ಶಿಕ್ಷಣದಲ್ಲಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವೇ ಪ್ರಮುಖ ಘಟ್ಟ: ಶಾಸಕ ಟಿ.ಡಿ.ರಾಜೇಗೌಡ

| Published : Dec 31 2023, 01:30 AM IST

ಶಿಕ್ಷಣದಲ್ಲಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವೇ ಪ್ರಮುಖ ಘಟ್ಟ: ಶಾಸಕ ಟಿ.ಡಿ.ರಾಜೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಸರ್ಕಾರ ಎಲ್ಲಾ ಸೌಲಭ್ಯ ನೀಡುತ್ತಿದೆ. ಮೊರಾರ್ಜಿ ದೇಸಾಯಿ, ದೇವರಾಜ ಅರಸು, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಸತಿ ಶಾಲೆಗಳು ಉತ್ತಮವಾಗಿ ನಡೆಯುತ್ತಿದ್ದು ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದೇವೆ. ಆದರೆ, ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ ಕಡಿಮೆಯಾಗಿ ಶಾಲೆ ಮುಚ್ಚುವ ಹಂತಕ್ಕೆ ಬರುತ್ತಿರುವುದು ಆತಂಕದ ವಿಷಯ ಎಂದು ಶಾಸಕ ರಾಜೇಗೌಡ ಹೇಳಿದರು.

- ಗುಬ್ಬಿಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಾರ ಮಂಟಪ, ವಿಶ್ವ ಮಾನವ ಸಭಾಂಗಣ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಶಿಕ್ಷಣ ಕ್ಷೇತ್ರದಲ್ಲಿ ಪ್ರಾಥಮಿಕ ಶಿಕ್ಷಣವೇ ವಿದ್ಯಾರ್ಥಿಗಳಿಗೆ ಪ್ರಮುಖ ಘಟ್ಟ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಶುಕ್ರವಾರ ರಾತ್ರಿ ತಾಲೂಕಿನ ಗುಬ್ಬಿಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಾರ ಮಂಟಪ, ವಿಶ್ವ ಮಾನವ ಸಭಾಂಗಣ, ಕೈತೋಟ, ದ್ವಜ ಸ್ಥಂಭ ಹಾಗೂ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತ ನಾಡಿದರು. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಸರ್ಕಾರ ಎಲ್ಲಾ ಸೌಲಭ್ಯ ನೀಡುತ್ತಿದೆ. ಮೊರಾರ್ಜಿ ದೇಸಾಯಿ, ದೇವರಾಜ ಅರಸು, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಸತಿ ಶಾಲೆಗಳು ಉತ್ತಮವಾಗಿ ನಡೆಯುತ್ತಿದ್ದು ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದೇವೆ. ಆದರೆ, ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ ಕಡಿಮೆಯಾಗಿ ಶಾಲೆ ಮುಚ್ಚುವ ಹಂತಕ್ಕೆ ಬರುತ್ತಿರುವುದು ಆತಂಕದ ವಿಷಯ. ಸರ್ಕಾರ ಕೆಪಿಎಸ್ ಪ್ರಾರಂಭಿಸಿ 1 ರಿಂದ 12 ನೇ ತರಗತಿಯವರೆಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿ ದ್ದು ಈ ಶಾಲೆಗಳನ್ನು ಸದೃಢವಾಗಿಸಿದರೆ ಸರ್ಕಾರಿ ಶಾಲೆಗಳು ಉಳಿಯಬಹುದು ಎಂದು ಅಭಿಪ್ರಾಯ ಪಟ್ಟರು. ಗುಬ್ಬಿಗಾ ಸರ್ಕಾರಿ ಶಾಲೆಗೆ ಬೇಕಾದ ಮೂಲ ಭೂತ ಸೌಕರ್ಯ, ಶಾಲಾ ಕೊಠಡಿ ಸೇರಿದಂತೆ ಅವರ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಈಡೇರಿಸುತ್ತೇವೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಸಭೆ ಅಧ್ಯಕ್ಷತೆಯನ್ನು ಶಾಲೆ ಎಸ್ ಡಿಎಂಸಿ ಅಧ್ಯಕ್ಷ ಜಯರಾಂ ವಹಿಸಿದ್ದರು. ಅತಿಥಿಗಳಾಗಿ ಎಸ್ ಡಿಎಂಸಿ ಉಪಾಧ್ಯಕ್ಷೆ ದೀಪ್ತಿ, ಗ್ರಾಪಂ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ಡಿ.ಶಂಕರ್‌, ಸದಸ್ಯರಾದ ಸತೀಶ್‌, ಸಾಜು, ವಾಸುದೇವ ಕೋಟ್ಯಾನ್‌, ಉಷಾ, ಉಮಾದೇವಿ, ಸುನೀತ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಪುಷ್ಪಾ,ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಧು ಕುಮಾರ್, ಆಡುವಳ್ಳಿ ಗ್ರಾಪಂ ಸದಸ್ಯ ಗೇರ್‌ ಬೈಲು ನಟರಾಜ,ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಧನಂಜಯ ಮೇಧೂರ, ತಾ.ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ನಂಜುಂಡಪ್ಪ,ಶಿಕ್ಷಣ ಸಂಯೋಜಕ ರಂಗಪ್ಪ, ವಾಲ್ಮೀಕಿ ಸಂಘದ ಅಧ್ಯಕ್ಷ ಶ್ರೀನಿವಾಸ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್‌.ಎಂ.ನಾಗೇಶ್, ಶಾಲಾ ಮುಖ್ಯೋಪಾಧ್ಯಾಯ ಅಶೋಕ್‌, ಜಿಲ್ಲಾ ಸಂಘಗಳ ಪದಾಧಿಕಾರಿ ಚಂದ್ರಯ್ಯ, ಸುಂದರೇಶ್‌,ರಾಜಶೇಖರ್ ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ ದಾನಿಗಳಾದ ಗುಬ್ಬಿಗಾ ಶಾಲೆಯ ನಿವೃತ್ತ ಶಾಲಾ ಮುಖ್ಯೋಪಾಧ್ಯಾಯ ಜೋಯಿ, ಡಾ.ರಾಮಚಂದ್ರಪ್ಪ, ಸುಮನ, ಆಕಾಶಗೌಡ, ಶ್ರೀಕಾಂತ್‌, ವಾಲ್ಮೀಕಿ ಶ್ರೀನಿವಾಸ್‌, ಸುಧಾಕರ ಶೆಟ್ಟಿ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಅಶೋಕ್ , ಶೈನಿ ಹಾಗೂ ಸುನೀತ ಹಾಜರಿದ್ದರು.