ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಠ್ಯ ಚಟುವಟಿಕೆಗಳಿಗೆ ನೀಡುವಷ್ಟೇ ಪ್ರಾಧಾನ್ಯತೆಯನ್ನು ಶಾಲೆಗಳು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕು ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಕರೆ ನೀಡಿದರು.ಪಟ್ಟಣದ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿಜಿಎಸ್ ಎಜುಕೇಷನ್ ಸೆಂಟರ್ ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆಯಲ್ಲಿ ಭಾಗವಹಿಸಿ ಮಾತನಾಡಿ, ಪಠ್ಯ ಚಟುವಟಿಕೆಗಳು ಅಂಕಗಳಿಕೆಗೆ ಸೀಮಿತವಾಗಿ ನಡೆಯುತ್ತಿವೆ. ಆದರೆ, ಪಠ್ಯೇತರ ಚಟುವಟಿಕೆಗಳು ಮಕ್ಕಳ ಸಮಗ್ರ ವಿಕಸನಕ್ಕೆ ನಾಂದಿ ಹಾಕುತ್ತವೆ ಎಂದರು.
ಪಠ್ಯ ಚಟುವಟಿಕೆಗಳನ್ನು ಮೀರಿ ವ್ಯವಹಾರಿಕ ಕೌಶಲ್ಯವನ್ನು ಸಂತೆಯಂತಯ ಪಠ್ಯೇತರ ಚಟುವಟಿಕೆಗಳು ಮಕ್ಕಳಿಗೆ ಕಲಿಸಿ ಕೊಡುತ್ತವೆ. ವಿವಿಧ ವಸ್ತುಗಳನ್ನು ಮಾರುತ್ತಿರುವ ಸಂತೆಗೆ ಸಾರ್ವಜನಿಕರೂ ಆಗಮಿಸಿ ತಮಗೆ ಬೇಕಾದ ವಸ್ತುಗಳನ್ನು ಚೌಕಾಸಿ ಮಾಡಿ ಕೊಂಡುಕೊಳ್ಳುವ ಮೂಲಕ ಮಕ್ಕಳ ವ್ಯವಹಾರಿಕ ಪ್ರಜ್ಞೆಯನ್ನು ಉತ್ತೇಜಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ವೇಳೆ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣೇಗೌಡ, ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಬೆಡದಹಳ್ಳಿ ಪಂಚಭೂತೇಶ್ವರ ಸುಕ್ಷೇತ್ರ ಮಠದ ಪೀಠಾಧಿಪತಿ ರುದ್ರಮುನಿ ಸ್ವಾಮೀಜಿ, ಜಿ.ಪಂ ಮಾಜಿ ಉಪಾಧ್ಯಕ್ಷ ಬೇಲದಕೆರೆ ಪಾಪೇಗೌಡ, ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ನಂಜಪ್ಪ, ಪುರಸಭಾ ಸದಸ್ಯ ಕೆ.ಆರ್.ರವೀಂದ್ರಬಾಬು, ತಾಲೂಕು ಕಸಾಪ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣತಿಲಕ್, ಕೆ.ಆರ್.ನೀಲಕಂಠ, ಕುವೆಂಪು ಗೆಳೆಯರ ಬಳಗದ ಸಂಸ್ಥಾಪಕ ಅಧ್ಯಕ್ಷ ಕೆಬಿಸಿ ಮಂಜುನಾಥ್, ಕೋರಮಂಡಲ್ ಸಕ್ಕರೆ ಕಾರ್ಖಾನೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಟ್ಟಂಗೆರೆ ನಾಗೇಶ್ ಸೇರಿದಂತೆ ಹಲವರು ಿದ್ದರು.