ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

| Published : Jun 10 2024, 12:31 AM IST

ಸಾರಾಂಶ

ನಗರ ಬಿಜೆಪಿ ಕಚೇರಿಯಲ್ಲಿ ಬೃಹತ್ ಪರದೆಯಲ್ಲಿ ಚಿತ್ರ ವೀಕ್ಷಣೆ ಮಾಡಿ ನಂತರ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಫೋಟೋ- 9ಎಂವೈಎಸ್‌ 13- ನರೇಂದ್ರಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಿಸಿದರು. ಜೋಗಿ ಮಂಜು, ರಘು, ಕೇಬಲ್‌ ಮಹೇಶ್‌ ಮೊದಲಾದವರು ಇದ್ದಾರೆ.

---

ಕನ್ನಡಪ್ರಭ ವಾರ್ತೆ ಮೈಸೂರು

ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಿಸಿದರು.

ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ ನಗರ ಬಿಜೆಪಿ ಕಚೇರಿಯಲ್ಲಿ ಬೃಹತ್ ಪರದೆಯಲ್ಲಿ ಚಿತ್ರ ವೀಕ್ಷಣೆ ಮಾಡಿ ನಂತರ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಈ ವೇಳೆ ಮಾಜಿ ಸಚಿವ ಎನ್. ಮಹೇಶ್, ಮಾಜಿ ಶಾಸಕ ಸಿ.ಎಸ್‌. ನಿರಂಜನ್ ಕುಮಾರ್, ಮಾಜಿ ಮೇಯರ್ ಶಿವಕುಮಾರ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ, ರಘು, ಕೇಬಲ್ ಮಹೇಶ್, ನಗರ ಉಪಾಧ್ಯಕ್ಷ ಜೋಗಿ ಮಂಜು, ಟಿ. ರಮೇಶ್, ಹೇಮಾ ನಂದೀಶ್, ಮುಖಂಡರಾದ ಶಿವಕುಮಾರ್, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾ ರಾಜ್, ಎಸ್ಸಿ ಮೊರ್ಚಾ ಅಧ್ಯಕ್ಷ ಶೈಲೇಂದ್ರ, ವಕ್ತಾರ ದೇವರಾಜೇಗೌಡ, ಚಾಮರಾಜ ಅಧ್ಯಕ್ಷ ದಿನೇಶ್ ಗೌಡ, ಬಾಲಕೃಷ್ಣ, ಕಾರ್ತಿಕ್,

ಶಿವಕುಮಾರ್ ಮೊದಲಾದವರು ಇದ್ದರು.