ಹೊಸಕೋಟೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಹಲ ಯೋಜನೆಗಳನ್ನು ರೂಪಿಸಿದ್ದು, ಶೈಕ್ಷಣಿಕ ಅಭಿವೃದ್ಧಿ ಜತೆಗೆ ಶಿಕ್ಷಕರು ದಾಖಲಾತಿ ಹೆಚ್ಚಳಕ್ಕೆ ಸಹಕರಿಸಬೇಕು ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕ ರಾಜಗೋಪಾಲ್ ತಿಳಿಸಿದರು.

ಹೊಸಕೋಟೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಹಲ ಯೋಜನೆಗಳನ್ನು ರೂಪಿಸಿದ್ದು, ಶೈಕ್ಷಣಿಕ ಅಭಿವೃದ್ಧಿ ಜತೆಗೆ ಶಿಕ್ಷಕರು ದಾಖಲಾತಿ ಹೆಚ್ಚಳಕ್ಕೆ ಸಹಕರಿಸಬೇಕು ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕ ರಾಜಗೋಪಾಲ್ ತಿಳಿಸಿದರು.

ತಾಲೂಕಿನ ದೊಡ್ಡಹುಲ್ಲೂರು ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳ ಸಂಖ್ಯೆ ಗಣನೀಯ ಏರಿಕೆ ಆಗುತ್ತಿರುವ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ಬಂದಿದ್ದು, ಸರ್ಕಾರ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಉತ್ತಮ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟು ಬಿಸಿಯೂಟ, ಪಠ್ಯಪುಸ್ತಕ, ಶಿಕ್ಷಕರಿಗೆ ಅಗತ್ಯತರಬೇತಿ ನೀಡಿ ಗುಣಮಟ್ಟದ ಶಿಕ್ಷಣಕ್ಕೂ ಆದ್ಯತೆ ನೀಡುತ್ತಿದೆ. ಆದ್ದರಿಂದ ದಾಖಲಾತಿ ಹೆಚ್ಚಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸಪ್ಪ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕಾ ಗುಣಮಟ್ಟ ಸುಧಾರಿಸುವ ದೃಷ್ಟಿಯಿಂದ ಮಕ್ಕಳಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಕ್ಲಸ್ಟರ್ ಮಟ್ಟದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕಲಿಕಾ ಹಬ್ಬದಲ್ಲಿ ತಮ್ಮ ಪ್ರತಿಭೆ ಅನಾವರಣ ಮಾಡುವುದು ಶೈಕ್ಷಣಿಕ ಪ್ರಗತಿಗೂ ಪೂರಕ ಎಂದರು.

ಈ ವೇಳೆ ತಾಲೂಕು ಸಂಘದ ಖಜಾಂಚಿ ಅಶ್ವತಮ್ಮ, ನಿರ್ದೇಶಕ ಪ್ರಕಾಶ್, ಮಾಜಿ ತಾಪಂ ಅಧ್ಯಕ್ಷ ರಾಮಾಂಜಿನಪ್ಪ, ಬಿಆರ್‌ಸಿ ಸತೀಶ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಮಹೇಶ್, ಬಿಆರ್‌ಪಿ ನಟರಾಜ್, ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ, ದೊಡ್ಡನಲ್ಲಾಳ ಸಿಆರ್‌ಪಿ ಮಂಜುನಾಥ್ ಹಾಜರಿದ್ದರು.

ಫೋಟೋ: 13 ಹೆಚ್‌ಎಸ್‌ಕೆ 2

ಹೊಸಕೋಟೆ ತಾಲೂಕಿನ ದೊಡ್ಡಹುಲ್ಲೂರು ಸರ್ಕಾರಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬವನ್ನು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕ ರಾಜಗೋಪಾಲ್ ಉದ್ಘಾಟಿಸಿದರು.