ಬಾಲ ಮಂದಿರದ ಮಕ್ಕಳ ಆರೊಗ್ಯ, ಶಿಕ್ಕಣಕ್ಕೆ ಆದ್ಯತೆ ನೀಡಿ

| Published : Jun 15 2024, 01:11 AM IST

ಸಾರಾಂಶ

ಜಿಲ್ಲೆಯಲ್ಲಿನ ಬಾಲಕರ, ಬಾಲಕಿಯರ ಬಾಲ ಮಂದಿರದಲ್ಲಿ ಆಶ್ರಯ ಪಡೆಯುತ್ತಿರುವ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಈ ಕುರಿತು ಪರಿಶೀಲಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಅಪರ್ಣಾ.ಎಂ.ಕೊಳ್ಳಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲೆಯಲ್ಲಿನ ಬಾಲಕರ, ಬಾಲಕಿಯರ ಬಾಲ ಮಂದಿರದಲ್ಲಿ ಆಶ್ರಯ ಪಡೆಯುತ್ತಿರುವ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಈ ಕುರಿತು ಪರಿಶೀಲಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಅಪರ್ಣಾ.ಎಂ.ಕೊಳ್ಳಾ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದತ್ತು ಸ್ವೀಕಾರ ಕಾರ್ಯದಲ್ಲಿ ಜಿಲ್ಲೆಯು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಈ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.ಬಾಲ್ಯ ವಿವಾಹ ತಡೆಗಟ್ಟಲು ಅಧಿಕಾರಿಗಳು ಮುಂದಾಗಬೇಕು. ಬಾಲ್ಯ ವಿವಾಹ ತಡೆ ಕಾಯ್ದೆಯಲ್ಲಿ ಹತ್ತಹ ಇಲಾಖೆಗಳು ಭಾಗವಹಿಸಿತ್ತಿದ್ದರು. ಬಾಲ್ಯ ವಿವಾಹ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಬಾಲ್ಯ ವಿವಾಹ ಎಂಬ ಅನಿಷ್ಟ ಪದ್ಧತಿ ತಡೆಗಟ್ಟಲು ಸೂಚಿಸಿದರು. ಬಾಲ್ಯ ವಿವಾಹ ತಡೆಗಟ್ಟಲು ಕಾರ್ಯನಿರ್ವಹಿಸುತ್ತಿರುವ ಹತ್ತು ಇಲಾಖೆಗಳಿಗೆ ಪ್ರತಿ ತಿಂಗಳಿಗೊಮ್ಮೆ ಒಂದು ಇಲಾಖೆಯನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಬೇಕು. ಇದರಿಂದಾಗಿ ಎಲ್ಲ ಇಲಾಖೆಗಳು ಬಾಲ್ಯ ವಿವಾಹ ತಡೆಗಟ್ಟಲು ಭಾಗಿಯಾಗುವುದರಿಂದ ಈ ಪದ್ಧತಿಯನ್ನು ನಿಯಂತ್ರಿಸಬಹುದಾಗಿದೆ ಎಂದರು. ವಿವಿಧ ಇಲಾಖೆಗಳ ವಸತಿ ನಿಲಯಕ್ಕೆ ಹಾಜರಾದ ವಿದ್ಯಾರ್ಥಿಗಳ ಮಾಹಿತಿ ಪಡೆದು ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನಿಗಾವಹಿಸಬೇಕು. ಕೆಲ ವಸತಿ ನಿಲಯಗಳಲ್ಲಿ ವಾರ್ಡ್‌ನಗಳು ಇಲ್ಲದೇ ಇರುವದು ಕಂಡು ಬಂದಿರುತ್ತದೆ. ಅಲ್ಲದೇ ವಸತಿ ನಿಲಯಗಳಲ್ಲಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ನಿಯಮಿತವಾಗಿ ಎಲ್ಲ ವಸತಿ ನಿಲಯಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಬೇಕು. ಕೆಲ ವಸತಿ ನಿಲಯಗಳಲ್ಲಿ ಹಾಜರಾತಿಯಲ್ಲಿದ್ದಂತಹ ವಿಧ್ಯಾರ್ಥಿಗಳ ಸಂಖ್ಯೆಗೂ ಹಾಜರಿದ್ದ ವಿದ್ಯಾರ್ಥಿಗಳ ಸಂಖ್ಯೆಗೂ ವ್ಯತ್ಯಾಸ ಕಂಡು ಬಂದಿರುತ್ತದೆ. ಕೆಲ ವಸತಿ ನಿಲಯಗಳು ಅವ್ಯವಸ್ಥೆಗಳಿಂದ ಕೂಡಿದ್ದು, ಈ ಕುರಿತು ಗಮನ ಹರಿಸಬೇಕು. ಪ್ರತಿ ವಸತಿ ನಿಲಯ ಹಾಗೂ ಶಾಲೆಗಳಲ್ಲಿ ನೀಡಲಾಗುತ್ತಿರುವ ಊಟವು ಗುಣಮಟ್ಟದಿಂದ ಕೂಡಿರುವಂತೆ ನಿಗಾವಹಿಸಲು ತಿಳಿಸಿದರು.ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಮಕ್ಕಳ ಗ್ರಾಮ ಸಭೆಗಳನ್ನು ಆಯೋಜಿಸಿ ವರದಿ ಸಲ್ಲಿಸಬೇಕು. ಗ್ರಾಮ ಸಭೆಯಿಂದ ಮಕ್ಕಳ ಸಮಸ್ಯೆಗಳನ್ನು ಅರಿತು ಪರಿಹಾರ ಕಂಡಿಕೊಳ್ಳಬಹುದಾಗಿದೆ. ಪ್ರತಿ ಪಂಚಾಯತಿಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಗಳನ್ನು ಪ್ರಚುರಪಡಿಸಬೇಕು ಎಂದು ತಿಳಿಸಿದರು.ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಟಾಸ್ಕ್‌ ಪೊರ್ಸ್‌ಗಳನ್ನು ರಚಿಸಿ ಈ ಕುರಿತು ಸಭೆ ಜರುಗಿಸಲು ನಿರ್ದೆಶನ ನೀಡಲಾಗಿರುತ್ತದೆ. ಬಾಲ್ಯ ವಿವಾಹ ತಡಗೆ ನೇಮಿಸಲಾದ ಇಲಾಖೆಗಳಿಗೆ ಪ್ರತಿ ತಿಂಗಳಿಗೊಮ್ಮ ಒಂದು ಇಲಾಖೆಯಂತೆ ನೋಡೆಲ್ ಅಧಿಕಾರಿಗಳನ್ನಾಗಿ ಮಾಡಲು ಆದೇಶ ಹೊರಡಿಸಲಾಗುವುದು ಎಂದರು.ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪ್ರತಿ ವಸತಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಬೇಕು. ಪ್ರತಿ ವಸತಿ ನಿಲಯಗಳಲ್ಲಿ ವಿಧ್ಯಾರ್ಥಿಗಳಿಗೆ ಉತ್ತಮ, ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು. ಪ್ರತಿ ವಸತಿ ನಿಲಯಗಳಿಗೆ ವಾರ್ಡನಗಳು ಕಡ್ಡಾಯವಾಗಿ ಇರುವಂತೆ ನಿಗಾ ವಹಿಸಲು ತಿಳಿಸಿದರು. ಒಟ್ಟಾರೆಯಾಗಿ ಮಿಂದಜನ ದಿನಗಳಲ್ಲಿ ಯಾವುದೇ ಲೋಪಗಳು ಆಗದಂತೆ ಬಿಗಾವಹಿಸಲು ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಮುರಳಿ ಮೋಹನ್ ರೆಡ್ಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.