ಸಾರಾಂಶ
ಉಣಕಲ್ ಕೆರೆಯು 200 ಎಕರೆ ಪ್ರದೇಶದಲ್ಲಿ ಹರಡಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದೆ. ಇಲ್ಲಿನ ಗಾರ್ಡನ್ ಸಹ ಸುತ್ತಮುತ್ತಲಿನ ಜನರಿಗೆ ನೆಚ್ಚಿನ ಪ್ರವಾಸಿ ತಾಣವಾಗಿ ಪ್ರಸಿದ್ಧಿ ಪಡೆಯುತ್ತಿದೆ. ಆದರೆ, ಕೆರೆಗೆ ಸುತ್ತಮುತ್ತಲಿನ ಪ್ರದೇಶದ ಚರಂಡಿ ನೀರು ಸೇರಿ ಸಂಪೂರ್ಣ ಕಲುಷಿತಗೊಂಡಿದೆ.
ಹುಬ್ಬಳ್ಳಿ:
ಉಣಕಲ್ಲ ಕೆರೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಹಾಗೂ ಕೆರೆಯಲ್ಲಿ ಸಾವನ್ನಪ್ಪುತ್ತಿರುವ ಮೀನುಗಳ ರಕ್ಷಣೆಗೆ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಿ ಜೈ ಭೀಮ್ ಅಖಿಲ ಭಾರತ ದಲಿತ ಹೋರಾಟ ಸಮಿತಿಯಿಂದ ತಹಸೀಲ್ದಾರ್ ಹಾಗೂ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಮೌಲಾಸಾಹೇಬ ನದಾಫ್ ಮಾತನಾಡಿ, ಉಣಕಲ್ ಕೆರೆಯು 200 ಎಕರೆ ಪ್ರದೇಶದಲ್ಲಿ ಹರಡಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದೆ. ಇಲ್ಲಿನ ಗಾರ್ಡನ್ ಸಹ ಸುತ್ತಮುತ್ತಲಿನ ಜನರಿಗೆ ನೆಚ್ಚಿನ ಪ್ರವಾಸಿ ತಾಣವಾಗಿ ಪ್ರಸಿದ್ಧಿ ಪಡೆಯುತ್ತಿದೆ. ಆದರೆ, ಕೆರೆಗೆ ಸುತ್ತಮುತ್ತಲಿನ ಪ್ರದೇಶದ ಚರಂಡಿ ನೀರು ಸೇರಿ ಸಂಪೂರ್ಣ ಕಲುಷಿತಗೊಂಡಿದೆ. ಇದರಿಂದಾಗಿ ಇದರಲ್ಲಿರುವ ನೂರಾರು ಮೀನುಗಳು ಸಾವನ್ನಪ್ಪುತ್ತಿವೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲವು ಮೀನುಗಾರರು ಸತ್ತ ಮೀನುಗಳನ್ನೇ ಮಾರಾಟ ಮಾಡುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೆರೆಗೆ ಚರಂಡಿ ನೀರು ಸೇರದಂತೆ ಕ್ರಮಕೈಗೊಳ್ಳಬೇಕು. ನಿತ್ಯವೂ ಮೀನುಗಳ ಮಾರಣ ಹೋಮ ನಡೆಯುತ್ತಿದ್ದು, ಇದರ ತಡೆಗೆ ಬೇಕಾದ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ಈ ವೇಳೆ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಇಸ್ಮಾಯಿಲ್ ಸುಂಕದ, ಜಿಲ್ಲಾಧ್ಯಕ್ಷ ಕಲ್ಲಪ್ಪ ಚವ್ಹಾಣ, ಉಣಕಲ್ಲ ಗ್ರಾಮೀಣ ಭಾಗದ ಅಧ್ಯಕ್ಷ ಮೆಹಬೂಬಅಲಿ ಗೋಕುಲ್, ಉಪಾಧ್ಯಕ್ಷ ಪರಶುರಾಮ ಕ್ಷತ್ರಿಯವರ, ರಾಜೇಸಾಬ್ ಮಣ್ಣೂರ, ಅಲ್ಲಾಭಕ್ಷ ಗೋಕುಲ್, ಮೈನುದ್ದೀನ್ ನದಾಫ್, ದಾವಲಸಾಬ್ ಗೋಕುಲ್, ಕಲಂದರ್ ಸುಂಕದ ಸೇರಿದಂತೆ ಹಲವರಿದ್ದರು.