ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ದರ ವಿವರ ಪ್ರದರ್ಶನ ಕಡ್ಡಾಯ

| Published : Mar 16 2025, 01:50 AM IST

ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ದರ ವಿವರ ಪ್ರದರ್ಶನ ಕಡ್ಡಾಯ
Share this Article
  • FB
  • TW
  • Linkdin
  • Email

ಸಾರಾಂಶ

ತುಮಕೂರು: ಜಿಲ್ಲೆಯಲ್ಲಿ 163 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳಲ್ಲಿಯೂ ಕಡ್ಡಾಯವಾಗಿ ದರ ಹಾಗೂ ಸೇವಾ ವಿವರಗಳನ್ನು ಪ್ರದರ್ಶಿಸಿರಬೇಕು ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ, ಬಿ.ಎಂ. ಚಂದ್ರಶೇಖರ್ ಸೂಚನೆ ನೀಡಿದರು.

ತುಮಕೂರು: ಜಿಲ್ಲೆಯಲ್ಲಿ 163 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳಲ್ಲಿಯೂ ಕಡ್ಡಾಯವಾಗಿ ದರ ಹಾಗೂ ಸೇವಾ ವಿವರಗಳನ್ನು ಪ್ರದರ್ಶಿಸಿರಬೇಕು ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ, ಬಿ.ಎಂ. ಚಂದ್ರಶೇಖರ್ ಸೂಚನೆ ನೀಡಿದರು. ತಮ್ಮ ಕಚೇರಿಯಲ್ಲಿ ಪಿಸಿ ಮತ್ತು ಪಿಎನ್‌ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ಕ್ಯಾನಿಂಗ್ ಕೇಂದ್ರಗಳ ಪರಿಶೀಲನಾ ವೇಳೆಯಲ್ಲಿ ಅಧಿಕಾರಿಗಳೊಂದಿಗೆ ರೇಡಿಯಾಲಾಜಿಸ್ಟ್ ಹಾಜರಿರಬೇಕು. ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ ಸ್ಕ್ಯಾನಿಂಗ್ ಕೇಂದ್ರಗಳ ಭೇಟಿಯಲ್ಲಿ ಕಂಡುಬಂದ ನ್ಯೂನತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ಕೇಂದ್ರಗಳಿಗೆ ನೋಂದಣಿ ಪತ್ರ ನೀಡುವ ಹಾಗೂ ಯಂತ್ರ ಖರೀದಿಸಲು ನಿರಾಕ್ಷೇಪಣಾ ಪತ್ರ ನೀಡುವ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ, ಪ್ರಭ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ಡಾ, ಲೋಕೇಶ್ ರೆಡ್ಡಿ, ಸಮಾಜ ಸೇವಕಿ ಲಲಿತಾ, ಕಾನೂನು ಸಲಹೆಗಾರರು, ವಾರ್ತಾ ಇಲಾಖೆ ಹಾಗೂ ವಿವಿಧ ಅಧಿಕಾರಿ ಸೇರಿದಂತೆ ಮತ್ತಿತರರು ಹಾಜರಿದ್ದರು.