ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಎ .ಆರ್. ಕೃಷ್ಣಮೂರ್ತಿ

| Published : Jul 15 2025, 11:45 PM IST

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಎ .ಆರ್. ಕೃಷ್ಣಮೂರ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ನಾನು ಶಾಸಕನಾದ ಎರಡು ವರ್ಷದಲ್ಲಿ ಸಾಕಷ್ಟು ಅನುದಾನ ತಂದು ಶ್ರಮಿಸಿದ್ದೇನೆ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಜನಪರ ಸರ್ಕಾರವಾಗಿದ್ದು ಹಲವಾರು ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಎ. ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ..

ತಿಮ್ಮರಾಜಿಪುರ, ಹಿತ್ತದೊಡ್ಡಿ ಸೇರಿ ವಿವಿಧೆಡೆ ₹1.20 ಕೋಟಿ ಕಾಮಗಾರಿಗೆ ಚಾಲನೆ

ಕನ್ನಡಪ್ರಭ ವಾರ್ತೆ, ಕೊಳ್ಳೇಗಾಲ

ನಾನು ಶಾಸಕನಾದ ಎರಡು ವರ್ಷದಲ್ಲಿ ಸಾಕಷ್ಟು ಅನುದಾನ ತಂದು ಶ್ರಮಿಸಿದ್ದೇನೆ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಜನಪರ ಸರ್ಕಾರವಾಗಿದ್ದು ಹಲವಾರು ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಎ. ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ..

ತಾಲೂಕಿನ ತಿಮ್ಮರಾಜಿಪುರ, ಸಿದ್ದಯ್ಯನಪುರ ಸೇರಿದಂತೆ ವಿವಿಧೆಡೆ 1 ಕೋಟಿ 22 ಲಕ್ಷ ರು.ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಎಲ್ಲಾ ಧರ್ಮಗಳ ಎಲ್ಲಾ ವರ್ಗಗಳ ಸಮುದಾಯಕ್ಕೂ ಅನುದಾನ ಹಂಚಿಕೆ ಮಾಡಿದ್ದೇನೆ. ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ಅರುಣೋದಯ ಚರ್ಚ್ ಸಮುದಾಯ ಭವನ ನಿರ್ಮಾಣದ ಮುಂದುವರೆದ ಕಾಮಗಾರಿ, ಗ್ರಾಮದ ಹೊಸ ಬಡಾವಣೆಯಲ್ಲಿ ₹6 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ, ₹10 ಲಕ್ಷ ಅನುದಾನದಡಿ ಕುರುಬರ ಬೀದಿಯಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಲಕ್ಕರಸನಪಾಳ್ಯ ಗ್ರಾಮದಲ್ಲಿ ₹20 ಲಕ್ಷ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿ, ತಿಮ್ಮರಾಜೀಪುರ ಗ್ರಾಮದಲ್ಲಿ ₹10 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ ಹಾಗೂ ₹20 ಲಕ್ಷ ವೆಚ್ಚದಲ್ಲಿ ಬಸವ ಭವನದ ಮುಂದುವರಿದ ಕಾಮಗಾರಿ ಮತ್ತು ಹಿತ್ತಲ ದೊಡ್ಡಿ ಗ್ರಾಮದಲ್ಲಿ ₹6 ಲಕ್ಷ ವೆಚ್ಚದ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಕಾಮಗಾರಿ ಕೈಗೊಳ್ಳಬೇಕು. ತಿಮ್ಮರಾಜಿಪುರ ಗ್ರಾಪಂನಲ್ಲಿ ₹4.20 ಕೋಟಿ ಅನುದಾನದಲ್ಲಿ ಕಾಮಗಾರಿ ಜರುಗುತ್ತಿದೆ ಎಂದರು.ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಮೋಳೆ, ತಿಮ್ಮರಾಜೀಪುರಗ್ರಾ.ಪಂ ಅಧ್ಯಕ್ಷೆ ರಶ್ಮಿ, ಉಪಾಧ್ಯಕ್ಷೆ ಸಹನಾಪ್ರೀಯ, ಸಿದ್ದಯ್ಯನಪುರ ಗ್ರಾಮ ಅಧ್ಯಕ್ಷೆ ಶಾಂತಮ್ಮ, ತಿಮ್ಮರಾಜೀಪುರ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜು, ಸದಸ್ಯ, ಪಿಡಿಒ ಶಿವಮೂರ್ತಿ ಇನ್ನಿತರಿದ್ದರು.