ಪ್ರೈಡ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

| Published : Oct 26 2025, 02:00 AM IST

ಸಾರಾಂಶ

ಪ್ರೈಡ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ೨೦೨೫-೨೬ನೇ ಶೈಕ್ಷಣಿಕ ಸಾಲಿನ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಎಚ್. ಎಚ್. ಜಯರಾಮ್ ತಿಳಿಸಿದರು. ಈ ಭರ್ಜರಿ ಯಶಸ್ಸು ಕಾಲೇಜಿನ ಕ್ರೀಡಾ ವಿಭಾಗದ ನಿಷ್ಠೆ, ತರಬೇತಿ ಮತ್ತು ವಿದ್ಯಾರ್ಥಿಗಳ ಹಠದ ಫಲವಾಗಿದೆ ಎಂದು ಆಡಳಿತ ಮಂಡಳಿ ಪ್ರಶಂಸಿಸಿತು. “ನಮ್ಮ ವಿದ್ಯಾರ್ಥಿಗಳ ಈ ಸಾಧನೆ ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತದೆ ಎಂದು ಅಧ್ಯಕ್ಷ ನರೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ಪ್ರೈಡ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ೨೦೨೫-೨೬ನೇ ಶೈಕ್ಷಣಿಕ ಸಾಲಿನ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಎಚ್. ಎಚ್. ಜಯರಾಮ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಬಾಲಕ ಹಾಗೂ ಬಾಲಕಿಯರು ವಿವಿಧ ಕ್ರೀಡೆಗಳಲ್ಲಿ ಅನೇಕ ಪದಕಗಳನ್ನು ಗೆದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಬಾಲಕ ಮತ್ತು ಬಾಲಕಿಯರು ವಿವಿಧ ಕ್ರೀಡೆಗಳಲ್ಲಿ ಅನೇಕ ಪದಕಗಳನ್ನು ಗೆದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು ತೋರಿಸಿದ ಶಿಸ್ತು, ನಿಷ್ಠೆ ಹಾಗೂ ಹಠ ಕಾಲೇಜಿನ ಗೌರವವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದೆ ಎಂದರು.

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು:

ಅಥ್ಲೆಟಿಕ್ಸ್ ವಿಭಾಗದಲ್ಲಿ ಎಚ್.ಎನ್. ಅನು ೪೦೦ಮೀ, ೮೦೦ಮೀ, ೨೦೦ ಮೀಟರ್‌ ಗುಡ್ಡಗಾಡು ಓಟ, ಸಿಂಚನ ಎಂಬುವವರು ಎತ್ತರ ಜಿಗಿತ, ಗುಡ್ಡಗಾಡು ಓಟ, ಭರತ್ ಜಾವೆಲಿನ್ ಎಸೆತ, ವರ್ಷಿಣಿ ಗುಡ್ಡಗಾಡು ಓಟದಲ್ಲಿ ಗೆಲುವು ಪಡೆದಿದ್ದಾರೆ.

ಥ್ರೋ ಬಾಲ್ ಬಾಲಕರ ವಿಭಾಗದಲ್ಲಿ ಪ್ರಜ್ವಲ್, ನಾಗೇಶ್, ಮನೋಜ್, ಪ್ರಶಾಂತ್, ಅಕ್ಷಯ್, ಪ್ರೀತಮ್, ಅಯಾನ್ ಖಾನ್, ಕೌಶಿಕ್, ಸುಶಾಂತ್, ತೇಜೇಶ್, ಆದರ್ಶ, ಮಿತುನ್, ಖೋ ಖೋ ಬಾಲಕಿಯರ ವಿಭಾಗದಲ್ಲಿ ಎಚ್.ಎನ್. ಅನು, ವರ್ಷಿಣಿ, ಸಿಂಚನ, ಹೇಮಲತಾ, ಅಮೃತ, ಪಲ್ಲವಿ, ಅಮೂಲ್ಯ, ದರ್ಷಿಣಿ, ಪವಿತ್ರ, ಸಾನಿಕಾ, ಧನುಶ್ರೀ ಇವರು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಈ ಯಶಸ್ಸು ಕಾಲೇಜಿನ ಕ್ರೀಡಾ ವಿಭಾಗದ ನಿಷ್ಠೆ, ತರಬೇತಿ ಮತ್ತು ವಿದ್ಯಾರ್ಥಿಗಳ ಹಠದ ಫಲವೆಂದು ಆಡಳಿತ ಮಂಡಳಿ ಸಂತೋಷ ವ್ಯಕ್ತಪಡಿಸಿದೆ.

ಈ ಭರ್ಜರಿ ಯಶಸ್ಸು ಕಾಲೇಜಿನ ಕ್ರೀಡಾ ವಿಭಾಗದ ನಿಷ್ಠೆ, ತರಬೇತಿ ಮತ್ತು ವಿದ್ಯಾರ್ಥಿಗಳ ಹಠದ ಫಲವಾಗಿದೆ ಎಂದು ಆಡಳಿತ ಮಂಡಳಿ ಪ್ರಶಂಸಿಸಿತು. “ನಮ್ಮ ವಿದ್ಯಾರ್ಥಿಗಳ ಈ ಸಾಧನೆ ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತದೆ ಎಂದು ಅಧ್ಯಕ್ಷ ನರೇಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರೈಡ್ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ನರೇಶ್, ದೈಹಿಕ ಶಿಕ್ಷಕ ಲೋಕೇಶ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎ.ಎಲ್. ನವೀನ್ ಕುಮಾರ್‌, ಉಪಾಧ್ಯಕ್ಷ ಡಿ.ಎಸ್. ನಿತೀನ್ ಇತರರು ಉಪಸ್ಥಿತರಿದ್ದರು.