ಸಾರಾಂಶ
ಬೆಳಗಾವಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಾಟೆ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿರುವುದಕ್ಕೆ ಕಿಡಿಕಾರಿದ ಸಚಿವ ಸತೀಶ ಜಾರಕಿಹೊಳಿ, ಮೋದಿ ಅವರಿಗೆ ಈ ವಿಷಯ ಬಿಟ್ಟು ಬೇರೆ ಏನಾದರೂ ಇದೆಯಾ ಎಂದು ಪ್ರಶ್ನಿಸಿದರು.

ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 60 ಸಾವಿರ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಆಕಸ್ಮಿಕವಾಗಿ ಒಂದು ಕಡೆ ಇಂತಹ ಘಟನೆ ನಡೆದಿರಬಹುದು. ಈ ಕುರಿತು ಕ್ರಮ ಕೈಗೊಳ್ಳಲು ಪೊಲೀಸರು ಇದ್ದಾರೆ. ಅವರು ಕ್ರಮ ಕೈಗೊಳ್ಳುತ್ತಾರೆ. ಈ ವಿಚಾರವನ್ನು ಮೋದಿ ಗಂಭೀರವಾಗಿ ಏಕೆ ತೆಗೆದುಕೊಳ್ಳಬೇಕು ಎಂದು ಪ್ರಶ್ನಿಸಿದರು.ಶಾಸಕ ಮುನಿರತ್ನ ಬಂಧನದ ಹಿಂದೆ ಯಾವುದೇ ದ್ವೇಷದ ರಾಜಕಾರಣ ಇಲ್ಲ. ಬಾಯಿಗೆ ಬಂದಂತೆ ಮಾತನಾಡಲು ಶಾಸಕ ಮುನಿರತ್ನ ಅವರಿಗೆ ನಾವು ಹೇಳಿದ್ದೇವಾ? ಜೆಡಿಎಸ್, ಬಿಜೆಪಿಯವರು ಹೇಳಿದ್ದರಾ? ಎಂದು ಸತೀಶ ಜಾರಕಿಹೊಳಿ ಪ್ರಶ್ನಿಸಿದರು.