ಭವ್ಯ ಭಾರತ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಆದ್ಯತೆ ನೀಡಿ: ಶಾಸಕ ಯು.ಬಿ. ಬಣಕಾರ

| Published : Aug 16 2025, 12:00 AM IST

ಭವ್ಯ ಭಾರತ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಆದ್ಯತೆ ನೀಡಿ: ಶಾಸಕ ಯು.ಬಿ. ಬಣಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಭವ್ಯ ಭಾರತ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುಣಮಟ್ಟದ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಸವಲತ್ತನ್ನು ಬಳಸಿಕೊಂಡು ವಿದ್ಯಾರ್ಥಿಜೀವನವನ್ನು ಸಾರ್ಥಕತೆ ಪಡಿಸಿಕೊಳ್ಳಬೇಕು.

ರಟ್ಟೀಹಳ್ಳಿ: ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಹೋರಾಟಗಾರರು ತಮ್ಮ ಪ್ರಾಣವನ್ನೇ ಅರ್ಪಣೆ ಮಾಡಿದ್ದು, ಅವರ ಉದ್ದೇಶ ಭಾರತವನ್ನು ಭವ್ಯ ಭಾರತ ನಿರ್ಮಾಣ ಮಾಡುವುದಾಗಿತ್ತು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.ಪಟ್ಟಣದ ಮಿನಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾತನಾಡಿ, ಭವ್ಯ ಭಾರತ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುಣಮಟ್ಟದ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಸವಲತ್ತನ್ನು ಬಳಸಿಕೊಂಡು ವಿದ್ಯಾರ್ಥಿಜೀವನವನ್ನು ಸಾರ್ಥಕತೆ ಪಡಿಸಿಕೊಳ್ಳಬೇಕು ಎಂದರು.

ತಹಸೀಲ್ದಾರ್ ಶ್ವೇತಾ ಅಮರಾವತಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಸಿಗಲು ನಮ್ಮ ಜಿಲ್ಲೆಯವರಾದ ಮೈಲಾರ ಮಹಾದೇವ ಸೇರಿದಂತೆ ಅನೇಕ ಹೋರಾಟಗಾರರು ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ಸ್ವಾತಂತ್ರ್ಯವನ್ನು ಯಾರೋ ಭಿಕ್ಷೆ ಹಾಕಿದ್ದಲ್ಲ. ಅದನ್ನು ಹೋರಾಟದ ಮೂಲಕ, ಲಕ್ಷಾಂತರ ಹೋರಾಟಗಾರರು ತಮ್ಮ ಪ್ರಾಣವನ್ನೆ ಅರ್ಪಣೆ ಮಾಡಿದ ಪರಿಣಾಮ ಬ್ರಿಟಿಷರಿಂದ ಮುಕ್ತವಾಗಲು ಸಾಧ್ಯವಾಯಿತು ಎಂದರು.

ತಾಲೂಕು ಪಂಚಾಯಿತಿ ಇಒ ರವಿಕುಮಾರ, ಸಿಪಿಐ ಬಸವರಾಜ ಪಿ.ಎಸ್., ಪಿಎಸ್‍ಐ ರಮೇಶ, ಬಿಇಒ ಪ್ರಸನ್ನಕುಮಾರ, ಎನ್. ಸುರೇಶಕುಮಾರ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ ಗುಬ್ಬಿ, ಎಸ್ಡಿಎಂಸಿ ಅಧ್ಯಕ್ಷ ಮಂಜು ಅಸ್ವಾಲಿ, ರಮೇಶ ತಳವಾರ ಮುಂತಾದವರು ಇದ್ದರು.

ಜಾನಪದ ವಿಶ್ವವಿದ್ಯಾಲಯದಲ್ಲಿ ಧ್ವಜಾರೋಹಣ

ಶಿಗ್ಗಾಂವಿ: ದೇಶ ಬ್ರಿಟಿಷರಿಂದ ಮುಕ್ತವಾಗಲು ಹಲವು ದೇಶಭಕ್ತರ ತ್ಯಾಗ, ಬಲಿದಾನವಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ತಿಳಿಸಿದರು.ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ೭೯ನೇ ಸ್ವಾತಂತ್ರ‍್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಅಸಹಕಾರ ಚಳವಳಿ, ದಂಡಿ ಸತ್ಯಾಗ್ರಹ ಸೇರಿದಂತೆ ಹಲವಾರು ಬಗೆಯ ಹೋರಾಟಗಳನ್ನು ಕೈಗೊಳ್ಳಲಾಗಿತ್ತು. ಆ ವೇಳೆ ದೇಶಕ್ಕಾಗಿ ಹಲವರು ಹುತಾತ್ಮರಾದರು ಎಂದು ಸ್ಮರಿಸಿದರು.ಈ ಸಂದರ್ಭದಲ್ಲಿ ಸಹಾಯಕ ಕುಲಸಚಿವ ಶಹಜಹಾನ್ ಮುದಕವಿ, ಅಧೀಕ್ಷಕ ಬಸವರಾಜ ಜವಳಗಟ್ಟಿ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ಗಿರೇಗೌಡ ಅರಳಿಹಳ್ಳಿ, ಸಹಾಯಕ ಪ್ರಾಧ್ಯಾಪಕರಾದ ಡಾ. ವೆಂಕನಗೌಡ ಪಾಟೀಲ, ಡಾ. ವಿಜಯಲಕ್ಷ್ಮೀ ಗೇಟಿಯವರ, ಡಾ. ಚಂದ್ರಪ್ಪ ಸೊಬಟಿ, ಡಾ. ಬಸವರಾಜ ಸಿ., ಡಾ. ಅರುಣಾಬಾಬು ಅಂಗಡಿ, ಹಣಮಂತರಾಯಗೌಡ, ಡಾ. ರಾಜಶೇಖರ ಸಿ.ಡಿ., ಡಾ. ಅಭಿಲಾಷ ಎಚ್.ಕೆ., ಅಭಿನಯ ಎಚ್., ಡಾ. ರಜಿಯಾ ನದಾಫ, ಸಹಾಯಕ ಗ್ರಂಥಪಾಲಕ ಶಂಕರಗೌಡ ಮಾಲೀಪಾಟೀಲ, ಸಹಾಯಕ ಸಂಶೋಧನಾಧಿಕಾರಿಗಳಾದ ಡಾ. ಮಲ್ಲಿಕಾರ್ಜುನ ಮಾನ್ಪಡೆ, ಡಾ. ನಾಯಕರ ಹುಲಗಪ್ಪ, ಡಾ. ಬಸವರಾಜ ಎಸ್.ಜಿ., ದಾಖಲೀಕರಣಾಧಿಕಾರಿ ಡಾ. ಗೇಮಸಿಂಗ್ ರಾಠೋಡ ಇತರರು ಇದ್ದರು.