ಕಾಂಗ್ರೆಸ್‌ ಸರ್ಕಾರದಿಂದ ಬೆಲೆ ಏರಿಕೆ ಹೊರೆ

| Published : Apr 16 2025, 12:34 AM IST

ಕಾಂಗ್ರೆಸ್‌ ಸರ್ಕಾರದಿಂದ ಬೆಲೆ ಏರಿಕೆ ಹೊರೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಜನಸಾಮಾನ್ಯರ ಮೇಲೆ ನಿತ್ಯ ಬೆಲೆ ಏರಿಕೆ ಹೊರೆ ಹೇರುತ್ತಿದೆ. ಸುಮಾರು 40ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ಜನಸಾಮಾನ್ಯರ ಜೀವನ ದುಸ್ತರವಾಗಿದ್ದು, ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಇದನ್ನು ಖಂಡಿಸಿ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದು, ಯಾತ್ರೆ ಏ.17ಕ್ಕೆ ವಿಜಯಪುರ ನಗರಕ್ಕೆ ಆಗಮಿಸಲಿದೆ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಜನಸಾಮಾನ್ಯರ ಮೇಲೆ ನಿತ್ಯ ಬೆಲೆ ಏರಿಕೆ ಹೊರೆ ಹೇರುತ್ತಿದೆ. ಸುಮಾರು 40ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ಜನಸಾಮಾನ್ಯರ ಜೀವನ ದುಸ್ತರವಾಗಿದ್ದು, ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಇದನ್ನು ಖಂಡಿಸಿ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದು, ಯಾತ್ರೆ ಏ.17ಕ್ಕೆ ವಿಜಯಪುರ ನಗರಕ್ಕೆ ಆಗಮಿಸಲಿದೆ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.

ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಬಿಜೆಪಿ ಮಂಡಲ ಪದಾಧಿಕಾರಿಗಳ ಮುಖಂಡರ ಸಭೆ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಜನಸಾಮಾನ್ಯರು ಮೆಚ್ಚುಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಸಂಪನ್ಮೂಲ ಕ್ರೋಢಿಕರಣಕ್ಕೆ ಕಂಡ ಕಂಡ ವಸ್ತುಗಳ ಬೆಲೆಗಳ ಏರಿಕೆ ಮಾಡಿ ಜನಸಾಮಾನ್ಯರ ಬವಣೆಗೆ ಕಿಂಚಿತ್ತೂ ಕಾಳಜಿ ತೋರದ ನಿರ್ದಯಿ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನಾಕ್ರೋಶ ಯಾತ್ರೆ ಜನರ ಧ್ವನಿಯಾಗಿ ಹೋರಾಟ ನಡೆಸುತ್ತಿದ್ದು, ನಮ್ಮ ಕ್ಷೇತ್ರದಿಂದ ಸುಮಾರು 3000ಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಜನಾಕ್ರೋಶ ಯಾತ್ರೆಯ ಮಂಡಲದ ಉಸ್ತುವಾರಿ ವಿಜಯಕುಮಾರ ಕುಡಿಗನೂರ ಮಾತನಾಡಿ, ಬೆಲೆ ಏರಿಕೆ ನಿರ್ವಹಣೆ ಮಾಡುವಲ್ಲಿ ಸಿಎಂ ಸಿದ್ದರಾಮಯ್ಯ ಸಂಪೂರ್ಣ ವಿಫಲರಾಗಿದ್ದಾರೆ. ಶಾಸಕರರಿಗೂ ಹಣ ನೀಡದೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗಿದೆ ಹಣ ನೀಡಿದರೆ ಮಾತ್ರ ಕೆಲಸ, ದಲಿತರಿಗೆ ಮೀಸಲಿಟ್ಟ ಹಣ ದುರ್ಬಳಕೆ ಸೇರಿ ಹಗರಣಗಳ ಸರಮಾಲೆ ಮಾಡಿದ್ದಾರೆ. ಹೀಗಾಗಿ, ದೇವರಹಿಪ್ಪರಗಿ ಮತಕ್ಷೇತ್ರದಿಂದ ಅತಿ ಹೆಚ್ಚು ಕಾರ್ಯಕರ್ತರು ಯಾತ್ರೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಧ್ವನಿ ಮೊಳಗಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಮಂಡಲ ಅಧ್ಯಕ್ಷ ಅವ್ವನಗೌಡ ಗ್ವಾತಗಿ, ಮಂಡಲದ ಉಸ್ತುವಾರಿ ಉಮೇಶ ಕೊಳಕೂರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ ಅಸ್ಕಿ, ಜಿಲ್ಲಾ ರೈತ ಘಟಕದ ಅಧ್ಯಕ್ಷ ಸಿದ್ದು ಬುಳ್ಳಾ, ಪಪಂ ಉಪಾಧ್ಯಕ್ಷ ರಮೇಶ ಮಸಿಬಿನಾಳ, ಬಿಜೆಪಿ ಮಂಡಲ ಪ್ರ.ಕಾ ಮಹಾಂತೇಶ ಬಿರಾದಾರ, ಪ್ರಕಾಶ ದೊಡಮನಿ, ಮುಖಂಡರಾದ ಭೀಮನಗೌಡ ಲಚ್ಯಾಣ, ಸೋಮಶೇಖರ ಹಿರೇಮಠ, ಸೋಮು ದೇವೂರ, ಶರಣು ದಳವಾಯಿ, ಮುತ್ತುರಾಜ ಹಾಲ್ಯಾಳ, ಹಣಮಂತ್ರಾಯ ಗುಣಕಿ, ಅಪ್ಪು ದೇಸಾಯಿ, ಮಲ್ಲು ಕೋಲ್ಕಾರ ಸೇರಿದಂತೆ ಇನ್ನು ಹಲವರು ಉಪಸ್ಥಿತರಿದ್ದರು.