ ಐಟಿಪಿಎ, 1956 ಕಾಯ್ದೆಯ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಧೀಶ ರವೀಂದ್ರ ಹೊನೋಲೆ ಅವರು, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ ಪಾಟೀಲ್ ಮಾತನಾಡಿ, ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಹಾಗೂ ಮೇಲ್ವೀಚಾರಕಿಯರು ಕ್ಲಸ್ಟರ್ ಮಟ್ಟದಲ್ಲಿ ಮಕ್ಕಳ ಸಾಗಾಣಿಕೆ ಬಗ್ಗೆ ಕ್ರಮವಹಿಸಬೇಕೆಂದು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ, ತಾಲೂಕಿನ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಇಲಾಖೆಯ ಸಿಬ್ಬಂದಿಗಳಾದ ಪ್ರಭುಲಿಂಗ ಪ್ಯಾಟಿ, ಅನೀಲಕುಮಾರ, ಜಿಲ್ಲಾ ಸಂಯೋಜಕರಾದ ಯಲ್ಲಪ್ಪ ಪ್ರಶಾಂತಕುಮಾರ ಇತರರಿದ್ದರು.