ಮೇಲುಕೋಟೆಯಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಸಲು ಆದ್ಯತೆ ನೀಡಿ: ಸಿ.ಎಸ್.ಪುಟ್ಟರಾಜು

| Published : Jul 19 2024, 12:47 AM IST

ಮೇಲುಕೋಟೆಯಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಸಲು ಆದ್ಯತೆ ನೀಡಿ: ಸಿ.ಎಸ್.ಪುಟ್ಟರಾಜು
Share this Article
  • FB
  • TW
  • Linkdin
  • Email

ಸಾರಾಂಶ

ರಾಮಾನುಜಾರ್ಯರ ಕರ್ಮಭೂಮಿಯ ಅಭಿವೃದ್ಧಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಲ್ಲ ರೀತಿಯ ಸಹಕಾರ ನೀಡಲಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದ್ದು ಹಂತಹಂತವಾಗಿ ಅನುಷ್ಠಾನ ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್- ಮನೆಮನೆಗೆ ಗಂಟೆ ಯೋಜನೆ ಸಮರ್ಪಕವಾಗಿ ಅನುಷ್ಠಾನ ಆಗಬೇಕು.

ಕನ್ನಡಪ್ರಭ ವಾರ್ತೆ ಮೇಲುಕೋಟೆ

ಪ್ರವಾಸಿ ತಾಣ ಮೇಲುಕೋಟೆಯಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಶುದ್ಧಕುಡಿಯುವ ನೀರು ಪೂರೈಸಲು ಗ್ರಾಮ ಪಂಚಾಯ್ತಿ ಮೊದಲ ಆದ್ಯತೆ ನೀಡುವ ಜೊತೆಗೆ ಸರ್ಕಾರದ ಯೋಜನೆ ಜನರಿಗೆ ತಲುಪಿಸಬೇಕು ಎಂದು ಮಾಜಿ ಸಚಿವ ಸಿ.ಎಸ್‌. ಪುಟ್ಟರಾಜು ಸಲಹೆ ನೀಡಿದರು.

ಪ್ರವಾಸಿ ಮಂದಿರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ನಾಗರೀಕರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮೇಲುಕೋಟೆಯ ಸ್ಮಾರಕಗಳ ಸಂರಕ್ಷಣೆ ಮಾಡುವ ಜೊತೆಗೆ ಗ್ರಾಪಂನಲ್ಲಿ ಆಗಬೇಕಾದ ಕೆಲಸ ಕಾರ್ಯಗಳನ್ನು ಕಾಲಮಿತಿಯಲ್ಲಿ ಮಾಡಿಕೊಡಬೇಕು. ನಾಗರೀಕರು ಪಂಚಾಯ್ತಿ ಕಚೇರಿಗೆ ಅಲೆಯುವುದನ್ನು ತಪ್ಪಿಸಿ ಅವರ ಸಂಕಷ್ಟಕ್ಕೆ ಸ್ಪಂದಿಸಿ ಸೇವಾ ಮನೋಭಾವದಿಂದ ಕೆಲಸ ಮಾಡಿ ಎಂದರು.

ಮೇಲುಕೋಟೆಗೆ ನನ್ನ ಅಧಿಕಾರಾವಧಿಯಲ್ಲಿ ಹಲವಾರು ಅಭಿವೃದ್ಧಿ ಯೋಜನೆ ಮಂಜೂರು ಮಾಡಿಸಿದ್ದೇನೆ. ಕೊಳಗಳ ಅಭಿವೃದ್ಧಿ ಮುಂತಾದ ಕೆಲವು ಜೀರ್ಣೋದ್ಧಾರ ಕಾಮಗಾರಿಗಳು ಇದೀಗ ಆರಂಭವಾಗಿದೆ ಎಂದರು.

ರಾಮಾನುಜಾರ್ಯರ ಕರ್ಮಭೂಮಿಯ ಅಭಿವೃದ್ಧಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಲ್ಲ ರೀತಿಯ ಸಹಕಾರ ನೀಡಲಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದ್ದು ಹಂತಹಂತವಾಗಿ ಅನುಷ್ಠಾನ ಮಾಡಲಾಗುತ್ತದೆ ಎಂದರು.ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್- ಮನೆಮನೆಗೆ ಗಂಟೆ ಯೋಜನೆ ಸಮರ್ಪಕವಾಗಿ ಅನುಷ್ಠಾನ ಆಗಬೇಕು. ಉದ್ಯೋಗಖಾತ್ರಿ ಯೋಜನೆಯಡಿ ಹೆಚ್ಚೆಚ್ಚು ಕಾಮಗಾರಿಗಳು ನಡೆಯಬೇಕು. ಚೆಲುವನಾರಾಯಣನ ದಿವ್ಯಕ್ಷೇತ್ರದ ಅಭಿವೃದ್ಧಿಯಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದರು.

ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಮಣಿ ಮುರುಗನ್, ಉಪಾಧ್ಯಕ್ಷರಾದ ಜಿ.ಕೆ.ಕುಮಾರ್, ಜಿಪಂ ಮಾಜಿ ಸದಸ್ಯ ಮಂಜುನಾಥ್, ಮಾಜಿ ಅಧ್ಯಕ್ಷರಾದ ಅವ್ವಗಂಗಾಧರ್, ಜಯಲಕ್ಷ್ಮಿ ಪುಟ್ಟರಾಜು, ಸೋಮಶೇಖರ್, ಮಾಜಿ ಸದಸ್ಯ ಸುಬ್ಬಣ್ಣ, ಕಾರ್ಯಕರ್ತರಾದ ನಿಂಗೇಗೌಡ, ಹರಿಧರ, ನರಸಿಂಹ, ಕಿರಣ್‌ಗೌಡ, ಪಾರ್ಥ, ಪುಳಿಯೋಗರೆ ರವಿ, ಎಂ.ಮಹೇಶ್ ಜಯರಾಮು, ಹಾಲು ಉತ್ಪಾದಕರ ಸಂಘದ ಸದಸ್ಯರಾದ ನಂದಕುಮಾರ್ ಬೆಟ್ಟಸ್ವಾಮಿ ಆನಂದಾಳ್ವಾರ್ ತಿರುಮಲೈ, ಈಶ ಮುರಳಿ, ಬಸವರಾಜು, ಬಿಜೆಪಿಯ ಮುರಳಿ, ಹಿರಿಯ ಮುಖಂಡ ನರಸಿಂಹೇಗೌಡ ಸೇರಿದಂತೆ ಗ್ರಾಪಂ ಸದಸ್ಯರು ಹಲವು ಜೆಡಿಎಸ್ ಮುಖಂಡರು ನಾಗರೀಕರು ಭಾಗಿಯಾಗಿದ್ದರು.