ಸಾರಾಂಶ
ಧಾರವಾಡ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಯಾರು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ಬೈಯುತ್ತಾರೆಯೋ ಅವರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ಮನಸ್ಥಿತಿ ಕಾಂಗ್ರೆಸ್ ನಾಯಕರಿಗೆ ಬಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿರುವ ಮುಖ್ಯಮಂತ್ರಿ ಆಕಾಂಕ್ಷಿಗಳು ಈ ಕಾರಣದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನುಳಿದವರು, ತಮ್ಮ ಸ್ಥಾನ ಉಳಿಸಿಕೊಳ್ಳಲು ಸಾರ್ವಜನಿಕ ಜವಾಬ್ದಾರಿ ಮರೆತು ಮನ ಬಂದಂತೆ ಮಾತನಾಡುತ್ತಿದ್ದಾರೆ. ಬೇಸರ ಎಂದರೆ, ಪೈಪೋಟಿಗೆ ಬಿದ್ದು ಮೋದಿ, ಆರ್‌ಎಸ್‌ಎಸ್ ನಿಂದಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ಕಾರಣಕ್ಕಾಗಿ ಟೀಕೆ ಸರಿಯಲ್ಲ
ರಾಜಕೀಯ ಕಾರಣಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಕೈ ಮುಖಂಡರು ಕೀಳುಮಟ್ಟದ ಪದಗಳನ್ನು ಬಳಕೆ ಮಾಡುವುದು ಸರಿಯಲ್ಲ. ಈ ಕುರಿತು ಕರ್ನಾಟಕ, ತೆಲಂಗಾಣ ಜನರು ಗಮನಿಸುತ್ತಿದ್ದಾರೆ. ಇಂತಹ ಕಾಂಗ್ರೆಸ್ ಜನಪ್ರತಿನಿಧಿಗಳಿಗೆ ಜನರೇ ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತಾರೆ ಎಂದರು.
ಬೇರೆ ಧರ್ಮಗಳ ಹಬ್ಬಗಳ ಕುರಿತು ಮಾತನಾಡಲಿ
ಗಣೇಶ ಹಬ್ಬದ ಕುರಿತು ಮಾತನಾಡುವ ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಜನಪ್ರತಿನಿಧಿಗಳು ಬೇರೆ ಧರ್ಮಗಳ ಹಬ್ಬಗಳ ಕುರಿತು ಮಾತನಾಡಲಿ ಎಂದು ಜೋಶಿ ಸವಾಲು ಹಾಕಿದರು.
;Resize=(690,390))
;Resize=(128,128))
;Resize=(128,128))
;Resize=(128,128))
;Resize=(128,128))