ಋತುಸ್ರಾವ ಆದಾಗ ಸ್ವಚ್ಛತೆಗೆ ಆದ್ಯತೆ ನೀಡಿ: ಡಾ.ಶಿವಕುಮಾರ್‌

| Published : May 29 2024, 12:55 AM IST

ಸಾರಾಂಶ

ಹದಿಹರೆಯದ ಹೆಣ್ಣುಮಕ್ಕಳಲ್ಲಿ ಋತುಸ್ರಾವ ಎನ್ನುವುದು ಸಹಜವಾದ ಪ್ರಕ್ರಿಯೆಯಾಗಿದೆ. ಋತುಸ್ರಾವ ಆದಾಗ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಸೋಂಕು ರೋಗಗಳಿಂದ ಸುರಕ್ಷಿತವಾಗಿರಬಹುದು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

- ಚನ್ನಗಿರಿಯಲ್ಲಿ ಋತುಸ್ರಾವ ನೈರ್ಮಲ್ಯ ನಿರ್ವಹಣೆ ದಿನ ಕಾರ್ಯಕ್ರಮ- - - ಕನ್ನಡಪ್ರಭ ವಾರ್ತೆ, ಚನ್ನಗಿರಿ

ಹದಿಹರೆಯದ ಹೆಣ್ಣುಮಕ್ಕಳಲ್ಲಿ ಋತುಸ್ರಾವ ಎನ್ನುವುದು ಸಹಜವಾದ ಪ್ರಕ್ರಿಯೆಯಾಗಿದೆ. ಋತುಸ್ರಾವ ಆದಾಗ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಸೋಂಕು ರೋಗಗಳಿಂದ ಸುರಕ್ಷಿತವಾಗಿರಬಹುದು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಶಿವಕುಮಾರ್ ಹೇಳಿದರು.

ಮಂಗಳವಾರ ಪಟ್ಟಣದ 22ನೇ ಅಂಗನವಾಡಿ ಕೇಂದ್ರದಲ್ಲಿ ಋತುಸ್ರಾವ ನೈರ್ಮಲ್ಯ ನಿರ್ವಹಣೆ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಾಲ್ಯಾವಸ್ಥೆಯಿಂದ ಹದಿಹರೆಯಕ್ಕೆ ಕಾಲಿಡುತ್ತಿದ್ದಂತೆಯೇ ಬಾಲಕರು ಹಾಗೂ ಬಾಲಕಿಯಲ್ಲಿ ದೈಹಿಕ ಬೆಳವಣಿಗೆಗಳಲ್ಲಿ ಬದಲಾವಣೆಗಳಾಗುತ್ತವೆ. ಈ ಬಗ್ಗೆ ಪೋಷಕರು ಸಕಾಲಕ್ಕೆ ಮಕ್ಕಳಿಗೆ ಮಾರ್ಗದರ್ಶನ ನೀಡಿ, ಆರೋಗ್ಯ ಕಾಪಾಡಬೇಕು ಎಂದರು.

ಮಹಿಳಾ ಕಸೂತಿ ತಜ್ಞ ವೈದ್ಯೆ ಡಾ.ಅಮೂಲ್ಯ ಮಾತನಾಡಿ, ಹದಿಹರೆಯದ ಹೆಣ್ಣುಮಕ್ಕಳು ಋತುಸ್ರಾವ ಆದಾಗ ಪ್ಯಾಡ್ ಗಳನ್ನು ಉಪಯೋಗಿಸಬೇಕು. ಬಳಸಿದ ಈ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ಡಸ್ಟ್ ಬಿನ್‌ಗಳಿಗೆ ಹಾಕಿ, ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಎಂದು ಹದಿಹರೆಯದವರು ಅನುಸರಿಬೇಕಾದ ಆರೋಗ್ಯ ಕ್ರಮಗಳ ಬಗ್ಗೆ ವಿವರಿಸಿದರು.

ಮುಖ್ಯ ಅತಿಥಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ, ಮೇಲ್ವಿಚಾರಕರಾದ ಸುನೀತಾ ದೊಡ್ಡಮನಿ, ಹಿರಿಯ ಆರೋಗ್ಯ ನಿರೀಕ್ಷಕ ಲೋಕೇಶ್, ಹಿರಿಯ ಆರೋಗ್ಯ ಸಹಾಯಕರಾದ ಕವಿತಾ, ಉಷಾ, ಸುಧಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಹದಿಹರೆಯದ ಹೆಣ್ಣುಮಕ್ಕಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಮಲಮ್ಮ ಪ್ರಾರ್ಥಿಸಿ, ಸಿ.ಭಾರತಿ ಸ್ವಾಗತಿಸಿದರು. ಶೋಭಾರಾಣಿ ನಿರೂಪಿಸಿ, ಕೆ.ಆರ್.ಪುಪ್ಪಾವತಿ ವಂದಿಸಿದರು.

- - - -28ಕೆಸಿಎನ್‌ಜಿ2:

ಚನ್ನಗಿರಿ 22ನೇ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಋತುಸ್ರಾವ ನೈರ್ಮಲ್ಯ ನಿರ್ವಹಣೆ ದಿನ ಕಾರ್ಯಕ್ರಮವನ್ನು ತಾಲೂಕು ವೈದ್ಯಾಧಿಕಾರಿ ಡಾ.ಶಿವಕುಮಾರ್ ಉದ್ಘಾಟಿಸಿದರು.