ರಾಜ್ಯ ಸರ್ಕಾರ ನೀಡುತ್ತಿರುವ ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಲು, ಮೊಸರು, ತುಪ್ಪ ಜನ ಸಾಮಾನ್ಯರು ಬಳಸದಂತೆ ಆಗಿದೆ. ಇದರೊಂದಿಗೆ ಕೆಸ್ಆರ್ಟಿಸಿ ಬಸ್ ದರವನ್ನು ಹೆಚ್ಚಿಸಿದ್ದು, ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಮಸ್ಯೆ ಎದುರಿಸುವಂತಾಗಿದೆ. ಸರ್ಕಾರ ಗ್ಯಾರಂಟಿ ಯೋಜನೆಯಲ್ಲಿ ಉಚಿತ ಕೊಡುಗೆಗಳನ್ನು ನೀಡುತ್ತಿರುವುದರಿಂದ ಜನಸಾಮಾನ್ಯರು ನಷ್ಟವನ್ನು ಹೊರಬೇಕಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ಅಧಿಕಾರಿಗಳು, ಉಳ್ಳವರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ನಿಜವಾದ ಫಲಾನುಭವಿಗಳು ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಿದಲ್ಲಿ ಯೋಜನೆಗೆ ಅರ್ಥ ಇರುತ್ತಿತ್ತು ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಎಸ್. ನಾಗರಾಜು ಆರೋಪಿಸಿದ್ದಾರೆ.
ಸೋಮವಾರಪೇಟೆ : ರಾಜ್ಯ ಸರ್ಕಾರ ನೀಡುತ್ತಿರುವ ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಲು, ಮೊಸರು, ತುಪ್ಪ ಜನ ಸಾಮಾನ್ಯರು ಬಳಸದಂತೆ ಆಗಿದೆ. ಇದರೊಂದಿಗೆ ಕೆಸ್ಆರ್ಟಿಸಿ ಬಸ್ ದರವನ್ನು ಹೆಚ್ಚಿಸಿದ್ದು, ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಮಸ್ಯೆ ಎದುರಿಸುವಂತಾಗಿದೆ. ಸರ್ಕಾರ ಗ್ಯಾರಂಟಿ ಯೋಜನೆಯಲ್ಲಿ ಉಚಿತ ಕೊಡುಗೆಗಳನ್ನು ನೀಡುತ್ತಿರುವುದರಿಂದ ಜನಸಾಮಾನ್ಯರು ನಷ್ಟವನ್ನು ಹೊರಬೇಕಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ಅಧಿಕಾರಿಗಳು, ಉಳ್ಳವರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ನಿಜವಾದ ಫಲಾನುಭವಿಗಳು ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಿದಲ್ಲಿ ಯೋಜನೆಗೆ ಅರ್ಥ ಇರುತ್ತಿತ್ತು ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಎಸ್. ನಾಗರಾಜು ಆರೋಪಿಸಿದ್ದಾರೆ. ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ, ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಮರ್ಯಾದೆ ಕಳೆಯುವ ಕೆಲಸವಾಗುತ್ತಿದೆ. ಇದರಿಂದ ಮತ್ತೊಬ್ಬರ ಹೆಸರಿಗೆ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯನ್ನು ಸಚಿವ ಎನ್ನುವುದನ್ನು ಮರೆತು ರಾಜ್ಯದ ಗೃಹ ಸಚಿವರು ತೇಜೋವಧೆ ಮಾಡುತ್ತಿರುವುದು ಖಂಡನೀಯ. ತಕ್ಷಣ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಿ, ರೈತರಿಗೆ ಪಶು ಆಹಾರ ಸಬ್ಸಿಡಿ ನೀಡುವಂತೆ ಒತ್ತಾಯಿಸಿದ ಅವರು ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.ಮನವಿಯನ್ನು ತಹಶೀಲ್ದಾರ್ ಕೃಷ್ಣಮೂರ್ತಿ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಕೊಡಗು ಜಿಲ್ಲಾ ಜೆಡಿಎಸ್ ವಕ್ತಾರ ಆದರ್ಶ್ ತಮ್ಮಯ್ಯ, ಪ್ರಮುಖರಾದ ಜಯನಂದ, ಮಂದಣ್ಣ, ಮಸಗೋಡು ಸುರೇಶ್, ಪ್ರವೀಣ್, ಸ್ವಾಗತ್ ಕುಶಾಲಪ್ಪ, ಸಂದೀಪ್ ಕೂಗೂರು, ಆಲಿದ್ ಪಾಷ, ಪುಟ್ಟರಾಜು ಇದ್ದರು.೦೯ಎಸ್ಪಿಟಿ೦೧: ಸೋಮವಾರಪೇಟೆ ಪುಟ್ಟಪ್ಪ ವೃತ್ತದಲ್ಲಿ ಅಗತ್ಯ ಬೆಲೆ ಏರಿಕೆಯಾಗಿದೆ ಎಂದು ತಾಲ್ಲೂಕು ಜೇಡಿಎಸ್ ವತಿಯಿಂದ ಪ್ರತಿಭಟನೆ ನಡೆಸಿ, ತಾಲ್ಲೂಕು ಕಚೇರಿಯ ಎದುರು ತಹಶೀಲ್ದಾರ್ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.