ಸಾರಾಂಶ
ದೇವಸ್ಥಾನದಲ್ಲಿ ಪೂಜೆ ಮಾಡುವ ವಿಚಾರಕ್ಕೆ ಗ್ರಾಮಸ್ಥರಿಂದ ಉಂಟಾದ ಕಿರುಕುಳದಿಂದ ಬೇಸತ್ತು ಅರ್ಚಕರೊಬ್ಬರು ದೇವಸ್ಥಾನದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಳೇಬೀಡು ಹೋಬಳಿಯ ಗಂಗೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ವಿಚಾರವಾಗಿ ಗ್ರಾಮಸ್ಥರಿಂದ ಕಿರುಕುಳ ಉಂಟಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಕನ್ನಡಪ್ರಭ ವಾರ್ತೆ ಹಾಸನ
ದೇವಸ್ಥಾನದಲ್ಲಿ ಪೂಜೆ ಮಾಡುವ ವಿಚಾರಕ್ಕೆ ಗ್ರಾಮಸ್ಥರಿಂದ ಉಂಟಾದ ಕಿರುಕುಳದಿಂದ ಬೇಸತ್ತು ಅರ್ಚಕರೊಬ್ಬರು ದೇವಸ್ಥಾನದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಳೇಬೀಡು ಹೋಬಳಿಯ ಗಂಗೂರು ಗ್ರಾಮದಲ್ಲಿ ಗುರುವಾರ ನಡೆದಿದೆ.ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ವಿಚಾರವಾಗಿ ಗ್ರಾಮಸ್ಥರಿಂದ ಕಿರುಕುಳ ಉಂಟಾಗುತ್ತಿತ್ತು ಎಂದು ಆರೋಪಿಸಲಾಗಿದೆ. ದೇವಾಲಯದಲ್ಲಿ ಸರಿಯಾಗಿ ಪೂಜೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ತಹಸೀಲ್ದಾರ್‌ಗೆ ದೂರು ನೀಡಿದ್ದರು. ಬೇರೆ ಅರ್ಚಕರನ್ನು ನೇಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಇದೇ ವಿಚಾರಕ್ಕೆ ಅರ್ಚಕ ರಂಗಸ್ವಾಮಿ ಹಾಗೂ ಗ್ರಾಮಸ್ಥರ ನಡುವೆ ವಿವಾದ ಏರ್ಪಟ್ಟಿತ್ತು. ಇದೆಲ್ಲದರಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದ 65 ವರ್ಷದ ರಂಗಸ್ವಾಮಿ ಅವರು ಬೇಸತ್ತು ದೇವಾಲಯದಲ್ಲೇ ನೇಣಿಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.