ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಿ: ಸಿಇಒ

| Published : Apr 01 2024, 12:50 AM IST

ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಿ: ಸಿಇಒ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದಲ್ಲಿ, ಕೂಡಲೆ ನೀರು ಪೂರೈಕೆ ಮಾಡಬೇಕು. ಇದನ್ನು ಪ್ರಥಮಾದ್ಯತೆಯನ್ನಾಗಿ ಪರಿಗಣಿಸಬೇಕು ಎಂದು ಜಿಪಂ ಸಿಇಓ ಭಂವರ್ ಸಿಂಗ್ ಮೀನಾ ಹೇಳಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಜಿಲ್ಲೆಯಲ್ಲಿ ಭೀಕರ ಬರಗಾಲ ಇರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದಲ್ಲಿ, ಕೂಡಲೆ ನೀರು ಪೂರೈಕೆ ಮಾಡಬೇಕು. ಇದನ್ನು ಪ್ರಥಮಾದ್ಯತೆಯನ್ನಾಗಿ ಪರಿಗಣಿಸಬೇಕು ಎಂದು ಜಿಪಂ ಸಿಇಓ ಭಂವರ್ ಸಿಂಗ್ ಮೀನಾ ಹೇಳಿದರು.

ಬರಗಾಲ ಹಾಗೂ ಕುಡಿವ ನೀರಿನ ಸಮಸ್ಯೆ ಕುರಿತು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತತರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಎಲ್ಲಾ ತಾಪಂ ಕಾರ್ಯನಿವಾಹಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಬರಗಾಲ ಪರಿಹಾರ ಕಾಮಗಾರಿಗಳ ನಿರ್ವಹಣೆಯಲ್ಲಿ ವಿಫಲರಾದಲ್ಲಿ, ಸಂಬಂಧಿಸಿದ ಅಧಿಕಾರಿಗಳನ್ನೆ ನೇರ ಹೊಣೆಗಾರರನ್ನಾಗಿ ಮಾಡಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಇದೇ ವೇಳೆ ಅಧಿಕಾರಿಗಳಿಗೆ ಸಿಇಓ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಅಬ್ದುಲ್ ಅಜೀಮ್, ಸೇರಿ ಯೋಜನಾ ನಿರ್ದೇಶಕ ಚಳಗೇರಿ ಹಾಗೂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಮಧುಮತಿ ಸೇರಿ ಇತರೆ ಅಧಿಕಾರಿಗಳಿದ್ದರು.