ಪ್ರಧಾನಿ ಮನದ ಮಾತು ಪ್ರೇರಣೆ: ಪ್ರೀತಂ ಗೌಡ

| Published : Jan 30 2024, 02:00 AM IST

ಸಾರಾಂಶ

ಹಾಸನದ ಗುರುರಾಜ ಕಲ್ಯಾಣ ಮಂಟಪದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ದೇಶದ ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಪ್ರೊಜೆಕ್ಟರ್ ಮೂಲಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಮತ್ತು ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಹಾಗೂ ಕಾರ್ಯಕರ್ತರು ವೀಕ್ಷಣೆ ಮಾಡಿದರು.

ಯಶಸ್ವಿಯಾಗಿ ನಡೆದ ಮನ್ ಕಿ ಬಾತ್ ವೀಕ್ಷಣೆ

ಕನ್ನಡಪ್ರಭ ವಾರ್ತೆ ಹಾಸನ

ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ದೇಶದ ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಪ್ರೊಜೆಕ್ಟರ್ ಮೂಲಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಮತ್ತು ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಹಾಗೂ ಕಾರ್ಯಕರ್ತರು ವೀಕ್ಷಣೆ ಮಾಡಿದರು.

ಪ್ರೀತಂ ಜೆ. ಗೌಡ ಮಾಧ್ಯಮದೊಂದಿಗೆ ಮಾತನಾಡಿ, ಮೋದಿ ಅವರು ಪ್ರಧಾನಿಯಾದ ನಂತರ ಕಳೆದ ೧೦ ವರ್ಷಗಳಲ್ಲಿ ೧೦೯ ಬಾರಿ ಮನ್ ಕೀ ಭಾತ್ ಕಾರ್ಯಕ್ರಮವನ್ನು ದೇಶದ ಮೂಲೆ ಮೂಲೆಯಲ್ಲಿ ನಡೆಯುವ ಕಾರ್ಯಕ್ರಮ ಮತ್ತು ಅವರ ಭಾವನೆಯನ್ನು ಕಾರ್ಯಕರ್ತರೊಂದಿಗೆ ಹಂಚಿಕೊಂಡು ಪ್ರೇರಣೆ ಕೊಡುವ ಕೆಲಸವನ್ನು ಮಾಡಿದ್ದು, ಎಲ್ಲರೂ ಕೂಡ ವಿಚಾರ ತಿಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಈ ಮನ್ ಕಿ ಭಾತ್ ಕಾರ್ಯಕ್ರಮವು ಶಕ್ತಿ ಕೊಟ್ಟಿದೆ ಎಂದರು.

ರಾಜಕೀಯ ಮಾಡುವುದಕ್ಕೆ ಮಾತ್ರ ರಾಜಕೀಯ ಪಕ್ಷಗಳಿಲ್ಲ. ಸಾಮಾಜಿಕ ಕಳಕಳಿ ಕೂಡ ಇದೆ ಎಂಬುದನ್ನು ಪ್ರಧಾನಿ ಮೋದಿಯವರು ತೋರಿಸಿಕೊಟ್ಟಿದ್ದಾರೆ. ಅಧಿಕಾರ ಸ್ವೀಕಾರ ಮಾಡಿದ ನಂತರ ಅಭಿವೃದ್ಧಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ಪ್ರಧಾನಿಯವರಾದ ಮೋದಿ ೧೦೯ನೇ ಮನೆ ಕಿ ಬಾತ್ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದು, ಕಾರ್ಯಕ್ರವನ್ನು ದೇಶದೆಲ್ಲೆಡೆ ವೀಕ್ಷಣೆ ಮಾಡಿದ್ದಾರೆ. ಕಟ್ಟಕಡೆಯ ವ್ಯಕ್ತಿಯು ಕೂಡ ವಿಚಾರದಾರೆ ತಿಳಿಯಬೇಕು ಎಂದರು.

ಕಾರ್ಯಕ್ರಮದಲ್ಲಿ ಹುಡಾ ಮಾಜಿ ಅಧ್ಯಕ್ಷ ಲಲಾಟ್ ಮೂರ್ತಿ, ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್, ಮುಖಂಡರಾದ ಕಿರಣ್, ಜಿ. ದೇವರಾಜೇಗೌಡ, ಯುವ ಮೋರ್ಚಾದ ಉಪಾಧ್ಯಕ್ಷ ಹರ್ಷಿತ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಮೀತ್ ಶೆಟ್ಟಿ, ಮಾಧ್ಯಮ ಸಂಚಾಲಕ ಪ್ರೀತಿವರ್ಧನ್, ಶೇಷಮ್ಮ, ವೇದಾವತಿ ಇದ್ದರು.ಪ್ರಧಾನಿ ಮೋದಿಯವರ ಮನ್‌ ಕಿ ಬಾತ್‌ ಕಾರ್ಯಕ್ರಮ ವೀಕ್ಷಣೆ ಮಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹಾಗೂ ಇತರೆ ಜಿಲ್ಲಾ ಮುಖಂಡರು.