ಸಾರಾಂಶ
ಹರಪನಹಳ್ಳಿ: ಮಾಧ್ಯಮ ಕ್ಷೇತ್ರದಲ್ಲಿ ಇಂದು ಡಿಜಿಟಲ್ ಮಾಧ್ಯಮವು ಓದುಗರ ಸಂಖ್ಯೆ ಹೆಚ್ಚಿಸಿಕೊಂಡಿದೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ವಸವಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಎಸ್.ಎಸ್.ನಾರಾಯಣ ಸೂಪರ್ ಸ್ಪೆಷಾಲಿಟಿ ಸೆಂಟರ್ ದಾವಣಗೆರೆ ಸಹಯೋಗದಲ್ಲಿ ಪುರಸಭಾ ಪೌರಕಾರ್ಮಿಕರಿಗೆ ಉಚಿತ ಹೃದಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರಸ್ತುತ ಡಿಜಿಟಲ್ ಮಾಧ್ಯಮವು 90 ಮಿಲಿಯನ್‌ನಷ್ಟು ಓದುಗರನ್ನು ಹೊಂದಿದೆ. ಇದರ ಅರ್ಧದಷ್ಟು ಜನರು ಮಾತ್ರ ಪತ್ರಿಕೆ ಓದುತ್ತಾರೆ, ಮುದ್ರಣ ಮಾಧ್ಯಮವು ಇಂದಿಗೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿದೆ ಎಂದರು.
ಹರಪನಹಳ್ಳಿಯಲ್ಲಿ ಪತ್ರಿಕಾ ಭವನ ನಿರ್ಮಾಣ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಜಾಗ ಕಲ್ಪಿಸಿಕೊಡಲಾಗುವುದು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದೇ ಕರೆಯಲ್ಪಡುವ ಪತ್ರಿಕಾ ರಂಗವು ಸಮಾಜದ ಅಂಕಡೊಂಕು ತಿದ್ದುವ ಕೆಲಸ ಮಾಡತ್ತ ಬಂದಿವೆ ಎಂದರು.
ಸಿಪಿಐ ನಾಗರಾಜ ಎಂ.ಕಮ್ಮಾರ್ ಮಾತನಾಡಿ, ಸಾರ್ವಜನಿಕ ಕ್ಷೇತ್ರದಲ್ಲಿ ಪತ್ರಕರ್ತರು ಮತ್ತು ಪೊಲೀಸರ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಸವರಾಜಪ್ಪ ಮಾತನಾಡಿ, ಸಾಮಾಜಿಕ ಸಮಸ್ಯೆಗಳನ್ನು ಕುರಿತು ಪತ್ರಿಕಾ ಮೂಲಕ ಬೆಳಕು ಚೆಲ್ಲಿ ಆಡಳಿತ ವರ್ಗಕ್ಕೆ ಎಚ್ಚರಿಕೆ ಮೂಡಿಸುವ ಕೆಲಸ ಪತ್ರಕರ್ತರು ಮಾಡುತ್ತಾರೆ ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ ಮಾತನಾಡಿ ಸಾಮಾಜಿಕ ಜಾಲತಾಣದ ಹಾವಳಿಯಿಂದ ಪತ್ರಿಕೆಗಳನ್ನು ಓದುಗರ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪನವರ್, ಎಸ್.ಎಸ್.ಎಸ್.ನಾರಾಯಣ ಸೂಪರ್ ಸ್ಪೆಷಾಲಿಟಿ ಸೆಂಟರ್‌ನ ವೈದ್ಯ ಗುರುರಾಜ ಮಾತನಾಡಿದರು. ಹಿರಿಯ ಪತ್ರಕರ್ತ ಬಿ.ರಾಮಪ್ರಸಾದ್ ಗಾಂಧಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತಳವಾರ ಚಂದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯ ಗೊಂಗಡಿ ನಾಗರಾಜ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಲಕ್ಷಣ, ಸಂಘದ ರಾಜ್ಯ ಸಮಿತಿ ಸದಸ್ಯ ಪಿ.ವೆಂಕೋಬ ನಾಯಕ, ತಾಲೂಕು ಕಾರ್ಯದರ್ಶಿ ಎಚ್.ದೇವೇಂದ್ರಪ್ಪ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿ.ನಾಗರಾಜ ನಾಯ್ಕ್, ಟಿ.ಬಿ.ರಾಜು, ಪದಾಧಿಕಾರಿಗಳಾದ ಕೆ.ಉಚ್ಚೆಂಗೆಪ್ಪ, ಮಂಡಕ್ಕಿ ಸುರೇಶ, ಬಿ.ಮಾಧವ್ ರಾವ್, ಕೆ.ಬಸವರಾಜ, ಕೆ.ಕುಬೇರಪ್ಪ ಉಪಸ್ಥಿತರಿದ್ದರು.